Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ: ಡಾ.ಡಿ.ವಿ ಪರಮಶಿವ ಮೂರ್ತಿ

ಬಳ್ಳಾರಿ,ಆ.14: ಮಾದಕ ವಸ್ತುಗಳ ಸೇವನೆಯಿಂದಾಗಿ ಹಾಳಾದ ಸಂಸಾರಗಳನ್ನು ಉಳಿಸುವ ಸಲುವಾಗಿ ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳು ಮುಂದಾಗಿದ್ದರು. ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಕೊಳ್ಳುವ “ಮಹಾಂತ ಜೋಳಿಗೆ” ಕಾರ್ಯವು ಇಡೀ ರಾಜ್ಯ, ರಾಷ್ಟç ಹಾಗೂ ಅಂತರಾಷ್ಟಿçÃಯ ಮಟ್ಟಕ್ಕೆ ಪ್ರಸಿದ್ಧಿ ಪಡೆಯಿತು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಡಿ.ವಿ ಪರಮಶಿವ ಮೂರ್ತಿ ಅವರು ಹೇಳಿದರು.

ಹಂಪಿ ಕಮಲಾಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠ, ಸಿದ್ಧಯ್ಯನಕೋಟೆ ಹಾಗೂ ಚಿತ್ತರಗಿಚ್ಚಿ ಜ್ಯೋತಿ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಹಾಗೂ ಕನ್ನಡ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಡೆದ ಮಹಾಂತ ಜೋಳಿಗೆ ಹಾಗೂ “ಮಕ್ಕಳ ಬದುಕಿಗೆ ಶರಣರ ಚಿಂತನೆ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತಾಡಿದರು.
ಡಾ.ಮಹಾಂತ ಶಿವಯೋಗಿಗಳು ಜನರಲ್ಲಿ ಹಣವನ್ನು ಕೇಳಲಿಲ್ಲ, ಹಣ್ಣು ಹಂಪಲು ಕೇಳಲಿಲ್ಲ, ಪೂಜೆ ಮಾಡಿ ಎಂದು ಹೇಳಲಿಲ್ಲ, ಬದಲಾಗಿ ನಿಮ್ಮಲ್ಲಿರುವ ದುಶ್ಚಟ- ದುರ್ವ್ಯಸನಗಳನ್ನು ಜೋಳಿಗೆಗೆ ಹಾಕಿ ಎಂದು ಕೇಳುತ್ತಿದ್ದರು ಎಂದು ತಿಳಿಸಿದರು.

ಸಂಸಾರದಲ್ಲಿ ಆನೇಕ ಪಾತ್ರಗಳನ್ನು ನಿಭಾಯಿಸುವ ಸಂದರ್ಭಗಳು ಬರುತ್ತವೆ. ಅಂತಹ ಸಂದರ್ಭದಲ್ಲಿ ಅನೇಕ ದುಶ್ಚಟಗಳು, ದುರ್ಗುಣಗಳು ಆಕರ್ಷಿಸುತ್ತವೆ. ನಿಮ್ಮ ಬಹುಪಾಲು ಸಮಯವನ್ನು ಕಿತ್ತುಕೊಳ್ಳುತ್ತವೆ. ಹಾಗಾಗಿ ನಿಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಬೆಳೆಯುತ್ತಿರುವ ಸಮಾಜಕ್ಕೆ ಮದ್ಯಪಾನ ಮಾರಕ ಎಂಬುದನ್ನು ಅರಿತ ಮಹಾತ್ಮಾ ಗಾಂಧೀಜಿಯವರು ಸಮಾಜದ ಸ್ವಾಸ್ಥö್ಯ ಕಾಪಾಡುವ ನಿಟ್ಟಿನಲ್ಲಿ ಮಧ್ಯಪಾನ ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸ್ವಾತಂತ್ರö್ಯ ನಂತರ ಡಾ.ಮಹಾಂತ ಶಿವಯೋಗಿಗಳು ಸಮಾಜದ ಸ್ವಾಸ್ಥö್ಯ ಕಾಪಾಡಿ, ಅನಾಚಾರ ತಡೆಗಟ್ಟಲು ಹಗಲಿರುಲು ಶ್ರಮಿಸಿದರು ಎಂದು ತಿಳಿಸಿದರು.
ಹಿರಿಯ ಪ್ರಾಧ್ಯಾಪಕ ಹಾಗೂ ದಲಿತ ಅಧ್ಯಯನ ಪೀಠದ ನಿರ್ದೇಶಕ ಚಿನ್ನಸ್ವಾಮಿ ಸೊಸಲೆ ಅವರು ಮಾತನಾಡಿ ಡಾ.ಮಹಾಂತ ಶಿವಯೋಗಿಗಳ ಆದರ್ಶಗಳನ್ನು ಇಂದಿನ ಯುವ ಜನತೆ ಅರಿತು ಪಾಲಿಸುವುದರ ಮೂಲಕ ದುಶ್ಚಟಗಳನ್ನು ತೊರೆದು ಸದೃಢ ರಾಷ್ಟç ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಪ್ರಾಂಶುಪಾಲರಾದ ನಿಸ್ಸಾರಮದ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುರ್ವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು. ಅವರ ಬದುಕು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಡಿಪಾಗಿತ್ತು. ಅವರ ಆಶಯದಂತೆ ವ್ಯಸನಮುಕ್ತ ಸಮಾಜ ನಿರ್ಮಾಣದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಸಿದ್ದಯ್ಯನಕೋಟೆ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಶ್ರೀ ಬಸವಲಿಂಗ ಮಹಾ ಸ್ವಾಮೀಜಿ  ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಮನೆಯೇ ಮೊದಲ ಪಾಠಶಾಲೆ. ಮನೆಯಲ್ಲಿ ತಂದೆ-ತಾಯಿ ಉತ್ತಮ ಸಂಸ್ಕಾರ ಮಕ್ಕಳಿಗೆ ನೀಡುತ್ತಾರೋ ಆ ಮಕ್ಕಳು ಉತ್ತಮ ಸಂಸ್ಕಾರದತ್ತ ಸಾಗುತ್ತಾರೆ ಎಂದು ಹೇಳಿದರು.

ತಂಬಾಕು ಸೇವನೆಯು ಮನುಷ್ಯನ ಶರೀರವನ್ನು ಹಾಳು ಮಾಡುತ್ತದೆ. ತಂಬಾಕಿನಲ್ಲಿರುವ ನಿಕೋಟಿನ ಎಂಬ ಪದಾರ್ಥವು ತಂಬಾಕು ಸೇವನೆಗೆ ಅಂಟಿಕೊಳ್ಳುವAತೆ ಮಾಡುತ್ತದೆ. ಭಾರತದಲ್ಲಿ ವರ್ಷದಲ್ಲಿ ಸರಿಸಮಾರು 7 ಲಕ್ಷ ಜನರು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ ಸಾವನ್ನಪ್ಪುತ್ತಿದ್ದು, ಅದರಲ್ಲಿ 4 ಲಕ್ಷ ಜನರು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದರಲ್ಲಿ ಯುವಕರು ಹೆಚ್ಚಿನವರಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಶ್ರೀಮಠದ ಕಾರ್ಯದರ್ಶಿ ಪಿ.ಆರ್ ಕಾಂತರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನರ ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಕೊಂಡು ಇಡೀ ರಾಷ್ಟçದ ಗಮನಸೆಳೆದ ಇಳಕಲ್ ಮಹಾಂತ ಶಿವಯೋಗಿಗಳ ಜನ್ಮದಿನ (ಆಗಸ್ಟ್ 1) ವನ್ನು ಸರ್ಕಾರವು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಾವಿದರಾದ ಯಲ್ಲಪ್ಪ ಭಂಡಾರಿ ಮತ್ತು ತಂಡದವರಿAದ ವಚನ ಸಂಗೀತ ಗಾಯನ, ಗಾಯಕ ತಿಮ್ಮನಹಳ್ಳಿ ಡಿ.ಬಿ ನಿಂಗರಾಜು ವಚನ ಗಾಯನ ಪ್ರಸ್ತುತಪಡಿಸಿದರು. ಆರ್.ವಿ.ಮಂಜುನಾಥ ನಿರೂಪಿಸಿದರು. ಶಿಕ್ಷಕ ಪ್ರಭು ವಂದಿಸಿದರು. ಉಪನ್ಯಾಸಕ ವೃಂದದವರು ಸೇರಿದಂತೆ ಶಾಲಾ ವಿದ್ಯಾರ್ಥಿ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ