ಮಹಾಲಿಂಗಪುರದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಸಕ ಸಿದ್ದು ಸವದಿ ಭೇಟಿ ವಿದ್ಯಾರ್ಥಿಗಳ ಸವಾಂಗೀಣ ಅಭಿವೃದ್ಧಿಗೆ ಒತ್ತು.
ಮಹಾಲಿಂಗಪುರ,ಜು,೧೬:ನಗರದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಸುಶ್ರುತ ವಿಜ್ಞಾನ ಪ್ರಯೋಗಾಲಯ, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಶಾಲಾ ಸಂಸತ್ತು ಹಾಗೂ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭವು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಜನಪ್ರಿಯ ಶಾಸಕ ಸಿದ್ದು ಸವದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸುಶ್ರುತ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ, ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಬಳಿಕ ಪ್ರಯೋಗಾಲಯವನ್ನು ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತರಾಗದೆ ವಿಜ್ಞಾನ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಯಕತ್ವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಪ್ರಯೋಗಾಲಯಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ" ಎಂದು ಹೇಳಿದರು.
ಇದೇ ವೇಳೆ ಶಾಲೆಯ ವತಿಯಿಂದ ಶಾಸಕ ಸಿದ್ದು ಸವದಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಶಂಕರಗೌಡ ಪಾಟೀಲ, ಶೇಖರ ಅಂಗಡಿ, ಭೀಮಶಿ ಗೌಂಡಿ, ಶಿವಾನಂದ ಅಂಗಡಿ, ವಿಜಯ ಸಬಕಾಳೆ, ಅರ್ಜುನ ಮೋಪಗಾರ, ಚನ್ನಪ್ಪ ಪಟ್ಟಣಶೆಟ್ಟಿ, ಮಹೇಶ ಜಿಡ್ಡಿಮನಿ, ತಿಪ್ಪಣ್ಣ ಬಂಡಿವಡ್ಡರ, ಸಂಜಯ ರಾಠೋಡ, ಈರಪ್ಪ ಬೀಳಗಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಶಾಲೆಯಲ್ಲಿ ನಿರ್ಮಿಸಲಾದ ಸುಶ್ರುತ ವಿಜ್ಞಾನ ಪ್ರಯೋಗಾಲಯ ಹಾಗೂ ವಿವಿಧ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
೧೫ mಟಠಿ ೦೧ ಫೋಟೋ