Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾವು ಕಡಿತದ ಬಗ್ಗೆ ಜನಜಾಗೃತಿ ಅತ್ಯವಶ್ಯ: ಡಾ.ದಯಾನಂದ ಕರೆಯನ್ನವರ ಅಭಿಮತ



ಬಾಗಲಕೋಟೆ: ಹಾವು ಕಡಿತ ಒಂದು ಜಾಗತಿಕ ಸಮಸ್ಯೆಯಾಗಿದೆ. ಇದರಿಂದ ಸಾವು ನೋವುಗಳಾಗುತ್ತಿದ್ದು, ಹಾವು ಕಡಿತದ ಪರಿಣಾಮ ಸಾವಿನ ಪ್ರಮಾಣ ಪ್ರತಿವರ್ಷದಿಂದ ವರ್ಷಕ್ಕೆ ಏರಿಕೆಯಾಗಿದೆ. ಆದ್ದರಿಂದ ಸೆ.೧೯ರಂದು ಜನರಲ್ಲಿ ಜಾಗೃತಿ ಮೂಡಿಸಲು ಅಂತಾರಾಷ್ಟಿçÃಯ ಹಾವು ಕಡಿತದ ಜಾಗೃತಿ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆಂದು ಬಾಗಲಕೋಟೆ ಜಿಲ್ಲಾಸಮೀಕ್ಷಣಾಧಿಕಾರಿಗಳಾದ ಡಾ.ದಯಾನಂದ ಕರೆಯನ್ನವರ ಹೇಳಿದರು.


ನವನಗರದ ಸರ್ಕಾರಿ ಅಲ್ಪಸಂಖ್ಯಾತರ  ಮೊರಾರ್ಜಿ ದೇಸಾಯಿ  ಪದವಿ ಪೂರ್ವ ವಸತಿ ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆದ ಅಂತಾರಾಷ್ಟಿçÃಯ ಹಾವು ಕಡಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚು ಹಾವು ಕಡಿತದ ಪ್ರಕರಣಗಳ ದಾಖಲಾಗುತ್ತಿವೆ. ಅದನ್ನ ತಡೆಗಟ್ಟಲು ಸಾರ್ವಜನಿಕರಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಲಾಗುತ್ತಿದೆ.ಯಾವುದೇ ವ್ಯಕ್ತಿಗೆ ಹಾವು ಕಚ್ಚಿದಾಗ ಮೊದಲು ಗಾಬರಿಗೊಳ್ಳದೇ ತುರ್ತಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಎಎಸ್‌ವಿ ಇಂಜೆಕ್ಷನ್ ಅನ್ನು ಹಾವು ಕಡಿತಕ್ಕೊಳಗಾದ ವ್ಯಕ್ತಿಕಡ್ಡಾಯವಾಗಿ ಪಡೆಯಬೇಕು ಎಂದರು.


ಜಿಲ್ಲಾ ಸೋಂಕು ಶಾಸ್ತçಜ್ಞರಾದ ಡಾ. ಸೀಮಾ ಹುದ್ದಾರ ಮಾತನಾಡಿ, ಹಾವು ಕಡಿತದ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಅತ್ಯವಶ್ಯ. ಹಾವಿನ ಕಡಿತವನ್ನು ಗಂಭೀರವಾಗಿ ಪರಿಗಣಿಸದೆ ಸ್ಥಳೀಯ ನಾಟಿ ವೈದ್ಯ ಪದ್ಧತಿಯಂತಹ ಅವೈಜ್ಞಾನಿಕ ವಿಧಾನ ಅನುಸರಿಸುತ್ತಿರುವುದರಿಂದ ಸಾವುಗಳ ಸಂಖ್ಯೆ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಶೇ.೨೦ರಷ್ಟು ಹಾವು ಕಡಿತದ ಪ್ರಕರಣಗಳು ಪತ್ತೆಯಾಗುತ್ತಿವೆ. ಎರಡರಿಂದ ನಾಲ್ಕು ಸಾವಿನ ಪ್ರಕರಣಗಳ ದಾಖಲಾಗುತ್ತಿವೆ. ಆದ್ದರಿಂದ  ಹಾವು ಕಡಿತಕ್ಕೊಳಗಾದವ ಗಾಬರಿಗೊಳ್ಳದೇ ಶಾಂತವಾಗಿರಿ, ದೈರ್ಯ ತಂದುಕೊಳ್ಳಬೇಕು. ಗಾಬರಿಯಾದರೆ ಹೃದಯ ಬಡಿತ ಹೆಚ್ಚಾಗಿ ವಿಷ ವೇಗವಾಗಿ ಹರಡುತ್ತದೆ. ಕಚ್ಚಿದ ಹಾವನ್ನು ಹಿಡಿಯುವ ಹಾಗೂ ಕೊಲ್ಲುವ ಪ್ರಯತ್ನ ಮಾಡಬಾರದು.ಹಾವು ಕಡಿದ ಗಾಯದ ಮೇಲೆ ಮಂಜುಗಡ್ಡೆ ಇಡುವುದಾಗಲಿ, ನೀರಲ್ಲಿ ಗಾಯವನ್ನು ಮುಳುಗಿಸುವುದಾಗಲಿ ಮಾಡಬಾರದು.ಹೊಲ ಗದ್ದೆಗಳಲ್ಲಿ ಹಾವು ಕಡಿದಾಗ ಓಡಿ ಬರುವ ಪ್ರಯತ್ನ ಮಾಡಬಾರದು, ಸಾಧ್ಯವಾದರೆ ಅಕ್ಕಪಕ್ಕ ಯಾರಾದರೂ ಇದ್ದರೆ ರೋಗಿಯನ್ನು ಎತ್ತಿಕೊಂಡು ಆಸ್ಪತ್ರೆಗೆ ಕರೆದುಕೊಂಡುಹೋಗಿ ಚಿಕಿತ್ಸೆ ಕೊಡಿಸಬೇಕು ಎಂದು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ  ಸರ್ಕಾರಿ ಅಲ್ಪಸಂಖ್ಯಾತರ  ಮೊರಾರ್ಜಿ ದೇಸಾಯಿ  ಪದವಿ ಪೂರ್ವ ವಸತಿ ಕಾಲೇಜಿನ  ಪ್ರಾಚಾರ್ಯ ಎಂ.ಎನ್.ಗರಗ, ಇತಿಹಾಸ ಪ್ರಾಧ್ಯಾಪಕ ಕೇಶವ ಸಾಲಮಂಟಪಿ, ಎನ್‌ಸಿಡಿಡಿಪಿಸಿ ಡಾ.ಎ.ವಿ.ಪಾಟೀಲ,ಹಿರಿಯ ಆರೋಗ್ಯ ನಿರೀಕ್ಷಕ ಎಚ್.ಪಿ.ನಾಯ್ಕರ ಸೇರಿದಂದ ವಿದ್ಯಾರ್ಥಿನಿಯರು ಇದ್ದರು.




photo: ನವನಗರದ ಸರ್ಕಾರಿ ಅಲ್ಪಸಂಖ್ಯಾತರ  ಮೊರಾರ್ಜಿ ದೇಸಾಯಿ  ಪದವಿ ಪೂರ್ವ ವಸತಿ ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆದ ಅಂತಾರಾಷ್ಟಿçÃಯ ಹಾವು ಕಡಿತ ಜಾಗೃತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾಸಮೀಕ್ಷಣಾಧಿಕಾರಿಗಳಾದ ಡಾ.ದಯಾನಂದ ಕರೆಯನ್ನವರ ಮಾತನಾಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ