ಮುಧೋಳ: ಸೆ. ೧: ಕ್ಷಣಿಕ ಸುಖಕ್ಕಾಗಿ ಮಾದಕ ದ್ರವ್ಯಗಳಿಗೆ ಕೈಚಾಚದೆ, ಅಮೂಲ್ಯವಾದ ಜೀವ ಹಾಗೂ ಭವಿ?ವನ್ನು ವ್ಯಸನಕ್ಕೆ ಬಲಿಕೊಡಬಾರದು ಎಂದು ರನ್ನ ಬೆಳಗಲಿಯ ಯೋಗ ಶಿಕ್ಷಕ ಹಾಗೂ ಪತ್ರಕರ್ತ ರಾಘವೇಂದ್ರ ನೀಲಣ್ಣವರ ಹೇಳಿದರು.
ಮುಧೋಳ ತಾಲೂಕಿನ ಕಸಬಾ ಜಂಬಗಿ ಗ್ರಾಮದ ಬಿ.ವಿ.ವಿ.ಎಸ್. ಶ್ರೀ ರುದ್ರಮುನಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಮುಧೋಳ, ಜಿಲ್ಲಾ ಜನಜಾಗೃತಿ ವೇದಿಕೆ, ಬಾಗಲಕೋಟೆ ಹಾಗೂ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ’ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾದಕ ದ್ರವ್ಯಗಳ ಸೇವನೆಯಿಂದ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ನೆಮ್ಮದಿ, ಕುಟುಂಬದ ಸಂತೋ?, ಆರ್ಥಿಕ ಸ್ಥಿತಿ ಹಾಗೂ ವ್ಯಕ್ತಿಯ ಭವಿ?ವೂ ಹಾಳಾಗಬಹುದು. ನಿರಂತರ ಮಾದಕ ದ್ರವ್ಯ ಸೇವನೆಯಿಂದ ವ್ಯಸನಕ್ಕೆ ಒಳಗಾಗುವ ಜೊತೆಗೆ ಮಾನಸಿಕ ಸಮಸ್ಯೆಗಳು, ಗಂಭೀರ ಆರೋಗ್ಯ ತೊಂದರೆಗಳು ಉಂಟಾಗುವ ಸಾಧ್ಯತೆಯಿದ್ದು, ಕೆಲ ಸಂದರ್ಭಗಳಲ್ಲಿ ಅಕಾಲಿಕ ಮರಣಕ್ಕೂ ಕಾರಣವಾಗಬಹುದು. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಯುವಜನರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಸಿ.ಎಸ್. ಹಿರೇಮಠ ಮಾತನಾಡಿ, ಶಾಲಾ ಮಕ್ಕಳು, ಯುವಕರು, ವಿದ್ಯಾವಂತರು, ಸಾಧಕರು ಹಾಗೂ ಮಹಿಳೆಯರು ಸೇರಿದಂತೆ ವಿವಿಧ ವರ್ಗದ ಜನರು ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ವಸ್ತುಗಳತ್ತ ಆಕರ್ಷಿತರಾಗುವುದು ಇಂದಿನ ಸಮಾಜ ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಯುತ್ತಿರುವ ಜನಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳು ಮಾದರಿಯಾಗಿವೆ ಎಂದರು.
ವಲಯ ಮೇಲ್ವಿಚಾರಕಿ ಶಿಲ್ಪಾ ಪಾಟೀಲ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು, ಸೇವಾ ಪ್ರತಿನಿಧಿಗಳು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.