Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕಕ್ಕೆ 10,175 ಕೋಟಿ ರೂ. ಬಿಡುಗಡೆ ಮಾಡಿ : ಡಾ. ಸಯ್ಯದ್ ನಾಸೀರ್ ಹುಸೇನ್





ನವದೆಹಲಿ, ಫೆ. 05;-ದೇಶದ 15 ನೇ ಹಣಕಾಸು ಆಯೋಗ ಮತ್ತು ಇತರೆ ಯೋಜನೆಗಳ ಅಡಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬಾಕಿ ಇರುವ 10,175 ಕೋಟಿ ರೂಪಾಯಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸೀರ್ ಹುಸೇನ್ ಅವರು ಆಗ್ರಹಿಸಿದ್ದಾರೆ.

ಸಂಸತ್ತಿನ ಶೂನ್ಯವೇಳೆಯಲ್ಲಿ ಬುಧವಾರ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದ ಅವರು, ಕರ್ನಾಟಕದ 6,000 ಗ್ರಾಮ ಪಂಚಾಯಿತಿಗಳಿಗೆ 2,133 ಕೋಟಿ ರೂಪಾಯಿಗೂ ಅಧಿಕ ಹಣದ ಬಾಕಿ ಇದೆ. ಕೇಂದ್ರ ಸರ್ಕಾರ ಕರ್ನಾಕಟ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಬಿಡುಗಡೆ ಮಾಡಬೇಕಾಗಿರುವ ಮೊದಲ ಕಂತಿನ 1,092 ಕೋಟಿ ಹಣದ ಅನುದಾನವೂ ಬಿಡುಗಡೆ ಆಗಿಲ್ಲ. ಕರ್ನಾಟಕಕ್ಕೆ ಬಿಡುಗಡೆ ಆಗಬೇಕಿದ್ದ ಹಣವನ್ನು ಬಿಡುಗೆ ಮಾಡುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಕಾರಣ  ಕರ್ನಾಟಕದ ಗ್ರಾಮ ಪಂಚಾಯಿತಿಗಳು ಕೇಂದ್ರ ಸರ್ಕಾರದ ನಿಧಿಯ ನಿರೀಕ್ಷೆಯಲ್ಲಿದ್ದು, ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕರ್ನಾಟಕಕ್ಕೆ 1,066 ಕೋಟಿ ರು.ಗಳು ಹಾಗೂ ಜಲಜೀವನ ಯೋಜನೆ ಅಡಿಯಲ್ಲಿ ರೂಪಾಯಿ 6,976 ಕೋಟಿ ಬಾಕಿ ಇದೆ. 15ನೇ ಹಣಕಾಸು ಆಯೋಗವನ್ನು ವಿಶೇಷವಾಗಿ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಗ್ರಾಮ ಪಂಚಾಯತಿಗಳಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶದಿಂದ ರಚಿಸಲಾಗಿದೆ. ಆದರೆ, ಈ ಉದ್ದೇಶವನ್ನು ಈಡೇರಿಸುವಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ಧಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ