Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಾ.ಸ್ಮಿತಾ ಸುರೇಬಾನಕರ್‌ಗೆ ಇತಿಹಾಸ ಸಾಂಸ್ಕೃತಿಕ ಶ್ರೀ ಪ್ರಶಸ್ತಿ

ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

ಹಸಿರು ಕ್ರಾಂತಿ ವರದಿ ಬೆಳಗಾವಿ
ಇತಿಹಾಸ ಸಂಶೋಧನೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಬೆಳಗಾವಿಯ ಹಿರಿಯ ಸಂಶೋಧಕಿ ಹಾಗೂ ಆರ್.ಪಿ.ಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಸ್ಮಿತಾ ಸುರೇಬಾನಕರ್‌ ಅವರಿಗೆ ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರತಿಷ್ಠಿತ ಇತಿಹಾಸ ಸಾಂಸ್ಕೃತಿಕ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಈಚೆಗೆ ನಡೆದ ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪುರಾಲೇಖ ತಜ್ಞ ಜೆ.ಎಂ.ನಾಗಯ್ಯ ಹಾಗೂ ಇತಿಹಾಸ ಸಂಶೋಧಕಿ ಡಾ.ಸ್ಮಿತಾ ಸುರೇಬಾನಕರ್‌ ಅವರಿಗೆ ತಲಾ ₹1 ಲಕ್ಷ ನಗದು ಬಹುಮಾನ ಒಳಗೊಂಡ ಇತಿಹಾಸ ಸಾಂಸ್ಕೃತಿಕ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಇತಿಹಾಸ ಸಂಶೋಧನೆ, ಪರಂಪರೆಯ ಸಂರಕ್ಷಣೆ ಹಾಗೂ ಸಾರ್ವಜನಿಕರಲ್ಲಿ ಐತಿಹಾಸಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಇತಿಹಾಸ ಅಕಾಡೆಮಿಯು ಕಳೆದ 3 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ. ಈ ಬಾರಿ ಇತಿಹಾಸ, ಸಂಸ್ಕೃತಿ, ಪರಂಪರೆ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಲ್ಲಿ ನಮ್ಮ ಬೆಳಗಾವಿ ನಗರದ ನಿವಾಸಿ ಡಾ.ಸ್ಮಿತಾ ಅವರು ನಡೆಸಿರುವ ಅಮೂಲ್ಯ ಸಂಶೋಧನಾ ಕಾರ್ಯವನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಡಾ.ದೇವರಕೊಂಡ ರೆಡ್ಡಿ, ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ರವೀಂದ್ರನಾಥ್, ವಿಶ್ವವಿದ್ಯಾಲಯದ ಕುಲಪತಿ ಡಾ.ಪರಮಶಿವಮೂರ್ತಿ ಹಾಗೂ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬೆಳಗಾವಿಯ ಇತಿಹಾಸ, ಸಂಸ್ಕೃತಿ ಮತ್ತು ವಾಸ್ತುಶಿಲ್ಪ ಪರಂಪರೆಯನ್ನು ಸಂಶೋಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಿರುವ ಡಾ.ಸ್ಮಿತಾ ಸುರೇಬಾನಕರ್‌ ಅವರ ಸಾಧನೆಗೆ ಸಂದಿರುವ ಈ ಗೌರವ ಜಿಲ್ಲೆಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಲಯದಲ್ಲಿ ಸಂತಸ ಮೂಡಿಸಿದೆ. ಡಾ.ಸ್ಮಿತಾ ಅವರ Splendours of Belagavi ಕೃತಿಯು ಬೆಳಗಾವಿಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಪರಿಚಯಿಸುವ ಮಹತ್ವದ ಪುಸ್ತಕವಾಗಿದೆ. ಅಲ್ಲದೆ, ಬೆಳಗಾವಿ ವಾಸ್ತುಶಿಲ್ಪ ನಿಧಿ ಕೃತಿಯಲ್ಲಿ ಜಿಲ್ಲೆಯ ಶಿಲ್ಪಕಲೆ ಹಾಗೂ ವಾಸ್ತುಶಿಲ್ಪ ಪರಂಪರೆಯ ಕುರಿತು ವಿಸ್ತೃತ ಅಧ್ಯಯನವನ್ನು ದಾಖಲಿಸಿದ್ದಾರೆ. ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅವರ 25ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಪ್ರಕಟಗೊಂಡಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ: ಎಸ್.ಎಂ. ಮುಗೆನ್ನವರ೫೦ ಸಾವಿರ ನಗದು ಬಹುಮಾನದೊಂದಿಗೆ ಗೌರವ *ಇಲಾಖೆಯ ಹಿರಿಯ ಅಧಿಕಾರಿಗಳಿಂದ ಸನ್ಮಾನಹುರಕಡ್ಲಿ ಫೌಂಡೇಶನ್‌ನಿಂದ ಉಚಿತ ಕೃತಕ ಕೈ-ಕಾಲು ಅಳತೆ ಶಿಬಿರ; ೫೦ಕ್ಕೂ ಹೆಚ್ಚು ಫಲಾನುಭವಿಗಳಿಗೆ ನೆರವುಇಂದು ಬಳ್ಳಾರಿಗೆ ಲೋಕಾಯುಕ್ತರ ಭೇಟಿ ವಿವಿಧ ಇಲಾಖೆಗಳ ಮೇಲೆ ದಾಳಿ ಮಂತ್ರಾಲಯದಲ್ಲಿ ಗೋವು-ಮೇವು ದಾನ; ಅನಾಥ ಮಕ್ಕಳಿಗೆ ದಾಸೋಹ ಸೇವೆಪ್ರಮುಖರೊಂದಿಗೆ ಹೋಗಿ ಜಿ.ಸಿ.ಕೋಟಗಿಯವರಿಗೆ ಅಧಿಕೃತ ಆಹ್ವಾನ: ಡಾ.ಎಸ್.ಬಿ.ದಳವಾಯಿದೇಶದ ಅಭಿವೃದ್ಧಿಯಲ್ಲಿ ಯುವಕರ ಸಹಭಾಗಿತ್ವ ಅತ್ಯಂತ ಮುಖ್ಯ: ಡಾ. ಸುನಿಲ್ ಎಸ್. ಜಾಲಾಪುರೆಅಂಚೆಗೆ ಹೋಗದ ಪತ್ರ ಚಲನಚಿತ್ರ ಶೀಘ್ರದಲ್ಲಿ ತೆರೆಗೆ.ಚುನ್ನಪ್ಪ ಪೂಜಾರಿ, ಶಶಿಕಾಂತ ಗುರೂಜಿ ಬಂಧನ ಖಂಡಿಸಿ ನಾಲ್ಕು ಗಂಟೆಗೂ ಅಧಿಕ ಪ್ರತಿಭಟನೆ; ವಾಹನ ಸಂಚಾರ ಅಸ್ತವ್ಯಸ್ತರಾಮದುರ್ಗದಲ್ಲಿ ಉದ್ವಿಗ್ನತೆ: ರೈತ ಮುಖಂಡರ ಬಂಧನ ಖಂಡಿಸಿ ರಸ್ತೆ ತಡೆ, ಪೊಲೀಸರಿಂದ ಪ್ರತಿಭಟನಾಕಾರರ ವಶ