ಕೊಪ್ಪಳ ಆಗಸ್ಟ್ 24 ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆಗಸ್ಟ್ 24ರಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಇದೆ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 01.10.2026ರ ಅರ್ಹತಾ ದಿನಾಂಕಕ್ಕೆ ಅನ್ವಯಿಸುವಂತೆ ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆನಡೆಯಿತ್ತಿದ್ದು, ಜಿಲ್ಲೆಯಾದ್ಯಂತ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆ. 24 ರಿಂದ ಸೆಪ್ಟೆಂಬರ್ 23 ರವರೆಗೆ ಅವಕಾಶವಿದ್ದು, ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಎಂದು ವಿವರಿಸಿದರು.
*ಕರಡು ಮತದಾರರ ವಿವರ:* ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ, ಕೊಪ್ಪಳ, ಈ 5 ವಿಧಾನಸಭಾ ಕ್ಷೇತ್ರಗಳಲ್ಲಿ 5,19,142 ಪುರುಷ ಮತದಾರರು, 5,22,189 ಮಹಿಳಾಮತದಾರರು ಮತ್ತು 57 ಇತರರು ಸೇರಿ ಜಿಲ್ಲೆಯಲ್ಲಿ ಒಟ್ಟು 10,41,388 ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿ, ಎಲ್ಲಾ ಮತಗಟ್ಟೆಗಳಲ್ಲಿ ಮತ್ತು ಜಿಲ್ಲಾ ವೆಬ್‌ಸೈಟ್ https://koppal.nic.
ಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 1,48,826 ಮತದಾರರನ್ನು ಗೈರು, ವರ್ಗಾವಣೆ, ಮೃತ, ಡುಬ್ಲಿಕೇಟ್ ಮತ್ತು ಇತರೆ (ಎ.ಎಸ್.ಡಿ.ಡಿ.ಒ) ಎಂದು ಗುರುತಿಸಲಾಗಿದ್ದು, ಈ ವಿವರವನ್ನು ಸಹ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ನಮೂನೆ-6, ಅನಿವಾಸಿ ಭಾರತೀಯರಿಗೆ (ಎನ್.ಆರ್.ಐ) ನಮೂನೆ-6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ-7 ಹಾಗೂ ತಿದ್ದುಪಡಿಗಾಗಿ ನಮೂನೆ-8 ನ್ನು ಆಯಾ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ECINET ಮೊಬೈಲ್ ಆ್ಯಪ್ / voters.eci.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
*ವಿಶೇಷ & ಮಿಂಚಿನ ನೋಂದಣಿ ಅಭಿಯಾನ:* ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರದಂದು (ಆಗಸ್ಟ್ 29, 30 ಹಾಗೂ ಸೆಪ್ಟೆಂಬರ್ 5, 6, 12, 13, 19 ಮತ್ತು 20ರಂದು) ಬೂತ್ ಮಟ್ಟದ ಅಧಿಕಾರಿಗಳನ್ನು ಹಾಗೂ ಇತರೆ ಅಧಿಕಾರಿಗಳನ್ನು ನಿಯೋಜನೆ ಮಾಡುವ ಮೂಲಕ ಅಭಿಯಾನವನ್ನು ಕೈಗೊಳ್ಳಲಾಗುವುದು. ವಸತಿ ಪ್ರದೇಶಗಳು, ಅಪಾರ್ಟ್ಮೆಂಟ್, ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಇತರೆ ಸ್ಥಳಗಳಲ್ಲಿ ಮೀಂಚಿನ ನೋಂದಣಿ ಅಭಿಯಾನಗಳನ್ನು ನಡೆಸಿ. ಮತದಾರರ ನೋಂದಣಿಯನ್ನು ಖಚಿತಪಡಿಸಿಕೊಳ್ಳಲಾಗುವುದು. ಇದಲ್ಲದೆ ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗದ ಮತದಾರರು ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ನಿಗದಿತ ಘೋಷಣಾ ಪತ್ರದೊಂದಿಗೆ ನಮೂನೆ-6 ಅನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬಹುದು ಎಂದು ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುವುದಕ್ಕಾಗಿ ಎಲ್ಲಾ ಅಧಿಕಾರಿಗಳು, ವಿಶೇಷವಾಗಿ ಬಿಎಲ್‌ಓ.ಗಳು ಶ್ರಮಿಸಿದ್ದಾರೆ. ಈ ಕಾರ್ಯಕ್ಕೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಬಿಎಲ್‌ಎ.ಗಳು ಸಹ ಅಗತ್ಯ ಸಹಕಾರ ನೀಡಿದ್ದಾರೆ ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಅಭಿನಂಧಿಸಿದರು.
*ಎಸ್‌ಐಆರ್ ಪ್ರಕ್ರಿಯೆ ಅಚ್ಚುಕಟ್ಟು; ಮೆಚ್ಚುಗೆ:* ಕೊಪ್ಪಳ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಇಲ್ಲಿಯವರೆಗೆ ಅಚ್ಚುಕಟ್ಟಾಗಿ ನಡೆದಿದ್ದು, ಜಿಲ್ಲಾಡಳಿತ ಮತ್ತು ಬಿಎಲ್‌ಓಗಳ ಕಾರ್ಯವು ಶ್ಲಾಘನೀಯವಾಗಿದೆ ಎಂದು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
*ಕರಡು ಮತದಾರರ ಪಟ್ಟಿ ವಿತರಣೆ:* ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಕರಡು ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇದೇ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಚುನಾವಣಾ ತಹಶೀಲ್ದಾರ ರವಿ ವಸ್ತ್ರದ್, ಜಿಲ್ಲೆಯ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಕೃಷ್ಣ ಇಟ್ಟಂಗಿ, ರಾಜು ಬಾಕ್ಳೆ, ಸೋಮನಗೌಡ, ಕೆ.ಎಸ್ ಮೈಲಾರಪ್ಪ, ಮಹೇಬೂಬಪಾಶಾ ಜಮಖಾಂದಾರ್, ಶರಣು ಶೆಟ್ಟರ್ ಸೇರಿದಂತೆ ಜಿಲ್ಲಾ ಚುನಾವಣಾ ಶಾಖೆಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.