Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೂರಸಂಪರ್ಕ ತಂತ್ರಜ್ಞಾನ ಸಾಮಾನ್ಯರ ಬದುಕಿಗೆ ವರದಾನ : ಡಾ. ಎಸ್.ಎಂ. ಶಶಿಧರ್




ಬಳ್ಳಾರಿ19..: ದೂರಸಂಪರ್ಕ ತಂತ್ರಜ್ಞಾನ ಪ್ರಸ್ತುತ ದಿನಗಳಲ್ಲಿ ಜನಸಾಮಾನ್ಯರ ಬದುಕಿಗೆ ನಿಜವಾದ ವರದಾನವಾಗಿದೆ ಎಂದು ಇನ್‌ಸ್ಟಿಟ್ಯೂಶನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ಮುನಿರಾಬಾದ್ ಸ್ಥಳೀಯ ಕೇಂದ್ರದ ಅಧ್ಯಕ್ಷ ಡಾ. ಎಸ್.ಎಂ. ಶಶಿಧರ್ ಹೇಳಿದರು. ನಗರದ ಪಾಲಿಟೆಕ್ನಿಕ್ ಸಭಾಂಗಣದಲ್ಲಿ  ಇನ್‌ಸ್ಟಿಟ್ಯೂಶನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ಮುನಿರಾಬಾದ್ ಕೇಂದ್ರ ಮತ್ತು ವೀ.ವಿ.ಸಂಘದ  ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ   'ವಿಶ್ವ ದೂರಸಂಪರ್ಕ ದಿನಾಚರಣೆ' ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು.


5ಜಿ ಕೇವಲ ಸ್ಮಾರ್ಟ್ಫೋನ್ ಬಳಕೆಯನ್ನು ವೇಗಗೊಳಿಸುವುದಲ್ಲ, ಇವತ್ತಿನ ತಂತ್ರಜ್ಞಾನ ‘ಇಂಟರ್‌ನೆಟ್ ಆಫ್ ಥಿಂಗ್ಸ್‌’ ರೂಪದಲ್ಲಿ ಎಲ್ಲವನ್ನೂ ಜಾಲವಾಗಿ ಜೋಡಿಸುತ್ತಿದೆ. ನಾವು ಕನಸು ಕಂಡಿದ್ದ ಸ್ಮಾರ್ಟ್ ಜಗತ್ತು ನಮ್ಮ ಬೆರಳ ತುದಿಗೆ ಬಂದಿದೆ ಎಂದು ಹೇಳಬಹುದು. ಗ್ರಾಮೀಣ ಪ್ರದೇಶಗಳಲ್ಲಿ ಈ ತಂತ್ರಜ್ಞಾನ ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮತ್ತು ಜೀವನೋಪಾಯದಲ್ಲಿ ಹೊಸ ಅವಕಾಶಗಳನ್ನು ತರುತ್ತಿದೆ. 2030ರ ವೇಳೆಗೆ ಲಭ್ಯವಾಗುವ 6ಜಿ, 5ಜಿಗಿಂತ ಸುಮಾರು ಸಾವಿರ ಪಟ್ಟು ವೇಗವಾಗಿ ಡೇಟಾವನ್ನು ಸಾಗಿಸಲಿದೆ. ಇದು ಜನರ ಜೀವನಶೈಲಿಯನ್ನು ಪುನರ್ರೂಪಿಸುವ ಒಂದು ಕ್ರಾಂತಿಕಾರಿ ಬದಲಾವಣೆ ಎಂದರು.


ಬಳ್ಳಾರಿಯ ಆರ್‌ವೈಎಂಇಸಿ  ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ಡಾ. ಎಸ್. ಪ್ರಭಾವತಿ ಅವರು ಮಾತನಾಡಿ, “ತಂತ್ರಜ್ಞಾನದಲ್ಲಿ ಮಹಿಳೆಯರ ಭಾಗವಹಿಸುವಿಕೆ ಇಂದು ಅತ್ಯಗತ್ಯವಾಗಿದೆ. ಮಹಿಳೆಯರು ಡಿಜಿಟಲ್ ಕೌಶಲ್ಯಗಳನ್ನು ಕಲಿತು ತಮ್ಮ ಕುಟುಂಬ ಮತ್ತು ಸಮಾಜವನ್ನು ಮುನ್ನಡೆಸಬಹುದು ಎಂದರು. ಹೆಲ್ವೆಟ್ ಪ್ಯಾಕರ್ಡ್ ಕಂಪನಿಯ ಹಿರಿಯ ಎಂಜಿನಿಯರ್ ಕೆ.ಎಂ. ನಂದೀಶ್ ಮಾತನಾಡಿ, “ದೂರಸಂಪರ್ಕ ತಂತ್ರಜ್ಞಾನವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಬೆಳವಣಿಗೆಗೆ ಶಕ್ತಿದಾಯಕ ಸಾಧನವಾಗಿದೆ. ಇದನ್ನು ಸಮರ್ಥವಾಗಿ ಬಳಸಿದಾಗ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮಾರ್ಗ ಸಿದ್ಧವಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್‌ನ ಪ್ರಾಚಾರ್ಯ ಬಿ. ಶ್ರೀಶೈಲಗೌಡ ಸ್ವಾಗತಿಸಿದರು. ಹೇಮಂತ್ ಕುಮಾರ್ ಅತಿಥಿಗಳನ್ನು ಪರಿಚಯಿಸಿದರು. ಉಮ್ಮೆ ಸಲ್ಮಾ ವಂದಿಸಿದರು. ಗೌಸಿಯಾ ಬೇಗಂ ಕಾರ್ಯಕ್ರಮ ನಿರೂಪಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ