ಮಹಾಲಿಂಗಪುರ, ಜುಲೈ,೦೬: ಸಮಾಜದ ಆರೋಗ್ಯವನ್ನು ಕಾಪಾಡುವ ವೈದ್ಯರು ಮತ್ತು ಸಮಾಜಕ್ಕೆ ಸತ್ಯ ಹಾಗೂ ನೈಜ ಮಾಹಿತಿಯನ್ನು ತಲುಪಿಸುವ ಪತ್ರಕರ್ತರು ರಾಷ ನಿರ್ಮಾಣದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆನಿಸಿರುವ ಪತ್ರಿಕಾರಂಗವು ಕಾಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗಗಳು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಎಚ್ಚರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದು ವೈ?ವಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ವಿನೋದ ಮೇತ್ರಿ ಹೇಳಿದರು.
ಅವರು ಸ್ಥಳೀಯ ವೈಷವಿ ಶಿಕ್ಷಣ ಸಂಸ್ಥೆಯ ಅಕ್ಷರ ವಿದ್ಯಾ ವಿಹಾರ ಮಾಡರ್ನ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವೈದ್ಯರ ದಿನ ಹಾಗೂ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯರು ತಮ್ಮ ಜ್ಞಾನ, ಅನುಭವ ಮತ್ತು ಮಾನವೀಯ ಸೇವೆಯ ಮೂಲಕ ಸಾವಿರಾರು ಜೀವಗಳನ್ನು ರಕ್ಷಿಸುವ ಮಹತ್ತರ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ಸೇರಿದಂತೆ ವಿವಿಧ ಸಂಕಷದ ಸಂದರ್ಭಗಳಲ್ಲಿ ವೈದ್ಯರು ತಮ್ಮ ಜೀವವನ್ನೇ ಪಣಕ್ಕಿಟ್ಟು ಜನಸೇವೆಯಲ್ಲಿ ತೊಡಗಿಕೊಂಡಿರುವುದು ಸಮಾಜ ಎಂದಿಗೂ ಮರೆಯಬಾರದು. ವೈದ್ಯರ ಸೇವೆ ಕೇವಲ ವೃತ್ತಿಯಲ್ಲ, ಅದು ಮಾನವೀಯತೆಯ ಪ್ರತೀಕವಾಗಿದೆ ಎಂದು ಅವರು ಹೇಳಿದರು.
ಅದೇ ರೀತಿ ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತಂದು ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾರೆ. ಗ್ರಾಮೀಣ ಪ್ರದೇಶಗಳಿಂದ ರಾಷಮಟ್ಟದ ಬೆಳವಣಿಗೆಗಳವರೆಗೆ ನಿಖರ ಮಾಹಿತಿಯನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಪತ್ರಿಕಾರಂಗ ಮಾಡುತ್ತಿದೆ. ಸತ್ಯ, ನಿಷಕ್ಷಪಾತತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವೈದ್ಯರ ಸೇವೆಯ ಮಹತ್ವ, ಆರೋಗ್ಯ ರಕ್ಷಣೆ, ಪರಿಸರ ಸ್ವಚ್ಛತೆ ಹಾಗೂ ಪತ್ರಿಕೆಗಳ ಸಾಮಾಜಿಕ ಜವಾಬ್ದಾರಿಯನ್ನು ಪ್ರತಿಬಿಂಬಿಸುವ ನೃತ್ಯ, ಭಾ?ಣ ಹಾಗೂ ಸಾಮಾಜಿಕ ಸಂದೇಶ ಸಾರುವ ಅಭಿನಯಗಳನ್ನು ಪ್ರದರ್ಶಿಸಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು.
ವಿದ್ಯಾರ್ಥಿಗಳಾದ ಪ್ರೀತಿ ಮೇತ್ರಿ, ರಕ್ಷಿತ್ ಹನ್ನೂರು ಹಾಗೂ ದೀಕ್ಷಾ ದಹಿಯಾ ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ವೈದ್ಯರ ಸೇವೆಯ ಮಹತ್ವ ಹಾಗೂ ಜ್ಞಾನ, ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ದೊಡ್ಡದು ಎಂದು ತಿಳಿಸಿದರು. ವಿದ್ಯಾರ್ಥಿಗಳು ವೈದ್ಯರು ಮತ್ತು ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಅವರ ಸೇವೆಗೆ ಗೌರವ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಪತ್ರಕರ್ತರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ವೈದ್ಯರು ಮತ್ತು ಪತ್ರಕರ್ತರ ಸಮಾಜಮುಖಿ ಸೇವೆಯನ್ನು ಸ್ಮರಿಸಿ ಪ್ರಶಂಸಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷೆ ಡಾ. ತೇಜಸ್ವಿತಾ ಮೇತ್ರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಎ.ಆರ್. ಬೆಳಗಲಿ, ಡಾ. ವೀಣಾ ಅಂಗಡಿ, ಡಾ. ಅಶ್ವಿನಿ ಬಡಿಗೇರ, ಕಾನಿಪ ಅಧ್ಯಕ್ಷ ಮಹೇಶ ಮನ್ನಯನವರಮಠ, ಪತ್ರಕರ್ತರಾದ ಎಸ್.ಎಸ್. ಈಶ್ವರಪ್ಪಗೋಳ ಹಾಗೂ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲ ಶರಣಪ್ಪ ಅಂಗಡಿ ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಸಂಯೋಜಕಿ ಸ್ನೇಹ ಮನ್ನಯನವರಮಠ, ಸೋನಾಲಿ ಮರಪತಿ, ಸಿಸಿಎ ವಿಭಾಗದ ಮುಖ್ಯಸ್ಥ ದೇವೇಂದ್ರ ಪಿಡ್ಡನಗೌಡರ, ಅಪೂರ್ವ ಹುಣಶ್ಯಾಳ, ರಿಷಿಕಾ ಮೇತ್ರಿ, ಹುಮೇರಾ ಗೌಂಡಿ, ಶ್ರದ್ಧಾ ಮೆಟಗುಡ್ಡ ಸೇರಿದಂತೆ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಭಾಗವಸಿದ್ದರು.
