Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿಯ ಅನಿಮೇಟೆಡ್ ವಿಡಿಯೋವನ್ನು ತೆಗೆದುಹಾಕಿ: ಎಕ್ಸ್ ಗೆ ಚುನಾವಣಾ ಆಯೋಗ ಆದೇಶ

ನವದೆಹಲಿ,07: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ ನಿರ್ದೇಶನ ನೀಡಿದೆ.


ಈ ಸಂಬಂಧ 'X' ನ ನೋಡಲ್ ಅಧಿಕಾರಿಗೆ ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಈ ಪೋಸ್ಟ್ ಅನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ, ಎಕ್ಸ್ ಗೆ ನಿರ್ದೇಶನ ನೀಡಿದೆ.

ಪತ್ರದ ಜೊತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಈಗಾಗಲೇ ದಾಖಲಾಗಿರುವ ಎಫ್ಐಆರ್ ಪ್ರತಿಯನ್ನು ಸಹ ಚುನಾವಣಾ ಆಯೋಗ ಲಗತ್ತಿಸಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಈ ಸಂಬಂಧ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಟಿ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ಪ್ರಕಾರ ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಮೇ 5 ರಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು 'ಎಕ್ಸ್' ಗೆ ನಿರ್ದೇಶನ ನೀಡಿದ್ದಾರೆ. ಆದಾಗ್ಯೂ ಆ ಪೋಸ್ಟ್ ಅನ್ನು ಇನ್ನೂ ತೆಗೆದು ಹಾಕಿಲ್ಲ. ಆ ಪೋಸ್ಟ್ ಅನ್ನು ತಕ್ಷಣವೇ ತೆಗೆದುಹಾಕಲು ನಿರ್ದೇಶಿಸಲಾಗಿದೆ" ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕದ ಉಳಿದ 14 ಲೋಕಸಭಾ ಸ್ಥಾನಗಳಲ್ಲಿ ಮತದಾನ ನಡೆಯುತ್ತಿರುವ ದಿನವೇ 'X' ಗೆ ಚುನಾವಣಾ ಆಯೋಗ ಈಗ ಹೊಸ ನಿರ್ದೇಶನ ನೀಡಿದೆ.

ಬಿಜೆಪಿಯು ಮುಸ್ಲಿಂ ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್, ಅನಿಮೇಟೆಡ್ ಕಾರ್ಟೂನ್ ವಿಡಿಯೋ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ