Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ನಾಟಕ ಕಲೆ ಸಾಹಿತ್ಯ, ಸಮಾಜದ ಜೀವನಾಡಿ"

ಬಳ್ಳಾರಿ, ಜೂ.16: ನಾಟಕ, ಕಲೆ, ಸಾಹಿತ್ಯ ಚಟುವಟಿಕೆಗಳು ಸಮಾಜದ ಜೀವನಾಡಿಯಾಗಿದ್ದು ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಸೃಜನಶೀಲ ಮಾಧ್ಯಮವಾಗಿವೆ ಎಂದು ಕರ್ನಾಟಕ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದರು. ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ರಂಗತೋರಣ ಸಾಂಸ್ಕೃತಿಕ ಸಂಘಟನೆ ಹಮ್ಮಿಕೊಂಡಿದ್ದ ಕಪ್ಪಗಲ್ಲು ನಾಟಕೋತ್ಸವದ ಎರಡನೇ ದಿನದ ನಾಟಕಕ್ಕೆ ಚಾಲನೆ ಹಾಗೂ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿ ಅವರು ಮಾತನಾಡಿದರು.
ಕಲೆ, ಸಾಹಿತ್ಯ, ರಂಗಭೂಮಿ ಚಟುವಟಿಕೆಗಳಿಂದ ಸಾಮಾಜಿಕ ಜಾಗೃತಿ ಮೂಡುತ್ತದೆ. ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ಜೊತೆಗೆ ನಮ್ಮ ಮೂಲ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಮುಂದಿನ ಪೀಳಿಗೆಗೆ ತಲುಪಿಸಲು ಸಾಧ್ಯವಾಗುತ್ತದೆ. ನೈತಿಕ ಮೌಲ್ಯಗಳನ್ನು ಬಿತ್ತಲು ರಂಗಭೂಮಿ ಚಟುವಟಿಕೆಗಳು ಹೆಚ್ಚು ಪೂರಕವಾಗಿ ಕಾರ್ಯನಿರ್ವಹಿಸುತ್ತವೆ. ಸೃಜನಶೀಲತೆಯೂ ಹೆಚ್ಚುತ್ತದೆ. ಉತ್ತಮ ನಾಟಕಗಳ ವೀಕ್ಷಣೆಯಿಂದ ಕಲ್ಪನಾಶಕ್ತಿ, ಚಿಂತನಾ ಸಾಮರ್ಥ್ಯ ವೃದ್ಧಿಸುತ್ತದೆ ಹಾಗೂ ಪರಸ್ಪರ ಸಹಬಾಳ್ವೆಯ ಮನೋಭಾವ ಬೆಳೆಯುತ್ತದೆ. ಉತ್ತಮ ವಿಚಾರ ಮತ್ತು ಸಂದೇಶಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನೆರವಾಗುತ್ತದೆ. ಕಲೆ, ಸಾಹಿತ್ಯ ಹಾಗೂ ರಂಗಭೂಮಿ ಕೇವಲ ಮನರಂಜನಯ ಸಾಧನಗಳಲ್ಲ. ಅವು ಸಮಾಜದ ಜಾಗೃತಿ, ಸಂಸ್ಕೃತಿ ಸಂರಕ್ಷಣೆ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತವೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಪದವಿ ಪಡೆಯುವಂತಾಗಲಿ. ಆದರೆ, ಫೇಲ್ ಆದ ವಿದ್ಯಾರ್ಥಿಗಳು ಕೊರಗುವುದು ಬೇಡ. ಪರೀಕ್ಷೆಯಲ್ಲಿ ಫೇಲಾಗುವುದು ಅಂತಿಮವಲ್ಲ. ಬದುಕಿನಲ್ಲಿ ಪಾಸ್ ಆಗುವುದು ದೊಡ್ಡ ಸಂಗತಿ. ಸೋಲು ಹೊಸದೊಂದು ಕಲಿಯುವ ಅನುಭವ ಎಂದೇ ಭಾವಿಸಬೇಕು. ಅಂಕಗಳು ಮಾತ್ರ ಭವಿಷ್ಯವನ್ನು ನಿರ್ಧರಿಸುವುದಿಲ್ಲ. ಸೋಲುಗಳು ಮತ್ತಷ್ಟೂ ಗಟ್ಟಿಯನ್ನಾಗಿಸುತ್ತವೆ. ಬದುಕಿನಲ್ಲಿ ಸಂಕಷ್ಟಗಳನ್ನು ಎದುರಿಸುವ ಸಾಮರ್ಥ್ಯವನ್ನು ರೂಪಿಸುತ್ತವೆ. ತಪ್ಪುಗಳಿಂದ ಕಲಿತು ಮತ್ತೆ ಪುಟಿದೇಳಬೇಕು ಎಂದು ಸಲಹೆ ನೀಡಿದರು.
ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಪುರುಷೋತ್ತಮ ರೆಡ್ಡಿ ದಮ್ಮೂರು, ಆಹಾರ ಮತ್ತು ಸರಬರಾಜು ಇಲಾಖೆಯ ಬಿ.ಕಟ್ಟೆಗೌಡ, ನಿವೃತ್ತ ಸಹಾಯಕ ಔಷಧ ನಿಯಂತ್ರಣಾಧಿಕಾರಿ ಕೆ.ಎಸ್.ಮಲ್ಲಿಕಾರ್ಜುನ, ಗ್ರಾಮದ ಮುಖಂಡರಾದ ದೊಡ್ಡ ರಾಮಾಂಜಿನಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಅವರು ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ ಆಚಾರ್ ಕಪ್ಪಗಲ್ಲು ಹಾಗೂ ಮೆಹತಾಬ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಜೇವರ್ಗಿ ರಾಜಣ್ಣ ಅವರ ರಚನೆ-ನಿರ್ದೇಶನದ ಕುಂಟಕೋಣ ಮೂಕ ಜಾಣ ನಾಟಕ ಪ್ರದರ್ಶನಗೊಂಡಿತು. ಕಪ್ಪಗಲ್ಲು, ಸಿರಿವಾರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನಾಟಕ ವೀಕ್ಷಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ