Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಟಕ ಆಕಾಡೆಮಿ ಪ್ರಶಸ್ತಿ ಬಳ್ಳಾರಿ ಜಿಲ್ಲೆ ಕಡೆಗಣನೆ : ಕಲಾವಿದರ ಸಂಘ ಅಸಮಾಧಾನ 






 ಬಳ್ಳಾರಿ ಜುಲೈ 26 : ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ನೀಡಲಾಗುವ ವಾರ್ಷಿಕ ಮತ್ತು ಜೀವಮಾನದ ಸಾಧನೆ  ಸೇರಿದಂತೆ ಇತರ ಪ್ರಶಸ್ತಿಗಳ ಆಯ್ಕೆಯಲ್ಲಿ ಬಳ್ಳಾರಿ ಜಿಲ್ಲೆಯ ಕಲಾವಿದರನ್ನು ಕಡೆಗಣಿಸಲಾಗಿದೆ ಇದು ನಾಟಕ ಅಕಾಡೆಮಿಯ ಬಳ್ಳಾರಿ ಜಿಲ್ಲೆಯ ಬಗ್ಗೆ ಹೊಂದಿರುವ  ನಿರ್ಲಕ್ಷ ಧೋರಣೆಯಾಗಿದೆ  ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ವಿರುದ್ಧ ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ಅಸಮಾಧಾನವನ್ನು ವ್ಯಕ್ತಪಡಿಸಿತು.


 ಇಂದು ನಗರದ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಕಾರ್ಯದರ್ಶಿ ತಿಪ್ಪೇಸ್ವಾಮಿ, ಬಳ್ಳಾರಿ ಜಿಲ್ಲೆಗೆ ಗಂಡು ಮೆಟ್ಟಿನ ನಾಡು , ಕಲಾವಿದರ ಜಿಲ್ಲೆ ಎಂದು ಹೆಸರುವಾಸಿಯಾಗಿದೆ ಇಂಥ ಜಿಲ್ಲೆಯಲ್ಲಿ ಕಳಗಣಿಸಿರುವುದು ನಾಟಕ ಅಕಾಡೆಮಿಯ ತಾರತಮ್ಯ ಧೋರಣೆಯನ್ನು ತೋರಿಸುತ್ತದೆ ಎಂದು ಅಕಾಡೆಮಿ ವಿರುದ್ಧ ಕಿಡಿಕಾರಿದರು. ಅಷ್ಟೇ ಅಲ್ಲದೆ ಬಳ್ಳಾರಿ ಜಿಲ್ಲೆಯ ಮತ್ತು ಜಿಲ್ಲೆಯ ಕಲಾವಿದರ ಬಗ್ಗೆ ಇಲ್ಲಿನ ರಾಜಕಾರಣಿಗಳು ಹೊಂದಿರುವ ತಾತ್ಸಾರ ಮನೋಭಾವನೆ ಕೂಡ ಕಾರಣವಾಗಿದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಸಂಗಡಿಗೆ ಅವರ ತವರು ಜಿಲ್ಲೆಗೆ ಎರಡೆರಡು ಪ್ರಶಸ್ತಿಗಳನ್ನು ನೀಡಲಾಗಿದೆ, ಜಿಲ್ಲೆಯ ಶಾಸಕರು ಮಾಜಿ ಸಚಿವರು ಕೂಡಲೇ  ಈ ವಿಷಯದ ಬಗ್ಗೆ ಗಮನಹರಿಸಿ ಬಳ್ಳಾರಿ ಜಿಲ್ಲೆಯ ಕಲಾವಿದರಿಗೆ ಆದ ಅನ್ಯಾಯವನ್ನು ಸರಿಪಡಿಸಬೇಕೆಂದು ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ವತಿಯಿಂದ ಮನವಿ ಮಾಡಿದರು.


 ಕಲಾವಿದರ ಸಂಘದ ಅಧ್ಯಕ್ಷರಾದ ಎಲ್ಲನಗೌಡ ಶಂಕರ ಬಂಡೆ ಕಾರ್ಯದರ್ಶಿ ಮುದ್ದಾಟನೂರು ತಿಪ್ಪೇಸ್ವಾಮಿ, ಸುಬ್ಬಣ್ಣ

ಹಚ್ಚೋಳ್ಳಿ ಅಮರೇಶ್, ಚಿಗುರು ಹುಲುಗಪ್ಪ  ಹುಲುಗಪ್ಪ,  ವೃತ್ತಿ ರಂಗಭೂಮಿ ಕಲಾವಿದರಾದ ಜಯಶ್ರೀ  ಪಾಟೀಲ್ ಸೇರಿದಂತೆ ಇತರರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ