Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾದೇವ ಕಲಾ ಸಂಘದಿಂದ ನಾಟಕ ಹಬ್ಬ-2025






ಬಳ್ಳಾರಿ,ಜು.04: ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಕೆಲಸ ನಮ್ಮದಾಗಬೇಕು ಎಂದು ಹಚ್ಚೋಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಎಚ್.ಕೆ.ಸಿದ್ದಯ್ಯ ಸ್ವಾಮಿ ಅವರು  ಹೇಳಿದರು.


ಹಂದ್ಯಾಳು ಮಹಾದೇವ ತಾತ ಕಲಾ ಸಂಘ ವತಿಯಿಂದ ಸಿರುಗುಪ್ಪ ತಾಲೂಕಿನ ಕುಡುದರಹಾಳ ಗ್ರಾಮದ ತಾಯಮ್ಮ ದೇವಿ ಪುಣ್ಯ ಆಶ್ರಮದ ಎಲೆವಾಳು ಸಿದ್ದಯ್ಯ ಸ್ವಾಮಿ ಬಯಲು ರಂಗಮಂದಿರದಲ್ಲಿ ಗುರುವಾರ ನಡೆದ “ನಾಟಕ ಹಬ್ಬ 2025” ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಇಂದು ಡಾಕ್ಟರ್, ಇಂಜಿನಿಯರ್ ಆಗಬೇಕೆನ್ನುವ ಅನೇಕರು ಕನಸು ಕಾಣುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದ ಯುವಕರಲ್ಲಿ ಕಲೆ ಸಂಸ್ಕೃತಿ ಉಳಿಸುವಲ್ಲಿ ಮಹಾದೇವ ತಾತ ಕಲಾ ಸಂಘವು ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.


ಮಹಾದೇವ ತಾತಾ ಕಲಾ ಸಂಘದ ಅಧ್ಯಕ್ಷ ಪುರುಷೋತ್ತಮ ಹಂದ್ಯಾಳು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಬಂಧಗಳು ಜೀವನದ ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ, ಭಾವನಾತ್ಮಕ ಯೋಗಕ್ಷೇಮಕ್ಕೆ ಮತ್ತು ಬದುಕುಳಿಯುವಿಕೆಗೆ ಸಂಬಂಧಗಳು ಬಹಳ ಮುಖ್ಯ ಎಂದು ಹೇಳಿದರು.


ಕುಡುದರಹಾಳ್ ತಾಯಮ್ಮ ದೇವಿ ಪುಣ್ಯ ಆಶ್ರಮದ ಪೀಠಾಧ್ಯಕ್ಷ ಡಾ.ಶಿವಕುಮಾರ್ ತಾತ ಅವರು ದಿವ್ಯಸಾನಿಧ್ಯ ವಹಿಸಿ ಮಾತನಾಡಿ ಸಂಬಂಧಗಳು ನಮ್ಮ ಸ್ವಯಂ ಅರಿವು ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದರು.


ಕಾಯಕ್ರಮದಲ್ಲಿ ಕುಮಾರ ಪ್ರಸಾದ್ ಸಂಗೀತ ಗಾಯನ ಪ್ರಸ್ತುತಪಡಿಸಿದರು. ಬಳಿಕ ಸಿರಿಗೇರಿ ಧಾತ್ರಿ ರಂಗ ಸಂಸ್ಥೆಯ ಕಲಾವಿದರು “ಸಂಬಂಧ” ಎಂಬ ನಾಟಕವನ್ನು ಪ್ರದರ್ಶಿಸಿದರು.


ಈ ವೇಳೆ ಕುಡದರಹಾಳು ಗ್ರಾಮದ ಗುತ್ತಿಗೆದಾರರಾದ ಬಿ.ವೆಂಕಟೇಶ, ಮುಖಂಡರಾದ ಕೆ.ಪಿ.ಖಾಸಿಂ ಸಾಬ್, ಹಚ್ಚೋಳ್ಳಿಯ ಜ್ಞಾನರೆಡ್ಡಿ, ಹಚ್ಚೋಳ್ಳಿ  ಗ್ರಾಪಂ ಮಾಜಿ  ಸದಸ್ಯ ಪಾಲಕ್ಷಿ ಗೌಡ, ಹಚ್ಚೊಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಚ್.ಎಸ್.ಬುಷಪ್ಪ ಸಹುಕಾರ, ಹೆಚ್.ಕೆ.ನಾಗರಾಜ, ಪಿ.ಭಾಷಾ, ಹುಸೇನಪ್ಪ, ಮುದುಕಪ್ಪ, ಬೀರಲಿಂಗ ಸೇರಿದಂತೆ ಮುಂತಾದ ಹಿರಿಯರು ಉಪಸ್ಥಿತರಿದ್ದರು.


 ಅಂಬರೀಶ್ ಹಚ್ಚೋಳ್ಳಿ ಸ್ವಾಗತಿಸಿದರು. ಜಿ.ಲಿಂಗಪ್ಪ ವಂದಿಸಿದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ