LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ

ತಾಳಿಕೋಟೆ,  ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪುರಸಭೆ ತಾಳಿಕೋಟೆ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆ, ನೈರ್ಮಲ್ಯ ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ಕುರಿತು ಮಾಹಿತಿ, ಶಿಕ್ಷಣ ಮತ್ತು ಸಂವಹನ (ಆಯ್‌ಇಸಿ) ಕಾರ್ಯಕ್ರಮವನ್ನು ಆಯೋಜಿಸಲಾಯಿತು.
      ಕಾರ್ಯಕ್ರಮದಲ್ಲಿ ಮಳೆನೀರು ಕೊಯ್ಲು ಹಾಗೂ ಜಲ ಸಂಪನ್ಮೂಲಗಳ ರಕ್ಷಣೆಯನ್ನು ಉತ್ತೇಜಿಸುವ "ಅಚಿಣಛಿh ಣhe ಖಚಿiಟಿ" ಜಲಾಂದೋಲನ ಮತ್ತು ಡಯೇರಿಯಾ (ಅತಿಸಾರ ಭೇದಿ) ತಡೆಗಟ್ಟುವಿಕೆ ಅಭಿಯಾನದ ಕುರಿತು ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿ ನೀಡಲಾಯಿತು. ಇದೇ ವೇಳೆ, ೨೦೨೬-೨೭ ನೇ ಸಾಲನ್ನು "ತ್ಯಾಜ್ಯ ವಿಂಗಡಣೆ ವರ್ಷ" (ಙeಚಿಡಿ oಜಿ Wಚಿsಣe Segಡಿegಚಿಣioಟಿ) ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ  ಮೂಲದಲ್ಲೇ ತ್ಯಾಜ್ಯ ಬೇರ್ಪಡಿಸುವ ಪ್ರಾಮುಖ್ಯತೆಯನ್ನು ಪುರಸಭೆ ಆರೋಗ್ಯ ನಿರಿಕ್ಷಕ ಶಿವಾನಂದ ಜುಮನಾಳ ಅವರು ವಿವರಿಸಿದರು.
     ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ಪಟ್ಟಣದ ಸ್ವಚ್ಛತೆ ಹಾಗೂ ಜಲ ಸಂರಕ್ಷಣೆಗೆ ಪ್ರತಿಜ್ಞೆ ಮಾಡಿದರು.
     ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಸ್ ಬಿ ಸಾವಳಸಂಗ, ಭೀಮನಗೌಡ ಚೌಧರಿ, ಶ್ರೀಮತಿ ಸುಮಂಗಲಾ ಬಿರಾದಾರ, ಶ್ರೀಮತಿ ಭಾಗ್ಯಶ್ರೀ ಬಡಿಗೇರ, ಶ್ರೀಮತಿ ಭುವನೇಶ್ವರಿ ಹಿರೇಮಠ, ಶ್ರೀಮತಿ ಅಶ್ವಿನಿ ಮಾನೆ, ಅಕ್ಷತಾ ಬಿರಾದಾರ ಹಾಗೂ ನಟರಾಜ ಮಂಕಣಿ, ಪುರಸಭೆ ಆರೋಗ್ಯ ನಿರಿಕ್ಷಕ ಫಿರೋಜ ಮುಲ್ಲಾ. ರಂಗನಾಥ ಅಜಮನಿ, ಕಂದಾಯ ನಿರಿಕ್ಷಕ ಶರಣಗೌಡ ಪಾಟೀಲ, ಭೀಮಣ್ಣ ಬೋಳಿ, ಮೊದಲಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್