LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಟ್‌ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

ಬೆಂಗಳೂರು, 

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ.

ಶ್ರೀಕಿ ಬಂಧನ ಮತ್ತು ನಲಪಾಡ್ ಲಿಂಕ್

ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿಂದೆ ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮಾಡಿ, ಸರ್ಕಾರದ ಹಣವನ್ನು ವಿವಿಧ ಅಕ್ರಮ ಖಾತೆಗಳಿಗೆ ವರ್ಗಾಯಿಸಿದ ಆರೋಪ ಶ್ರೀಕಿ ತಂಡದ ಮೇಲಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಎಸ್‌ಐಟಿ (SIT) ತನಿಖೆಗೆ ವಹಿಸಿತ್ತು. ಎಸ್‌ಐಟಿ ತನಿಖೆಯ ವೇಳೆ ಹಲವು ಡಿಜಿಟಲ್ ವ್ಯಾಲೆಟ್‌ಗಳ ಕಳ್ಳತನ ಬೆಳಕಿಗೆ ಬಂದಿದ್ದಲ್ಲದೆ, ನಲಪಾಡ್ಗೂ ಈ ಜಾಲದ ಜೊತೆ ಲಿಂಕ್ ಇರುವುದು ಕಂಡುಬಂದಿತ್ತು. ಇದೇ ಕಾರಣಕ್ಕೆ ನಲಪಾಡ್ ಈಗಾಗಲೇ ಎರಡು ಬಾರಿ ಎಸ್‌ಐಟಿ ವಿಚಾರಣೆಗೂ ಹಾಜರಾಗಿದ್ದರು. ಈಗ ಇಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿರುವುದರಿಂದ, ಅಕ್ರಮ ಹಣ ವರ್ಗಾವಣೆಯಲ್ಲಿ ನಲಪಾಡ್ ಪಾತ್ರದ ಕುರಿತು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

ಈ ಹಿಂದೆ ಏಪ್ರಿಲ್ 2024ರಲ್ಲಿ ಶಾಸಕ ಹ್ಯಾರಿಸ್ ಮತ್ತು ನಲಪಾಡ್ ನಿವಾಸಗಳ ಮೇಲೆ ಇಡಿ 15 ಗಂಟೆಗಳ ಕಾಲ ಸುದೀರ್ಘ ದಾಳಿ ನಡೆಸಿತ್ತು. ಶ್ರೀಕಿ ಹ್ಯಾಕ್ ಮಾಡಿದ ಬಿಟ್‌ಕಾಯಿನ್‌ಗಳನ್ನು ಕ್ರಿಪ್ಟೋ ಮೂಲಕ ಹಣವಾಗಿ ಪರಿವರ್ತಿಸಿ, ಲೇಯರಿಂಗ್ ಪದ್ಧತಿಯಲ್ಲಿ ವರ್ಗಾಯಿಸಿರುವುದು ಅಂದು ಪತ್ತೆಯಾಗಿತ್ತು. ಶ್ರೀಕಿ, ನಲಪಾಡ್ ಸಹೋದರ ಉಮರ್ ನಲಪಾಡ್‌ನ ಸಹಪಾಠಿಯಾಗಿದ್ದರಿಂದ ಈ ಸ್ನೇಹ ಆರಂಭವಾಗಿತ್ತು. ಶ್ರೀಕಿ ಮುಂಬೈ ಮೂಲದ ವ್ಯಕ್ತಿಯೊಬ್ಬನ ಮೂಲಕ ನಲಪಾಡ್ ಖಾತೆಗೆ 10 ಲಕ್ಷ ರೂ. ವರ್ಗಾಯಿಸಿದ ಆರೋಪ ಅಂದೇ ಕೇಳಿಬಂದಿತ್ತು. ಒಟ್ಟಾರೆ 4.5 ಕೋಟಿ ರೂ. ಅಕ್ರಮ ವಹಿವಾಟಿನ ಶಂಕೆ ವ್ಯಕ್ತವಾಗಿತ್ತು.

ಹಿಂದಿನ ದಾಳಿ ಮತ್ತು ಎಸ್‌ಐಟಿ ನೀಡಿದ್ದ ಮಾಹಿತಿಗಳ ಆಧಾರದ ಮೇಲೆ ಇಡಿ ಈಗ ಶ್ರೀಕಿಯನ್ನು ವಶಕ್ಕೆ ಪಡೆದಿದೆ. ಶ್ರೀಕಿ ನೀಡುವ ಹೇಳಿಕೆಗಳು ನಲಪಾಡ್ ಪಾಲಿಗೆ ಕಂಟಕವಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರದ ಹಣ ಮತ್ತು ಡಿಜಿಟಲ್ ಆಸ್ತಿಗಳ ಲೂಟಿಯಲ್ಲಿ ಯಾರಿಗೆಲ್ಲಾ ಪಾಲು ಸಂದಿದೆ ಎಂಬುದು ಈಗ ಇಡಿ ತನಿಖೆಯಿಂದ ಹೊರಬರಬೇಕಿದೆ. ಸದ್ಯ ಶ್ರೀಕಿ ಬಂಧನದಿಂದ ರಾಜಕೀಯ ವಲಯದಲ್ಲೂ ನಡುಕ ಶುರುವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ