ಬೆಂಗಳೂರು, (ಜೂನ್ 09): ಬೆಂಗಳೂರಿನ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಹೈಕೋರ್ಟ್ ಗೆ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿವೆ. ಅದರಲ್ಲೂ ಡಿಎನ್ಎ ಎಂಟರ್ಟೈನ್ಮೆಂಟ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್ ಸರ್ಕಾರ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ನದ್ದು. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು ಎಂದು ರಿಟ್ ಅರ್ಜಿಯಲ್ಲಿ ಸ್ಫೋಟಕ ಅಂಶಗಳನ್ನು ಉಲ್ಲೇಖಿಸಿದೆ.
ಭಾರತ ಟಿ20 ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ವಿಕ್ಟರಿ ಪರೇಡ್ ನಡೆಸಲಾಗಿತ್ತು.DNA ಆಯೋಜಿಸಿದ್ದ ಪರೇಡ್ ನಲ್ಲಿ 3 ಲಕ್ಷ ಜನರಿದ್ದರೂ ಯಾವುದೇ ಅವಘಡಗಳಾಗಿರಲಿಲ್ಲ. ವಾಂಖೆಡೆ ಸ್ಟೇಡಿಯಂನ ಪ್ರೇಕ್ಷಕರ ಸಾಮರ್ಥ್ಯ 32,000 ಇದ್ರೂ ಸಮಸ್ಯೆ ಆಗಿರಲಿಲ್ಲ ಎಂದು ಡಿಎನ್ಎ ಎಂಟರ್ಟೈನ್ಮೆಂಟ್ ಎಂದು ಹೈಕೋರ್ಟ್ ಗೆ ತಿಳಿಸಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.