ಬಳ್ಳಾರಿ14: ಇಂದಿನ ಮಕ್ಕಳೇ ನಾಳಿನ ವಿಜ್ಞಾನಿಗಳು ಮತ್ತು ದೇಶದ ಭವಿಷ್ಯ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ತಮ್ಮ ಸುತ್ತಮುತ್ತಲಿನ ಸಮಸ್ಯೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡಬೇಕು. ಪ್ರಶ್ನಿಸುವ ಮನೋಭಾವ, ತಾರ್ಕಿಕ ಚಿಂತನೆ ಮತ್ತು ಹೊಸ ಆವಿಷ್ಕಾರಗಳತ್ತ ಗಮನಹರಿಸಿದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಬೆಂಗಳೂರು) ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಪಂ ನ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ 2026-27’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಆಸಕ್ತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ತಯಾರಿಸಿರುವ ವೈಜ್ಞಾನಿಕ ಮಾದರಿಗಳು ಮತ್ತು ಯೋಜನೆಗಳು ಭವಿಷ್ಯದ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯ ವಿವಿಧ ಶಾಲೆಗಳಿಂದ ಕಿರಿಯ ವಿಭಾಗದಲ್ಲಿ 25 ಮತ್ತು ಹಿರಿಯ ವಿಭಾಗದಲ್ಲಿ 35 ತಂಡಗಳು ಸೇರಿದಂತೆ ಒಟ್ಟು 60 ತಂಡಗಳು ಭಾಗವಹಿಸಿದ್ದವು. ಪ್ರತಿ ತಂಡದಿAದ ಇಬ್ಬರು ವಿದ್ಯಾರ್ಥಿಗಳು ಹಾಗೂ ಒಬ್ಬರು ಮಾರ್ಗದರ್ಶಿ ಶಿಕ್ಷಕರು ಪಾಲ್ಗೊಂಡಿದ್ದರು.
ಸ್ಪರ್ಧೆಯ ನಿರ್ಣಾಯಕರಾಗಿ ಬಳ್ಳಾರಿ ಡಯಟ್ ಉಪನ್ಯಾಸಕ ಕಾಶಿನಾಥ ಶಾಸ್ತಿçà ಹಾಗೂ ಬಳ್ಳಾರಿಯ ಮುನ್ಸಿಪಲ್ ಕಾಲೇಜಿನ ಉಪನ್ಯಾಸಕ ರಾಜೇಂದ್ರ ಅವರು ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರಬಂಧ ಮತ್ತು ಮಾದರಿಗಳನ್ನು ಮೌಲ್ಯಮಾಪನ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ರಾಮಚಂದ್ರ ರೆಡ್ಡಿ, ತಾಂತ್ರಿಕ ಸಹಾಯಕ ಎಸ್.ಏಕಾಂತ ರೆಡ್ಡಿ, ಯೋಜನಾ ಸಂಯೋಜಕ ಪಿ.ಸಂಜೀವ್ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.