Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿ

ಮುದ್ದೇಬಿಹಾಳ: ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುವ ಬದಲು ರಕ್ತದಾನ ಶಿಬಿರ, ಕಾರ್ಮಿಕರಿಗೆ ಅಲ್ಪೋಪಹಾರ, ಬಡವರಿಗೆ ನೆರವು ಹಾಗೂ ರೈತರಿಗೆ ಉಪಯುಕ್ತವಾಗುವ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬರ ಪರಿಸ್ಥಿತಿ ಎದುರಾಗಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುವ ಬದಲು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂಬ ಸೂಚನೆಯನ್ನು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ನೀಡಿರುವ ಹಿನ್ನೆಲೆಯಲ್ಲಿ ಈ ಬಾರಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜನ್ಮದಿನದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವುದು, ಕಾರ್ಮಿಕರಿಗೆ ಅಲ್ಪೋಪಹಾರ ವಿತರಿಸುವುದು, ರಕ್ತದಾನ ಶಿಬಿರ ಆಯೋಜಿಸುವುದು ಹಾಗೂ 51 ರೈತರಿಗೆ ಗೊಬ್ಬರ ವಿತರಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನ್ಮದಿನಕ್ಕೆ ಖರ್ಚಾಗುವ ಹಣವನ್ನು ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಬಳಸಬೇಕು. ಬರಗಾಲದ ಸಂದರ್ಭದಲ್ಲಿ ಅದ್ದೂರಿ ಸಮಾರಂಭಗಳು ಮತ್ತು ವೇದಿಕೆ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೂಕ್ತವಲ್ಲ ಎಂಬುದು ನಡಹಳ್ಳಿ ಅವರ ಆಶಯವಾಗಿದೆ ಎಂದು ಎ.ಎಸ್.ಪಾಟೀಲ ನಡಹಳ್ಳಿ ಅವರ ಅಭಿಮಾನಿಗಳು ಹೇಳಿದರು.
ಬಿಜೆಪಿ ಮುಖಂಡ ಸಿದ್ದರಾಜ ಹೊಳಿ, ಯಾವುದೇ ಅಧಿಕಾರದ ಸ್ಥಾನದಲ್ಲಿಲ್ಲದಿದ್ದರೂ ಕಳೆದ ನಾಲ್ಕು ವರ್ಷಗಳಿಂದ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಎ.ಎಸ್. ಪಾಟೀಲ ನಡಹಳ್ಳಿ ಅವರ ಜನ್ಮದಿನವನ್ನು ಆಚರಿಸುತ್ತಿರುವುದು ಅವರ ಜನಪರ ಕಾಳಜಿ ಹಾಗೂ ಜನರೊಂದಿಗೆ ಬೆಳೆಸಿಕೊಂಡಿರುವ ಆತ್ಮೀಯ ಸಂಬಂಧಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಡಾ.ವಿರೇಶ ಪಾಟೀಲ, ಮಲ್ಲಿಕಾರ್ಜುನ ತಂಗಡಗಿ ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮನಗೌಡ ಬಿರಾದಾರ(ಕವಡಿಮಟ್ಟಿ), ಎಸ್.ಎಸ್.ಶಿವಣಗಿ, ಅಶೋಕ ರಾಠೋಡ(ನೇಬಗೇರಿ), ಶ್ರೀಶೈಲ ದೊಡಮನಿ, ಸಂಗಪ್ಪ ಬೀಸಲದಿನ್ನಿ, ಹುಲಗೇಶ ಈಳಗೇರ, ರವೀಂದ್ರ ಬಿರಾದಾರ ಸೇರಿದಂತೆ  ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ