Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ನಾರಾಯಣ್ ಚಿತ್ರದಲ್ಲಿ  ದುನಿಯಾ ವಿಜಯ್  ಶ್ರೇಯಸ್ ಮಂಜು

     ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್  ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ. ಎಸ್ ನಾರಾಯಣ್ ಅವರ  ನಿರ್ದೇಶನದ  ಪ್ರೊಡಕ್ಷನ್ ನಂ 1 ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ.


     ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ.

ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.


     ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.


     ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.


     ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು  ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ.  ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ನೃತ್ಯ ನಿರ್ದೇಶನವಿರುವ 'ಪ್ರೊಡಕ್ಷನ್ ನಂ 1' ಚಿತ್ರದ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ