Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗನೂರಿ ಗ್ರಾಮಕ್ಕೆ ಶೀಘ್ರದಲ್ಲೇ ಕುಡಿಯುವ ನೀರು ಪೂರೈಕೆ

ರಾಮದುರ್ಗ: ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ತಾಲೂಕಿನ ಬಟಕುರ್ಕಿ ಗ್ರಾ.ಪಂ ವ್ಯಾಪ್ತಿಯ ನಾಗನೂರ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿ ಪರಿಹರಿಸುವ ನಿಟ್ಟಿನಲ್ಲಿ ಮುಂದಾದರು.
ಸೂಪರಿಂಟೆಂಡಿಂಗ್ ಎಂಜಿನಿಯರ್ ಕಿರಣ್ ಘೋರ್ಪಡೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಮರ್ ನಾಯಕ್ ಎಸ್, ರಿಇತರ ಅಭಿಯಂತರರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ತಂಡ ನಾಗನೂರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಿದರು.
ಶಾಸಕ ಅಶೋಕ ಪಟ್ಟಣ ಅವರ ಸೂಚನೆಯ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ನಾಗನೂರಿನಲ್ಲಿ ಶೀಘ್ರದಲ್ಲೇ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.
ಗ್ರಾಮದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿಯನ್ನು ಸಂಗ್ರಹಿಸಿ, ಅವುಗಳನ್ನು ತಕ್ಷಣವೇ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಾಗಿ ಹೇಳಿದರು.
ಅಲ್ಲದೇ ಗ್ರಾಮದಲ್ಲಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಯಾವುದೇ ವಿಳಂಬವಾಗದಂತೆ ಕಾರ್ಯನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಗ್ರಾಮಸ್ಥರು ಕೂಡ ಅಧಿಕಾರಿಗಳ ಈ ಭೇಟಿ ಹಾಗೂ ಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿದ್ದು, ನೀರಿನ ಸಮಸ್ಯೆ ಬೇಗ ನಿವಾರಣೆ ಮಾಡಿ ಸಮಸ್ಯೆಯನ್ನು ಬಗೆ ಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಹಾಗೂ ಗ್ರಾಮದ ಅನೇಕ ಸಾರ್ವಜನಿಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ