Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು : ಡಾ.ಆನಂದ ಕೆ.

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು


ಜಲಧಾರೆ ಯೋಜನೆ ಅನುಷ್ಠಾನಕ್ಕೆ ವಿಶೇಷ ಸಭೆ

ವಿಜಯಪುರ,ಏ.೦೭: ಜಲಧಾರೆ ಯೋಜನೆ ಅನುಷ್ಠಾನದಲ್ಲಿ  ವಿಳಂಬ ಸಲ್ಲದು. ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಯೋಜನೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಲಧಾರೆ ಯೋಜನೆ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಆಲಮಟ್ಟಿ ಹಾಗೂ ನಾರಾಯಣಪುರ ಹಿನ್ನೀರಿನ ಮೂಲಕ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಈ ಯೋಜನೆ ನಮ್ಮಜಿಲ್ಲೆಗೆ ವರದಾನವಾಗಿದೆ. ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು ಎಂದರು.

ಈ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ವಿಳಂಬವಾಗಿದ್ದು, ಅಧಿಕಾರಿಗಳು ಯುದ್ಧೋಪಾದಿಯಲ್ಲಿ   ಯೋಜನೆ ಪೂರ್ಣಗೊಳಿಸಬೇಕು ಎಂದರು. ಯೋಜನೆ ಅನುಷ್ಠಾನಕ್ಕೆ ಅನುದಾನದ ಕೊರತೆ ಇಲ್ಲ. ಸಮಸ್ಯೆ ಎಲ್ಲಿದೆ ಗುರುತಿಸಿ, ಜಾಗ ಗುರುತಿಸುವಿಕೆ ಪೈಪ್ ಲೈನ್ ಅಳವಡಿಸಲು ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.

೪೩ ಸೈಟ್ ನಲ್ಲಿ ಸಮಸ್ಯೆ ಇದೆ. ೩೫ಕಿ.ಮೀ ಪೈಪ್ ಲೈನ್ ಮಾಡಲು ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದರು. ತಹಸೀಲ್ದಾರ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉದ್ಭವಿಸುವ ತಾಂತ್ರಿಕ ಸಮಸ್ಯೆ ನಿವಾರಿಸಿಕೊಂಡು ಸುಗಮವಾಗಿ ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು. ಈ ಮಹತ್ವದ ಕುಡಿಯುವ ನೀರಿನ ಯೋಜನೆ ಅನುಷ್ಠಾನ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಸೂಚಿಸಿದರು. ತಹಶೀಲ್ದಾರ ಹಾಗೂ ಇಒ ಅವರು ಸ್ಥಳೀಯವಾಗಿ ಸಮಸ್ಯೆ ಇತ್ಯರ್ಥಪಡಿಸಲು ನಿರಂತರ ಕಾಲಕಾಲಕ್ಕೆ ಸಭೆ ನಡೆಸಿ ಯೋಜನೆ ಅನುಷ್ಠಾನ ಕುರಿತು ಫಾಲೋಅಪ್ ಮಾಡಬೇಕು ಎಂದರು.

ಇನ್ನೊಂದೆಡೆ ಸಾರ್ವಜನಿಕರು ರೈತರನ್ನು ಕರೆದು ಮಾತಾಡಿ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದರು. ಬಸವನಬಾಗೇವಾಡಿಯ ಕೆಲವು ಸೈಟ್ ಕ್ಲೀಯರ್ ಆಗಿಲ್ಲ. ಆ ಸೈಟ್ ಗಳನ್ನು ಕ್ಲೀಯರ್ ಮಾಡಲು ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಗಮನಹರಿಸಬೇಕು ಎಂದರು. ಇದು ಕೇವಲ ಇಲಾಖೆಯೊಂದರ ಕಾರ್ಯವಲ್ಲ. ಎಲ್ಲೆಲ್ಲಿ ಸಮಸ್ಯೆ ಇದೆ. ಅದಕ್ಕೆ ಎಲ್ಲ ಇಲಾಖೆಯವರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ವಿಜಯಪುರದಲ್ಲಿ ಸೈಟ್ ಸಮಸ್ಯೆ ಅಧಿಕಾರುಗಳು ಮುತುವರ್ಜಿ ವಹಿಸಬೇಕು ಎಂದ ಜಿಲ್ಲಾಧಿಕಾರಿಗಳು, ಸಭೆಯಲ್ಲಿ ಕೇವಲ ಕಥೆ ಹೇಳಬಾರದು. ಸಮಸ್ಯೆ ಪರಿಹಾರವಾಗಬೇಕು. ಇದು ಅವರ ಕೆಲಸ ಅಂತ ನಿರ್ಲಕ್ಷ್ಯ ವಹಿಸಬಾರದು. ನೀವು ಆಸಕ್ತಿ ವಹಿಸಿ, ಯೋಜನೆ ಅನುಷ್ಠಾನದತ್ತ ಗಮನಹರಿಸಬೇಕು ಎಂದರು. ಗ್ರಾಮೀಣ ಜನರಿಗೋಸ್ಕರ ಇರುವ ಈ ಯೋಜನೆ ಶುದ್ಧ ಕುಡಿಯುವ ನೀರು ಪೂರೈಸುವುದಾಗಿದೆ. ಹಾಗಾಗಿ ಎಲ್ಲರೂ ಆಸಕ್ತಿ ವಹಿಸಿ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು ಎಂದರು. ಆರ್‌ಡಬ್ಲೂಎಸ್ ಅಭಿಯಂತರರು ಸಭೆ ಕರೆದು ಚರ್ಚಿಸಿ, ಸಮಸ್ಯೆಗಳನ್ಮು ಸಿಇಒ ಅವರ ಗಮನಕ್ಕೆ ತಂದು ಎಲ್ಲೆಲ್ಲಿ ಸೈಟ್ ಸಮಸ್ಯೆ ಇದೆ ಎಂಬುದನ್ನು ಸಿಇಒ ಗಮನಕ್ಕೆ ತರಬೇಕು.

೪೪ ಸೈಟಿನಲ್ಲಿ ಯಾವುದೇ ಸಮಸ್ಯೆ ತಲೆದೋರದಂತೆ ಎಲ್ಲರೂ ನೋಡಿಕೊಳ್ಳಬೇಕು. ಎಲ್ಲ ಇಲಾಖೆಯವರ ಸಮನ್ವಯ ಅತ್ಯಂತ ಮುಖ್ಯವಾಗಿದೆ ಎಂದು  ಜಿಲ್ಲಾಧಿಕಾರಿಗಳು ಪುನರ್ ಉಚ್ಚರಿಸಿದರು.

ಅರಣ್ಯ ಭೂಮಿ ಸಮಸ್ಯೆ ನಿವಾರಿಸಿಕೊಂಡು ಕಾಮಗಾರಿಗೆ ವೇಗದ ಸ್ಪರ್ಶ ನೀಡಿ, ತಕ್ಷಣ ಯೋಜನೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡಿಎಫ್‌ಒ ಅವರು ಎರಡು ಪ್ರಸ್ತಾವನೆ ಸರ್ಕಾರಕ್ಕೆ ಕಳಿಸಿದ್ದು. ೪ಕಿ.ಮೀ ಅರಣ್ಯ ಇಲಾಖೆಯ ಸಮಸ್ಯೆಯನ್ನು ಅರಣ್ಯ ಇಲಾಖೆಯವರು ಬಗೆಹರಿಸಿಕೊಳ್ಳಬೇಕು ಎಂದರು.

ಈ ಸಭೆ ಕರೆದಿರುವ ಉದ್ಧೇಶ ಎಲ್ಲ ತಾಲೂಕು ಇಒ, ತಹಶೀಲ್ದಾರರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನೆಲ್ಲಾ ಒಟ್ಟಾಗಿ ನಿಗದಿತ ಯೋಜನೆ ಅನುಷ್ಠಾನಕ್ಕೆ ಚುರುಕಾಗಿ ಕೆಲಸ ಮಾಡಿ ಯೋಜನೆ ಮುಗಿಸಿಕೊಡಬೇಕು ಎಂದರು.

ಯಾವ ತಾಲೂಕಿನಲ್ಲಿ ಯಾವ ಹಳ್ಳಿಯಲ್ಲಿ ಸಮಸ್ಯೆ ಇದೆ ಎಂಬುದನ್ನು ಗುರುತಿಸಿಕೊಂಡು ಅಧಿಕಾರಿಗಳು ಗಮನಹರಿಸಬೇಕು. ಆಗಾಗ ಮೈಕ್ರೋ ಸಭೆ ನಡೆಸಿ ಪರಿಹರಿಸಬೇಕು. ಸಮಸ್ಯೆ ಪೂರ್ಣಗೊಳ್ಳುವವರೆಗೆ ತೊಡಗಿಸಿಕೊಳ್ಳಬೇಕು. ಎಲ್ಲೆಲ್ಲಿ ಸಮಸ್ಯೆ ಇದೆ. ಅಲ್ಲಿ ಖುದ್ದು ಸ್ಥಳಕ್ಕೆ ಧಾವಿಸಿ, ಸಮಸ್ಯೆ ಪರಿಹರಿಸಬೇಕು ಎಂದು  ಸೂಚಿಸಿದರು.

ಜಲಧಾರೆ ಯೋಜನೆಯ ಹಂತ.೧ರ ಕಾಮಗಾರಿ ಬಹುಮುಖ್ಯವಾಗಿದೆ. ಈ ಯೋಜನೆ ಬೇಗ ಪೂರ್ಣಗೊಳಿಸಲು ಸೂಚಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ವಿದ್ಯುತ್ ಸಮಸ್ಯೆಯನ್ನು ಹೆಸ್ಕಾಂ ಅಧಿಕಾರಿಗಳು ತಕ್ಷಣ ಬಗೆಹರಿಸಬೇಕು.

ಕೆಪಿಟಿಸಿಎಲ್, ಹೆಸ್ಕಾಂ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಪ್ರತ್ಯೇಕ ಸಭೆ ನಡೆಸಿ, ಈ ಯೋಜನೆಯ ನೀರು ಶುದ್ಧೀಕರಣ ಘಟಕಕ್ಕೆ ಮೋಟಾರ್ಸ್ ಪಂಪಿಂಗ್  ವಿದ್ಯುತ್ ಒದಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.ಎಲ್ಲರೂ ಸಂಪರ್ಕ ಹಾಗೂ ಸಂವಹನ ಸಾಧಿಸಿ ಬಗೆಹರಿಸಿಕೊಂಡು ಬಹುಪಯೋಗಿ ಶುದ್ಧ ಕುಡಿಯುವ ನೀರೊದಗಿಸುವ ಈ ಯೋಜನೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯಿಂದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ಅನುಷ್ಠಾನಕ್ಕೆ ಎದುರಾಗುವ ಎಲ್ಲ ಅಡತಡೆಗಳನ್ನು ನಿವಾರಿಸಿಕೊಂಡು ಕಾರ್ಯನಿರ್ವಹಿಸಬೇಕು ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಕೈಕೊಳ್ಳಲಾಗುವುದು ಎಂಬುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಗ್ರಾಮದ ಒಎಚ್‌ಟಿ ನೀರಿನ ಟ್ಯಾಂಕ್ ಇದ್ದಲ್ಲಿ ಗ್ರಾಪಂ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಇಒ ಗಳು ಒಎಸ್ ಟಿ ಲ್ಯಾಂಡ್ ಸಮಸ್ಯೆಯನ್ನು ಮುಂಬರುವ ಸಭೆಯೊಳಗಾಗಿ ಪೂರ್ಣಗೊಳಿಸಬೇಕು ಎಂದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿನ ಈ ಯೋಜನೆಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಿಕೊಳ್ಳಬೇಕು.  ಈ ಯೋಜನೆ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೂ ಇಳಪಡಲಿದ್ದು,ಅಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸಿಕೊಡಲು ಅಧಿಕಾರಿಗಳು ಗಮನಹರಿಸಬೇಕು ಎಂದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಒಎಚ್‌ಟಿ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗೆಹರಿಸಿ ನಿರಾಕ್ಷೇಪಣಾ ಪತ್ರ ಒದಗಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ