2-3 ದಿನಗಳ ಹಿಂದೆ ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್ಗೆ ಬಂದಿದ್ದ ಇಡಿ ಅಧಿಕಾರಿಗಳು, ನೆಕ್ಕಂಟಿ ನಾಗರಾಜ್ ಮಾವ ವೆಂಕಟೇಶ್ವರ ರಾವ್ ಮನೆಗೆ ಭೇಟಿ ನೀಡಿದ್ದರು. ಸದ್ಯ ಇದೀಗ ಕೃಷ್ಣಾನಗರ ಕ್ಯಾಂಪ್ನ ಕೆಲವರಿಗೆ ನೋಟಿಸ್ ನೀಡಿದ್ದಾರೆ. ಹಾಗೂ ಹಣ ವಾಪಾಸ್ ನೀಡುವಂತೆ ತಾಕೀತು ಮಾಡಿದ್ದಾರೆ.
ಇನ್ನು ಕೃಷ್ಣಾನಗರದ ಕ್ಯಾಂಪ್ನಲ್ಲಿರುವ ಸಂಬಂಧಿಕರಿಗೆ ವೆಂಕಟೇಶ್ವರ ರಾವ್ ಹಣ ವರ್ಗಾವಣೆ ಮಾಡಿಸಿದ್ದರು. ಶ್ರೀನಿವಾಸ ಎನ್ನುವವರು ಎಸ್ಐಟಿ ವಿಚಾರಣೆ ಹೋಗಿದ್ದು, ಹಣ ವಾಪಸ್ ನೀಡೋದಾಗಿ ಹೇಳಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಇಡಿ ಅಧಿಕಾರಿಗಳು ಕೃಷ್ಣಾನಗರದ ಕ್ಯಾಂಪ್ಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ಇಡಿ ಮತ್ತೆ ನೋಟಿಸ್ ನೀಡಿದೆ.
ವಾಲ್ಮೀಕಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸೇರಿ 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.