Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಯಮದಲ್ಲಿದೆ ಬದುಕಿನ ಶ್ರೇಯಸ್ಸು: ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯ








ಸಂಯಮಶೀಲ ಬದುಕಿನಿಂದ ಆತ್ಮೋನ್ನತಿಯ ಶ್ರೇಯಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು ನುಡಿದರು. ತಾಲೂಕಿನ ಹಾರಕೂಡ ಶ್ರೀಮಠದ ಶ್ರೀ ಚನ್ನ ರೇಣುಕ ಬಸವ ಮಂಟಪದಲ್ಲಿ ಶ್ರಾವಣ ಮಾಸದ ಮಧ್ಯ ಸೋಮವಾರ ಅಂಗವಾಗಿ ಜರುಗಿದ ಧರ್ಮ ಸಭೆ ಉದ್ಘಾಟಿಸಿ ಮಾತನಾಡಿದ ಶ್ರೀಗಳು ಶ್ವೇಚ್ಚಾಚಾರವಿಲ್ಲದ ವಿವೇಕ ಸಹಿತವಾದ ನೆಮ್ಮದಿಯ ಬದುಕು ಸಾಗಿಸಲು ದಿವ್ಯತೆಯ ಭಾವ ಅರಳಲು ಶ್ರಾವಣ ಮಾಸ ಅದ್ಭುತ ಸನ್ನಿವೇಶ ಒದಗಿಸಿಕೊಡುತ್ತದೆ. ಅಂತರಂಗದ ಕಲಹ, ದುಗುಡ, ತಳಮಳಗಳು ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಇವುಗಳಿಂದ ಹೊರಬರಲು ಸತ್ಸಂಗ, ಸದಾಚಾರ, ಸದ್ಭಾವಗಳ ನೆಲೆಯಲ್ಲಿ ಪೂರ್ಣತೆಯಡೆಗೆ ಹೆಜ್ಜೆ ಹಾಕಲು ಶ್ರಾವಣ ಮಸ ಅತ್ಯಂತ ಪ್ರಶಸ್ತ ಕಾಲವಾಗಿದೆ. ಹಾಗಾಗಿ ಭಜನೆ, ಕೀರ್ತನೆ, ಪ್ರವಚನ ಇತ್ಯಾದಿಗಳ ಮುಖೇನ ಮನದ ಭಾರ ಕಳಚಿ ಸಹಜ ಸುಂದರ ಬಾಳ್ವೆಗೆ ಅಣಿಯಾಗಬೇಕೆನ್ನುವುದೇ ನಮ್ಮ ಆಶಯವಾಗಿದೆ ಎಂದು ನುಡಿದರು.


 ಸೇರಿರುವ ಎಲ್ಲ ಭಕ್ತರ ಕಷ್ಟ ಕಳೆದು ಸಾತ್ವಿಕ ಇಷ್ಟಾರ್ಥ ಲಭಿಸುವಂತೆ ಲಿಂಗೈಕ್ಯ ಚನ್ನಬಸವ ಶಿವಯೋಗಿಗಳು ಅನುಗ್ರಹ ಕರುಣಿಸಲಿ ಎಂದು ಶುಭ ಹಾರೈಸಿದರು.ಮಲ್ಲಿನಾಥ ಹಿರೇಮಠ ಹಾರಕೂಡ ಸ್ವಾಗತಿಸಿದರು.

ಜಿಲ್ಲಾ ಪಂಚಾಯಿತಿ ನಿವೃತ್ತ ಉಪ ಕಾರ್ಯದರ್ಶಿಗಳಾದ ಬಿ.ಕೆ. ಹಿರೇಮಠ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಪ್ರತ್ವಿರಾಜ ದೇಗಾಂವ, ಪಂಡಿತರಾವ ದೇಗಾಂವ, ಸಿದ್ರಾಮ ಹೆಗಡೆ, ಚನ್ನಪ್ಪ ದಾಮಾ ಉಪಸ್ಥಿತರಿದ್ದರು.


ವಿಠಲ ಹೂಗಾರ ನಿರೂಪಣೆ ಮಾಡಿದರು.ವಿಜಯಕುಮಾರ ಕುಲಕರ್ಣಿ ವಂದಿಸಿದರು.ಕಾರ್ಯಕ್ರಮದ ನಂತರ ರಾತ್ರಿವಿಡಿ ವಿವಿಧ ಗ್ರಾಮಗಳಿಂದ ಆಗಮಿಸಿದ 29 ಭಜನಾ ತಂಡದವರಿಂದ ಭಜನೆ ಕಾರ್ಯಕ್ರಮ ಜರುಗಿತು.ಚಿತ್ರ : ಶ್ರಾವಣ ಮಾಸದ ಅಂಗವಾಗಿ ಹಾರಕೂಡ ಶ್ರೀಮಠದ ಶ್ರೀ ಚನ್ನ ರೇಣುಕ ಬಸವ ಮಂಟಪದಲ್ಲಿ ಆಯೋಜಿಸಿದ ಧರ್ಮ ಸಭೆಯನ್ನು ಹಾರಕೂಡದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು.


 ಜಿಲ್ಲಾ ಪಂಚಾಯಿತಿ ನಿವೃತ್ತ ಉಪ ಕಾರ್ಯದರ್ಶಿಗಳಾದ ಬಿ.ಕೆ. ಹಿರೇಮಠ, ಮಲ್ಲಿನಾಥ ಹಿರೇಮಠ ಹಾರಕೂಡ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಪಂಡಿತರಾವ ದೇಗಾಂವ, ವಿಜಯಕುಮಾರ ಕುಲಕರ್ಣಿ, ಸಿದ್ರಾಮ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ