LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಡಿಪಿಐಐಟಿ ಮಾಜಿ ಸೆಕ್ರೆಟರಿ ರಮೇಶ್ ಅಭಿಷೇಕ್‌ಗೆ ಇಡಿ ಶಾಕ್

ನವದೆಹಲಿ,21: ಅಕ್ರಮ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಮಾಜಿ ಉದ್ಯಮ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ(ಡಿಪಿಐಐಟಿ) ಕಾರ್ಯದರ್ಶಿ ರಮೇಶ್ ಅಭಿಷೇಕ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.


.1982-ಬ್ಯಾಚ್ ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿದ ಇತ್ತೀಚಿನ ಎಫ್ಐಆರ್ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡಿದೆ.


ಕಳೆದ ಫೆಬ್ರವರಿಯಲ್ಲಿ ರಮೇಶ್ ಅಭಿಷೇಕ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಭಿಷೇಕ್ 2019 ರಲ್ಲಿ ಹಿಂದಿನ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆ ಯಿಂದ ನಿವೃತ್ತರಾಗಿದ್ದರು.


ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಇಡಿ ಅಭಿಷೇಕ್ ಅವರ ಮನೆಯಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.ಅಭಿಷೇಕ್ ಅವರು ಸೇವೆಯಲ್ಲಿದ್ದಾಗ ವ್ಯವಹರಿಸಿದ ಖಾಸಗಿ ಕಂಪನಿಗಳಿಂದ ಸಮಾಲೋಚನಾ ಶುಲ್ಕವಾಗಿ "ದೊಡ್ಡ ಮೊತ್ತ" ಪಡೆಯುವ ಮೂಲಕ ನಿವೃತ್ತಿಯ ನಂತರ "ಅಕ್ರಮವಾಗಿ" ಆಸ್ತಿ ಸಂಪಾದಿಸಿದ್ದಾರೆ ಎಂದು ಸಿಬಿಐ ತನ್ನ ಎಫ್ಐಆರ್ನಲ್ಲಿ ಆರೋಪಿಸಿದೆ.


ಸಿಬಿಐ ಮತ್ತು ಇಡಿ, ರಮೇಶ್ ಅಭಿಷೇಕ್ ಅವರ ಪುತ್ರಿ ವನೆಸ್ಸಾ ವಿರುದ್ಧವೂ ಪ್ರಕರಣ ದಾಖಲಿಸಿವೆ.ನಿವೃತ್ತ ಅಧಿಕಾರಿಯು ಫಾರ್ವರ್ಡ್ ಮಾರ್ಕೆಟ್ಸ್ ಕಮಿಷನ್ ಅಧ್ಯಕ್ಷ ಹುದ್ದೆಯನ್ನೂ ಹೊಂದಿದ್ದರು ಮತ್ತು ಭ್ರಷ್ಟಾಚಾರ ವಿರೋಧಿ ಲೋಕಪಾಲ್ ಉಲ್ಲೇಖದ ಮೇರೆಗೆ ಅವರ ವಿರುದ್ಧ ಸಿಬಿಐ ಪ್ರಕರಣವನ್ನು ದಾಖಲಿಸಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್