Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧ್ಯಾನ ಮತ್ತು ಜ್ಞಾನದಿಂದ ಜೀವನದಲ್ಲಿ ಸಾರ್ಥಕತೆ: ಡಾ. ಶಿವಲಿಂಗ ಶಿವಾಚಾರ್ಯ

ಯರಗಟ್ಟಿ : ಮನು? ಆಧ್ಯಾತ್ಮಿಕ ಜ್ಞಾನದೊಂದಿಗೆ ಜಾತಿ, ಧರ್ಮ ಸಮಾನವಾಗಿ ಕಾಣಬೇಕು. ಧ್ಯಾನ ಮತ್ತು ಜ್ಞಾನದಿಂದ ಜೀವನದಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಭಾಗೋಜಕೊಪ್ಪ ಡಾ. ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸಮೀಪದ ಕೋ.ಶಿವಾಪೂರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠ ಆವರಣದಲ್ಲಿ ಆಯೋಜಿಸಿದ್ದ ಜಡೆತಲೆ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ಅವರ ೨೧ ದಿನಗಳ ಮೌನ ಅನುಷ್ಠಾನ ಮತ್ತು ಲಿಂಗಪೂಜಾ ಸಮಾರೋಪ ಮಂಗಲ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಂತರ ಸತ್ತಿಗೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದ ಅವರು ಮೌನ ಹಾಗೂ ತಮ್ಮ ನಡೆ-ನುಡಿ, ತತ್ವ ಆದರ್ಶಗಳಿಂದ ಜಗತ್ತನ್ನೆ ಗೆದ್ದ ಮಹಾ ದಾರ್ಶನಿಕರು. ಲೋಕಕಲ್ಯಾಣಕ್ಕಾಗಿ ಬರೆದ ಗ್ರಂಥ ಇಂದು ಇಡೀ ದೇಶದಲ್ಲಿ ಖ್ಯಾತಿ ಪಡೆದಿದೆ. ಆದ್ದರಿಂದ ಗುರು ತೋರಿದ ಮಾರ್ಗದಲ್ಲಿ ನಡೆದರೆ ಉತ್ತಮ ಫಲ ಪ್ರಾಪ್ತಿಯಾಗಿ ಜೀವನ ಉನ್ನತಿ ಹೊಂದುವುದು ಎಂದು ಹೇಳಿದರು.

ಮನು? ಇಂದು ಹಣ ಅಧಿಕಾರದ ಬೆನ್ನು ಹತ್ತಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾನೆ. ಮಠ ಮಾನ್ಯಗಳು ಇರುವುದು ಸಮಾಜವನ್ನು ಸರಿದಾರಿಗೆ ತರುವುದಕ್ಕೆ ಹೊರತು ಬೇರೆಯದಕ್ಕಲ್ಲ. ಮನೆ ಮತ್ತು ಮಠಗಳಿಗೆ ನಿಕಟವಾದ ಸಂಪರ್ಕ ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇಂಥ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಠಾಧೀಶರು ನೀಡುವ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಬದುಕು ಸಾರ್ಥಕತೆ ಪಡೆಯಲಿದೆ ಎಂದರು.

ಈ ವೇಳೆ ಹಣ್ಣಿಕೇರಿ ಶ್ರೀಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮಿಜಿ, ಮೊರಬ ಜಡಿಮಠದ ಮಹೇಶ್ವರ ಶಿವಾಚಾರ್ಯ ಸ್ವಾಮಿಜಿ, ಯರಗಟ್ಟಿ ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು, ಕಪ್ಪರಟ್ಟಿ-ಕಳ್ಳಿಗುದ್ದಿ ಬಸವರಾಜಸ್ವಾಮಿಜಿ, ಬಸಯ್ಯ ಹಿರೇಮಠ, ಮಹಾದೇವಪ್ಪ ಗಡ್ಡಿ, ಮಹಾಂತೇಶ ತೋಟಗಿ, ಶಿವಾನಂದ ಕಟ್ಟಿಮನಿ, ನಾಗಪ್ಪ ಹಂಜಿ, ಶಿಂಗಯ್ಯ ಮಠಪತಿ, ಫಕ್ಕಿರಪ್ಪ ಇಟ್ಟಣಗಿ, ಮಲ್ಲಿಕಾರ್ಜುನ ಅಂಗಡಿ, ಪ್ರಜ್ವಲ ಹಿರೇಮಠ, ಪ್ರವೀಣ ವಿಭೂತಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಇದ್ದರು.

ಫೋಟೋ ಶೀರ್ಷಿಕೆ :
೧೫ ಯರಗಟ್ಟಿ ೦೧

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ