Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಧುನಿಕತೆಗೆ ತಕ್ಕಂತೆ ಹಬ್ಬಗಳನ್ನು ಆಚರಿಸಿ: ಡಾ. ಅಲ್ಲಮಪ್ರಭು ಸ್ವಾಮೀಜಿ




ಬೆಳಗಾವಿ: ಹಬ್ಬಗಳು ಮೂಢ‌ನಂಬಿಕೆಯ ತಾಣವಾಗಬಾರದು. ಮೂಲ ನಂಬಿಕೆಗಳಾಗಿಯೇ ಅವು ಉಳಿಯಬೇಕು. ಅದೇ ರೀತಿ ಅಂಧಾನುಕರಣೆ ಮಾಡದೇ ಹಬ್ಬದ ಉದ್ದೇಶ ತಿಳಿಯಬೇಕು. ವೈಜ್ಞಾನಿಕ ತಳಹದಿಯ ಮೇಲೆ, ಆಧುನಿಕತೆಗೆ ತಕ್ಕಂತೆ ಪ್ರಸ್ತುತ ಹಬ್ಬಗಳನ್ನು ಆಚರಿಸುವ ಅವಶ್ಯಕತೆ ಇದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟರು.


ನೆಹರು ನಗರದ ಡಾ. ಬಿ. ಆರ್.‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದ ಸಭಾಂಗಣದಲ್ಲಿ ವಿವಿಧ ಬಸವಪರ ಹಾಗೂ ಜನಪರ ಸಂಘಟನೆಗಳ ಆಶ್ರಯದಲ್ಲಿ ನಾಗರ ಪಂಚಮಿ ದಿನ ಹಮ್ಮಿಕೊಂಡಿದ್ದ ಬಸವ ಪಂಚಮಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.


ಮೂಢನಂಬಿಕೆ ಎಂದು ಗೊತ್ತಾದ ಮೇಲೆ ಅದೆಷ್ಟೋ ಹಳೆಯ ಆಚರಣೆಗಳನ್ನು ನಾವು ಬದಲಾಯಿಸಿಕೊಂಡಿದ್ದೇವೆ. ಹಾಗಾಗಿ, ಪಂಚಮಿ ನಿಮಿತ್ತ ಹಾಲನ್ನು ಕಲ್ಲಿಗೆ ಎರೆದು ವ್ಯರ್ಥ ಮಾಡುವ ಬದಲು, ಹಸಿದ ಮಕ್ಕಳಿಗೆ ನೀಡುವುದು ಉತ್ತಮ ಕಾರ್ಯ‌ ಎಂದು ಸಲಹೆ ನೀಡಿದರು.


ರಾಜ್ಯ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ ಮಾತನಾಡಿ, ನಾಗರ ಪಂಚಮಿ ಹೆಸರಿನಲ್ಲಿ ಹಾಲನ್ನು ಅಪವ್ಯಯ ಮಾಡದೆ ಅದನ್ನು ಮಕ್ಕಳಿಗೆ ನೀಡುವ ಹಬ್ಬವನ್ನಾಗಿಸಬೇಕು. ಪೌಷ್ಟಿಕಾಂಶಯುಕ್ತ ಹಾಲನ್ನು ಕಲ್ಲ ನಾಗರಕ್ಕೆ, ಹುತ್ತಕ್ಕೆ ಎಂದು ಎರೆಯದೆ ಬಡ ಮಕ್ಕಳಿಗೆ, ರೋಗಿಗಳಿಗೆ, ಅನಾಥರಿಗೆ ನೀಡಿ ಎಂದು ಸಲಹೆ ನೀಡಿದ ಅವರು, ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯದ ಎಲ್ಲೆಡೆ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.


ಬುದ್ಧ ಹಚ್ಚಿದ್ದು ಶಾಂತಿಯ ದೀಪ, ಬಸವಣ್ಣ ಹಚ್ಚಿದ್ದು ಕ್ರಾಂತಿಯ ದೀಪ, ಅಂಬೇಡ್ಕರ್ ಹಚ್ಚಿದ್ದು ಜ್ಞಾನದ ದೀಪ. ಈ ದೀಪಗಳ ಬೆಳಕಿನಲ್ಲಿ ನಾವೆಲ್ಲ ನಡೆದು ಸಮ ಸಮಾಜ ಕಟ್ಟೋಣ. ಬುದ್ಧನ ಉಪದೇಶ, ಬಸವಣ್ಣನವರ ಸಂದೇಶ, ಅಂಬೇಡ್ಕರ್ ಅವರ ಕಾನೂನು ಮೈಗೂಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಆದ್ಯತೆ ನಿಡೋಣ ಎಂದು ಹೇಳಿದರು.


ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ

ಬಸವರಾಜ ಚನ್ನಯನ್ನವರ ಅವರು ಮಾತನಾಡಿ,ಜಾಗೃತಿಯೊಂದಿಗೆ ಸಾಮಾಜಿಕ ಕಳಕಳಿ ಹೊಂದಿರುವ ಈ ಬಸವ ಪಂಚಮಿ ಕಾರ್ಯಕ್ರಮವನ್ನು ಪ್ರತಿವರ್ಷ ಈ‌ ಮಕ್ಕಳ ಸಮ್ಮುಖದಲ್ಲಿ ನೆರವೇರಿಸಬೇಕು. ಇಂತಹ ಜಾಗೃತ ಕಾರ್ಯದಿಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ನಾಂದಿಯಾಗಲಿದೆ. ಈಗಾಗಲೇ ನೂರಾರು ಮಕ್ಕಳ ವಸತಿಯಲ್ಲಿದ್ದಾರೆ. ಸಂಘಟನೆಗಳು


ಇಲ್ಲಿನ ಮಕ್ಕಳಿಗೆ ಮಾರ್ಗದರ್ಶನ ಹಾಗೂ ಸಹಾಯ- ಸಹಕಾರ ನೀಡಿದರೆ ಅವರ ಉಜ್ವಲವಾಗಲಿದೆ ಎಂದು ಹೇಳಿದರು. ಇದೇ ವೇಳೆ ಡಾ. ಬಿ. ಆರ್.‌ ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದ ಮಕ್ಕಳಿಗೆ ಉಚಿತ ಪ್ರಸಾದ, ಹಾಲು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ತೋಳಿ ಭರಮಣ್ಣ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಕರವೇ ಮುಖಂಡ ಸುರೇಶ ಗವನ್ನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ