LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

ಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹ

ಬಳ್ಳಾರಿ, ಆ. 04 ತುಂಗಭದ್ರಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಮತ್ತು ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್‌ 10ರೊಳಗೆ ಎಲ್ಲಾ ನೀರಾವರಿ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘದ ರಾಜ್ಯಾಧ್ಯಕ್ಷ ದರೂರ್ ಪುರುಷೋತಮ್ ಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತುರ್ತಾಗಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸಿ ರೈತರ ಹಿತದೃಷ್ಟಿಯಿಂದ ನೀರು ಬಿಡುಗಡೆಗೆ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿರುವ ಕಾರಣ ರೈತರು ಭತ್ತ ಸೇರಿದಂತೆ ವಿವಿಧ ಬೆಳೆಗಳ ನಾಟಿ ಮತ್ತು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ತುಂಗಭದ್ರಾ ಜಲಾಶಯದಲ್ಲಿ ಆಗಸ್ಟ್‌ 3ರ ವೇಳೆಗೆ ನೀರಿನ ಮಟ್ಟ 1613.16 ಅಡಿ ತಲುಪಿದ್ದು, 44.190 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 57,785 ಕ್ಯೂಸೆಕ್ ತತ್ಕ್ಷಣದ ಒಳಹರಿವು ದಾಖಲಾಗಿದ್ದು, ಈ ಪರಿಸ್ಥಿತಿಯನ್ನು ಗಮನಿಸಿ ವಿಳಂಬವಿಲ್ಲದೆ ನೀರಾವರಿ ನೀರು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮೋಕಾ ಸಣ್ಣ ಅಂಜಿನಪ್ಪ, ಶ್ರೀಧರ್, ವೀರಣಗೌಡ, ವೀರಭದ್ರ, ರಾಜಶೇಖರ್, ಬಸವರಾಜ್ ಸ್ವಾಮಿ, ಸಾಗರ್ ಗೌಡ, ಭೀಮಯ್ಯ ಸೇರಿದಂತೆ ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ: ತೀವ್ರ ರಕ್ತಸ್ರಾವ, ಆಸ್ಪತ್ರೆಗೆ ದಾಖಲುಸಂಗ್ರಹಿತ ಅಧಿಕೃತ ಲಿಂಗಾಯತ ಧರ್ಮದ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಹಂಚಲಾಗುವುದು : ಡಾ.ಎಸ್ ಎಮ್ ಜಾಮದಾರಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರು