Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಬರ ಘೋಷಣೆ ಕೇವಲ ಕಾಗದಕ್ಕೆ ಸೀಮಿತವಾಗಬಾರದು-ದೊಡಮನಿ

ರೈತರ ಖಾತೆಗೆ ಬರ ಪರಿಹಾರ ಜಮೆ ಮಾಡದ ಸರ್ಕಾರದ ವಿರುದ್ಧ ಆಕ್ರೋಶ; ಉಗ್ರ ಹೋರಾಟದ ಎಚ್ಚರಿಕೆ





ತಾಳಿಕೋಟೆ,  ವಿಜಯಪುರ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದ್ದರೂ, ಇಂದಿಗೂ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಜಮೆ ಮಾಡದಿರುವುದು ಖಂಡನೀಯವಾಗಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಚಂದ್ರಕಾಂತ್ ಎಸ್. ಕಾದ್ರೊಳ್ಳಿ ಬಣದ ತಾಲೂಕಾಧ್ಯಕ್ಷ ರಮೇಶ ಯ. ದೊಡಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
      ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ, ಕುಟುಂಬ ನಿರ್ವಹಣೆಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ಸರ್ಕಾರ ಬರ ಪರಿಹಾರ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
     ಬರಗಾಲ ಘೋಷಣೆ ಮಾಡುವುದು ಕೇವಲ ಕಾಗದದ ಮೇಲಿನ ಘೋಷಣೆಯಾಗಬಾರದು. ಅದರ ನೈಜ ಪ್ರಯೋಜನ ಸಂಕಷ್ಟದಲ್ಲಿರುವ ರೈತರಿಗೆ ತಲುಪಬೇಕು. ಸರ್ಕಾರದ ಘೋಷಣೆಗಳು ರೈತರ ಬದುಕಿನಲ್ಲಿ ಬದಲಾವಣೆ ತರದಿದ್ದರೆ ಅವುಗಳಿಗೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬೆಳೆ ನಷ್ಟ ಪರಿಹಾರದ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
      ರೈತರ ತಾಳ್ಮೆಯನ್ನು ಸರ್ಕಾರ ಪರೀಕ್ಷಿಸಬಾರದು. ಅನ್ನದಾತರ ಬದುಕಿನೊಂದಿಗೆ ಚೆಲ್ಲಾಟವಾಡದೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರೈತರ ಹಿತದೃಷ್ಟಿಯಿಂದ ಸಂಘಟನೆಯ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹ್ಯಾಂಡ್‌ಬಾಲ್ ಕ್ರೀಡಾಕೂಟದಲ್ಲಿ ಅಥಣಿ ಜೆ.ಎ. ಕಾಲೇಜಿಗೆ ದ್ವಿಪ್ರಥಮ/ ಬಾಲಕ ಮತ್ತು ಬಾಲಕಿಯರ ತಂಡ ರಾಜ್ಯಮಟ್ಟಕ್ಕೆ ಆಯ್ಕೆಸನ್ಮಾರ್ಗ ಕಾಲೇಜಿನ ಫುಟ್‌ಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆನಾಗರಮಡುವು ಗ್ರಾಮದಲ್ಲಿ ಪ್ರಗತಿಯಲ್ಲಿರುವ ಸಮುದಾಯ ಕಾಮಗಾರಿಗೆ ಜಿಲ್ಲಾ ಹಾಗೂ ತಾಲೂಕು ಐಇಸಿ ಸಂಯೋಜಕರ ಭೇಟಿ, ಪರಿಶೀಲನೆನ.೨೨ರಂದು ಸಂಗಮ ಸಿರಿ ಪ್ರಶಸ್ತಿ ಪ್ರದಾನ ಸರ್ಕಾರ ಕೈಬಿಟ್ಟರೂ ರೈತರ ಬೆನ್ನಿಗೆ ನಿಂತ ಚಿನ್ನು ಪೂಜಾರಿ: ಕರವೇ ಮುಖಂಡ ಪ್ರಕಾಶಗೌಡ ಪಾಟೀಲ ಮೆಚ್ಚುಗೆವಿಭಾಗೀಯ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯಕ್ಕೆ ರನ್ನರ್‌ಅಪ್ ಪ್ರಶಸ್ತಿಇಂಡಿಯ ಪತ್ರಕರ್ತ ಸದ್ದಾಂ ಹುಸೇನ್ ಜಮಾದಾರ್‌ಗೆ “ರಾಜ್ಯಮಟ್ಟದ ಸಿರಿಗನ್ನಡ ಸಾಧಕ” ಪ್ರಶಸ್ತಿ ಗರಿ! ಪಲ್ಲಕ್ಕಿ ಉತ್ಸವ, ಕುಂಭಮೇಳ, ಕಳಸಾರೋಹಣ ಹಾಗೂ ಭಂಡಾರ ತುಲಾಭಾರ ಕಾರ್ಯಕ್ರಮರಾಣಿ ಚನ್ನಮ್ಮನವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಘೋಷಿಸಲು ಕೇಂದ್ರಕ್ಕೆ ಮನವಿತಾಂಬಾ: ಮಕ್ಕಳಲ್ಲಿನ ವಿಶೇಷ ಪ್ರತಿಭೆ ಪ್ರೋತ್ಸಾಹಿಸಲು ಪಾಲಕರು, ಶಿಕ್ಷಕರ ಪಾತ್ರ ಮುಖ್ಯ - ಬಿಇಒ ಸುರೇಂದ್ರ ಕಾಂಬಳೆ