ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ
ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದ ಸಾತೇರಿ ಮೌಳಿ ಮಂದಿರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ೫೦ ಲಕ್ಷ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದ್ದು, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಯುವರಾಜ ಕದಂ, ಕಲ್ಲಪ್ಪ ಕಡೋಲ್ಕರ್, ಮಾರುತಿ ಬೆಳಗಾಂವ್ಕರ್, ಸ್ಥಳೀಯ ನಿವಾಸಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.