LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಬಲ್ ಇಸ್ಮಾರ್ಟ್ ಹಾಡು ರಿಲೀಸ್ ಭರ್ಜರಿಸ್ಟೆಪ್ ಹಾಕಿದ ರಾಮ್ ಪೋತಿನೇನಿ


    ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ 'ಡಬಲ್ ಇಸ್ಮಾರ್ಟ್'.  ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ.


     ಸದ್ಯ 'ಡಬಲ್ ಇಸ್ಮಾರ್ಟ್' ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ. ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ.


      ಸ್ಟೆಪ್ಪಾ ಮಾರ್‌ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.


     ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.


ಮಣಿ ಶರ್ಮಾ ಸಂಗೀತ ನಿರ್ದೇಶನವಿದ್ದು, ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಹಣವಿದೆ. 2019 ರಲ್ಲಿ 'ಇಸ್ಮಾರ್ಟ್ ಶಂಕರ್' ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 'ಡಬಲ್ ಇಸ್ಮಾರ್ಟ್' ಸಿನಿಮಾ ಬರ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್