ತಾಳಿಕೋಟೆ, ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ ಪುರಸ್ಕೃತ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೯ನೇ ಜನ್ಮದಿನವನ್ನು ಸೇವಾ ದಿನವನ್ನಾಗಿ ಆಚರಿಸುವ ಮೂಲಕ ತಾಳಿಕೋಟೆ ಸಮೂದಾಯ ಆರೋಗ್ಯ ಕೇಂದ್ರದಲ್ಲಿಯ ಸುಮಾರು ೫೫ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಲಯ ಮೇಲ್ವಿಚಾರಕ ನಿಂಗನಗೌಡ ಪಾಟೀಲ ಅವರು, ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರ ಸೇವಾ ಚಿಂತನೆ, ಮಾನವೀಯ ಮೌಲ್ಯಗಳು ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಯ ಬಗೆಗಿನ ಕಾಳಜಿಯನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವನ್ನು ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ವೈದ್ಯಾಧಿಕಾರಿ ಎ.ಜೆ. ಬಿರಾದಾರ, ಡಾ.ಮಧು ಅಗರವಾಲಾ, ಎನ್‌ಸಿಡಿ ಆಪ್ತ ಸಮಾಲೋಚಕಿ ಸಿದ್ದಮ್ಮ ಬ್ಯಾಲ್ಯಾಳ, ವಲಯ ಮೇಲ್ವಿಚಾರಕಿ ಶೋಭಾ ಎಚ್., ಸೇವಾ ಪ್ರತಿನಿಧಿಗಳು ಹಾಗೂ ಸಿಎಸ್‌ಸಿ ಸೇವಾದಾರರು ಉಪಸ್ಥಿತರಿದ್ದರು.