Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿವ್ಯಾ ಉರುಡುಗ-ಶಿವರಾಮ್ ನಟನೆ ಹೊಸ ಧಾರವಾಹಿ ನಿನಗಾಗಿ

     ಕಲರ್ಸ್ ಕನ್ನಡ ವಾಹಿನಿ ಇದೀಗ ಮತ್ತೊಂದು ಹೊಸ ಕಥೆ ಮೂಲಕ ಕಿರುತೆರೆ ಪ್ರೇಕ್ಷಕರ ಎದುರು ಬರ್ತಿದೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ 'ನಿನನಾಗಿ' ಇದೇ 27ನೇ ತಾರೀಖಿನಿಂದ ಶುರುವಾಗುತ್ತಿದೆ.


     ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಹಿನ್ನೆಲೆಯಲ್ಲಿ ಇಡೀ ತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿತು.


     ಬೆಂಗಳೂರಿನ ಅಕ್ಷಯ್ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ನಿರ್ದೇಶಕ ಸಂಪಥ್ವಿ ಮಾತನಾಡಿ "ತುಂಬಾ ಎಕ್ಸೈಟ್ ಆಗಿದ್ದೇನೆ. ಯಾಕೆಂದರೆ ಹೆಮ್ಮೆಯಿಂದ ಹೇಳುತ್ತೇನೆ.‌ ಒಂದೊಳ್ಳೆ ಪ್ರಾಜೆಕ್ಟ್ ತೆಗೆದುಕೊಂಡು ಬಂದಿದ್ದೇನೆ.


'ನಿನಗಾಗಿ' ಶೋ ಬಂದ‌ ಮೇಲೆ ತುಂಬಾ ಸ್ಕೋರ್ ಮಾಡುತ್ತದೆ. ಯಾಕೆಂದರೆ ನನ್ನ ಬೆಂಬಲವಾಗಿ ನಿಂತಿರುವವರು ಜೈ ಮಾತಾ ಕಂಬೈನ್ಸ್ ನ ಅಶ್ವಿನಿ‌ ಮೇಡಂ, ಇಡೀ‌ ಕಲರ್ಸ್ ತಂಡ, ಪ್ರತಿಯೊಬ್ಬರಿಗೂ ಸಪೋರ್ಟಿವ್ ಆಗಿದ್ದು ಈ ಪ್ರಾಜೆಕ್ಟ್ ಮಾಡಿಸಿದ್ದಾರೆ.


ಈ ಪ್ರಾಜೆಕ್ಟ್ ಕಲರ್ಸ್ ಗೆ ಗೆಲುವು ತಂದುಕೊಡುತ್ತದೆ. ನಾಯಕ ಒಂದು ಪಡೆಯಾದರೆ, ನಾಯಕಿ ಕೂಡ ಒಂದು ಪಡೆ. ಇವರೆಲ್ಲಾ ಬಲ ತಂದುಕೊಡುತ್ತಿದ್ದಾರೆ. ಪ್ರೋವೋ ನೋಡಿ ಇಷ್ಟಪಟ್ಟಿದ್ದೀರ. ನಾನು ಈ ಹಿಂದೆ 'ನಮ್ಮನೆ ಯುವರಾಣಿ' ಸೀರಿಯಲ್ ಮಾಡಿದ್ದೇನೆ. ಈ ಬಾರಿ ಒಂದು ಹೊಸ ಕಥೆ ಹೇಳಲು ಬರುತ್ತಿದ್ದೇವೆ" ಎಂದರು.


    ನಾಯಕ ಋತ್ವಿಕ್ ಮಠದ್ "ಶಿವರಾಮ್ ಮಾಸ್‌ನಲ್ಲಿ‌ ನೋಡಿದ್ದೀರಾ. ಆದರೆ ಆ ಮಾಸ್ ಜೀವನ್‌ನಲ್ಲಿ ಇರುವುದಿಲ್ಲ. ತುಂಬಾ ಸರಳ ವ್ಯಕ್ತಿ.‌ಒಬ್ಬ ಮಗುವಿನ ತಂದೆ. ದುಡ್ಡಿನ ಹಿಂದೆ ಹೋಗುವ ಮನುಷ್ಯ ಅಲ್ಲ. ಆ ರೀತಿ ಪಾತ್ರ ಮಾಡುತ್ತಿದ್ದೇನೆ" ಎಂದು ಮಾಹಿತಿ ನೀಡಿದರು.


     ನಾಯಕಿ ದಿವ್ಯಾ ಉರುಡುಗ "ನನಗೆ ಹೆಮ್ಮೆ ಅನಿಸುತ್ತದೆ. ಪ್ರತಿ ವಿಷಯದಲ್ಲಿಯೂ ಯೂನಿಕ್ ಆಗಿ ಮಾಡುತ್ತಿದ್ದೇವೆ. ರಚ್ಚು ಎಂಬ ಮುದ್ದಾದ ಹುಡುಗಿ ಪಾತ್ರ ಮಾಡುತ್ತಿದ್ದೇನೆ. ರಚ್ಚು ಎಂಬ ಸೂಪರ್ ಸ್ಟಾರ್ ಸಿಂಪಲ್ ಆಗಿ ಲೈಫ್ ಲೀಡ್ ಮಾಡುವ ಕನಸು ಕಾಣುತ್ತಾ ಇರುತ್ತಾಳೆ. ಅಮ್ಮನ ಮಾತೇ ವೇದ ವಾಕ್ಯ.‌ ಆ ರೀತಿ ಪಾತ್ರ ನನ್ನದು. ಅವಳ ವೈಯಕ್ತಿಕ ಜೀವನ, ಅವಳ ಆಸೆ ನೆರವೇರುತ್ತಾ? ಅನ್ನೋದನ್ನು ನೀವು ನೋಡ್ಬೇಕು.‌ಒಂದೊಳ್ಳೆ ತಂಡದ ಜೊತೆ ಕೆಲಸ‌ ಮಾಡುತ್ತಿರುವ ಖುಷಿ ಇದೆ. ಸಿನಿಮಾ ರೀತಿಯೇ ಸೀರಿಯಲ್ ಶೂಟ್ ಮಾಡಲಾಗುತ್ತಿದೆ" ಎಂದರು.


ರಚನಾ ಪಾತ್ರದಲ್ಲಿ ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌  'ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.


  ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ. ಭಾಗ್ಯಲಕ್ಷ್ಮಿ, ನಮ್ಮನೆ ಯುವರಾಣಿ, ಕನ್ನಡತಿಯಂಥ  ಧಾರಾವಾಹಿಗಳನ್ನು ನಿರ್ಮಿಸಿದ ಜೈ ಮಾತಾ ಕಂಬೈನ್ಸ್ ‘ನಿನಗಾಗಿʼಯ ನಿರ್ಮಾಣದ ಹೊಣೆ ಹೊತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ