LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಬ್ಬಿಂಗ್ ಮುಗಿಸಿದ  ದಿ ರೈಸ್ ಆಫ್ ಅಶೋಕ



    ನಟ ಸತೀಶ್ ನೀನಾಸಂ ಹೊಸ ಅವತಾರವೆತ್ತಿರುವ ಬಹು ನಿರೀಕ್ಷಿತ ಸಿನಿಮಾ 'ದಿ ರೈಸ್ ಆಫ್ ಅಶೋಕ'. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರವೀಗ ಡಬ್ಬಿಂಗ್ ಮುಗಿಸಿದೆ.

     ಬೆಂಗಳೂರಿನ ಆಕಾಶ್ ಸ್ಟುಡಿಯೋದಲ್ಲಿ ಚಿತ್ರದ ನಾಯಕ ಸತೀಶ್ ಹಾಗೂ ನಾಯಕಿ ಸಪ್ತಮಿ ಗೌಡ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ.

ನಟ ಸತೀಶ್ ನೀನಾಸಂ ಮಾತನಾಡಿ "ದಿ ರೈಸ್ ಆಫ್ ಅಶೋಕ' ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿತ್ತು. ಈಗ ಡಬ್ಬಿಂಗ್ ಕೂಡ ಕಂಪ್ಲೀಟ್ ಆಗಿದೆ. ಆಕಾಶ್ ಸ್ಟುಡಿಯೋದ ಆನಂದ್, ಇಂಜಿನಿಯರ್ ನನ್ನ ಸಾಕಷ್ಟು ಚಿತ್ರಗಳಿಗೆ ಅವರೇ ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ಡಬ್ ಮಾಡಿರುವುದು ಪಾಸಿಟಿವ್ ಎನರ್ಜಿ ಇದೆ. ಈ ಜಾಗದಲ್ಲಿ ಅಣ್ಣಾವ್ರು, ವಿಷ್ಣು ಸರ್ ಸೇರಿದಂತೆ ಹಲವರು ಡಬ್ ಮಾಡಿದ್ದಾರೆ.  ಈ ಜಾಗದಲ್ಲಿ ನಮ್ಮ ಚಿತ್ರದ ಡಬ್ಬಿಂಗ್ ಮುಗಿದಿರುವುದು ಖುಷಿ ಇದೆ. ಕನ್ನಡ, ತೆಲುಗು ಹಾಗೂ ತಮಿಳ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದೇವೆ. ಕನ್ನಡ ಭಾಷೆ ಡಬ್ಬಿಂಗ್ ಮುಗಿದಿದ್ದು, ಮುಂದಿನ ದಿನಗಳಲ್ಲಿ ತೆಲುಗು ಹಾಗೂ ತಮಿಳು ಶುರು ಮಾಡುತ್ತೇವೆ" ಎಂದರು.

    ನಟಿ ಸಪ್ತಮಿ ಗೌಡ ಮಾತನಾಡಿ "ತುಂಬಾ ಖುಷಿಯಾಗುತ್ತಿದೆ. ಯಾವುದೇ ಸಿನಿಮಾ ಶುರು ಮಾಡಿ ಅದರಲ್ಲಿಯೂ ಡಬ್ಬಿಂಗ್ ‌ಮುಗಿಸಿದಾಗ ನಟಿಯಾಗಿ ಪರಿಪೂರ್ಣ ಜವಾಬ್ದಾರಿ ಅನಿಸುತ್ತದೆ.  ಅಂಬಿಕಾ ಎಂಬ ಪಾತ್ರ ಎಮೋಷನ್. ತುಂಬಾ ಇಸಿಯಾಗಿಯಾದ ಪಾತ್ರ. ನನ್ನನ್ನು ಚಿತ್ರ ತುಂಬಾ ಚೆನ್ನಾಗಿ ತೋರಿಸಿದ್ದಾರೆ. ಡಿಫರೆಂಟ್ ಅವತಾರದಲ್ಲಿ ಅಂಬಿಕಾ ಆಗಿ ನೀವು ನನ್ನನ್ನು ನೋಡುತ್ತೀರ. 'ದಿ ರೈಸ್ ಆಫ್ ಅಶೋಕ' ಚಿತ್ರದ ಭಾಗವಾಗಿರುವುದು ಖುಷಿಯಾಗಿದೆ" ಎಂದು ಹೇಳಿದರು.

    'ದಿ ರೈಸ್ ಆಫ್ ಅಶೋಕ' 70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ.  ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ 'ದಿ ರೈಸ್ ಆಫ್ ಅಶೋಕ'.

     ಬಿ.ಸುರೇಶ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ. 'ರೈಸ್ ಆಫ್ ಆಫ್ ಅಶೋಕ'ನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಕ್ಯಾಮರಾ ವರ್ಕ್, ಮನು ಶೇಡ್ಗಾರ್ ಸಂಕಲನ, ರವಿವರ್ಮಾ ಹಾಗೂ ವಿಕ್ರಮ್ ಮೋರ್  ಸಾಹಸ ನಿರ್ದೇಶನ, ಸಂತೋಷ್ ಶೇಖರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. .

     ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆಗೆ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್