Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ ಹಕ್ಕು ಕಾಪಾಡಲು ಶಿಕ್ಷಣ ಶಕ್ತಿಯುತ  ಆಯುಧ : ಪಿ.ಎನ್.ಸುರೇಶ್



ಬಳ್ಳಾರಿ,ಡಿ.11..: ಮಾನವ ಹಕ್ಕುಗಳನ್ನು ಕಾಪಾಡಲು ಶಿಕ್ಷಣವೇ, ಶಕ್ತಿಯುತ ಆಯುಧ. ಮಾನವ ಹಕ್ಕುಗಳು ಪ್ರತಿಯೊಬ್ಬ ಮನುಷ್ಯನ ಜೀವನವನ್ನು ಗೌರವಿಸುವ ಮೂಲಭೂತ ಮೌಲ್ಯಗಳು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗುವುದರ ಜೊತೆಗೆ ಇತರರ ಹಕ್ಕುಗಳನ್ನು ಗೌರವಿಸುವ ಗುಣವನ್ನು ಬೆಳಸಿಕೊಳ್ಳಬೇಕು. ನ್ಯಾಯ, ಸಮಾನತೆ ,ಮಾನವೀಯತೆ ಇವುಗಳು ಸಮಾಜವನ್ನು ನಡೆಸುವ ಆಧಾರ ಸ್ತಂಭಗಳು.ಈ ಮೌಲ್ಯಗಳನ್ನು ಬಾಲ್ಯದಲ್ಲಿಯೇ ಆಳವಡಿಸಿಕೊಂಡಾಗ  ಮಾತ್ರ ಶಾಂತಿಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ  ಪಿ.ಎನ್.ಸುರೇಶ್ ತಿಳಿಸಿದರು.

ಶ್ರೀ ವಾಸವಿ ವಿದ್ಯಾಲಯದಲ್ಲಿ ಮಾನವ ಹಕ್ಕುಗಳ ದಿನವನ್ನು ಜಾಗೃತಿ ಮತ್ತು ಸಾಂಸ್ಖತಿಕ ಚಟುವಟಿಕೆಗಳೊಂದಿಗೆ ಭವ್ಯವಾಗಿ ಆಚರಿಸಲಾಯಿತು. ಮಾನವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜ್ಞಾನ, ಜಾಗೃತಿ ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಪ್ರತಿಯೊಬ್ಬರಲ್ಲೂ ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವ   ಮತ್ತುಇತರರ ಹಕ್ಕುಗಳನ್ನು ಗೌರವಿಸುವ ನೈತಿಕತೆ ಬೆಳೆಸುವುದು. ಮಾನವ ಹಕ್ಕುಗಳಲ್ಲಿ ಜೀವಿಸುವ ಹಕ್ಕು, ಶಿಕ್ಷಣದ ಹಕ್ಕು, ಸಮಾನತೆಯ ಹಕ್ಕು,ಅಭಿವ್ಯಕ್ತಿಯ ಸ್ವಾತಂತ್ರ‍್ಯ, ಮಕ್ಕಳ ರಕ್ಷಣೆಯ ಹಕ್ಕು ,ಗೌರವ ಮತ್ತು ಸುರಕ್ಷಿತ ಜೀವನದ ಹಕ್ಕುಗಳಿವೆ. ಜೊತೆಗೆ ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳನ್ನು ಅರಿತುಕೊಳ್ಳಬೇಕು ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ಸಂವಿಧಾನಕ್ಕೆ ಗೌರವ , ಪರಿಸರ ಸಂರಕ್ಷಣೆ ,ಇತರರ ಹಕ್ಕುಗಳನ್ನು ಗೌರವಿಸುವುದು, ಶಿಸ್ತಿನ ಪಾಲನೆ, ದೇಶಪ್ರೇಮ, ಸಮಾಜ ಸೇವೆಯ ಮನೋಭಾವ ಕರ್ತವ್ಯಗಳನ್ನು ಅನುಸರಿಸಿದಾಗ ಮಾತ್ರ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಲು ಸಾಧ್ಯವೆಂಬುದು ಕಾರ್ಯಕ್ರಮದ ಉದ್ದೇಶವಾಗಿತ್ತು.

೭ನೇ ತರಗತಿಯ ಎ. ಸಿ. ಸಿಂಚನಾ ಮಾನವ ಹಕ್ಕುಗಳ ದಿನದ ಮಹತ್ವವನ್ನು ಸಂಕ್ಷಿಪ್ತವಾಗಿ ವಿವರಿಸಿ , ಮಾನವ ಹಕ್ಕುಗಳು ಪ್ರತಿಯೊಬ್ಬರಿಗೂ ಗೌರವ ,ಸ್ವಾತಂತ್ರ‍್ಯ ಮತ್ತು ಸುರಕ್ಷಿತ ಜೀವನ ನೀಡುವ ಮೂಲಭೂತ ಹಕ್ಕುಗಳು .ಹಕ್ಕುಗಳ ಜೊತೆಗೆ ಕರ್ತವ್ಯಗಳು ಇರಬೇಕು  ಎಂದು ಹೇಳಿದರು.

ವಿದ್ಯಾರ್ಥಿಗಳು ಮಾನವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಆಧರಿಸಿ “ ಹಕ್ಕು ಮತ್ತು ಕರ್ತವ್ಯಗಳ ಸಂಗಮ” ಎಂಬ ಸ್ವರಚಿತ ಶೈಕ್ಷಣಿಕ ನಾಟಕವನ್ನು ಅದ್ಭುತವಾಗಿ ಪ್ರದರ್ಶಿಸಿ, ಹಕ್ಕು ಕರ್ತವ್ಯಗಳ ಮಹತ್ವವನ್ನು ಸ್ಪಷ್ಟವಾಗಿ ಪರಿಚಯಿಸಿದರು. ಕುಮಾರಿ ಹರಿಣಿ ಮಾನವ ಹಕ್ಕುಗಳ ದಿನದ ಮಹತ್ವವನ್ನು ಆಧರಿಸಿ ಸುಂದರ ನೃತ್ಯ ಪ್ರದರ್ಶಿಸಿ  ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ  ತುಂಬಿದರು. ಶಾಲಾ ಮುಖ್ಯೋಪಾಧ್ಯಯರಾದ ವೀರೇಶ್ .ಯು ರವರು ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ವರ್ಗ, ಮುಖ್ಯೋಪಾಧ್ಯಯರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ