Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಲು ಮತದಾರರ ನೋಂದಣಾಧಿಕಾರಿ ಮೆಕ್ಕಳಕಿ ಮನವಿ

ವಿಜಯಪುರ,ಜು,೦೯ :  ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಮತ್ತು ಅನರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಕ್ರಮ ವಹಿಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕರಿಸಬೇಕು ಎಂದು ಮತದಾರರ ನೋಂದಣಾಧಿಕಾರಿಗಳು ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಒ ಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಹಂತದಲ್ಲಿ ಆಯಾ ರಾಜಕೀಯ ಪಕ್ಷಗಳಿಂದ ನೇಮಿಸಿದ ಪ್ರತಿನಿಧಿಗಳು ಭಾಗವಹಿಸಬಹುದಾಗಿದೆ ಎಂದರು. 
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡುತ್ತಿದ್ದು, ಸಾರ್ವಜನಿಕ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಎಗಳು ಈ ಕಾರ್ಯದಲ್ಲಿ ಭಾಗವಹಿಸುವಂತೆ  ಮನವಿ ಮಾಡಿದರು.
ಇಲ್ಲಿಯವರೆಗೆ ೧,೮೪,೦೩೪ ಮತದಾರರ ಗಣತಿ ನಮೂನೆ ವಿತರಿಸಲಾಗಿದ್ದು, ಅದರಲ್ಲಿ ೨೧,೮೧೨ ಗಣತಿ ನಮೂನೆಗಳು ಡಿಜಿಟೈಸ್ ಮಾಡಲಾಗಿರುತ್ತದೆ, ಆನಲೈನ್‌ನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೭೪೦, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೩, ಶಾಶ್ವತವಾಗಿ ಸ್ಥಳಾಂತರಿಗೊಂಡ ಮತದಾರರು ೮೮, ಮರಣ ಹೊಂದಿರುವ ಮತದಾರರು ೨೧೬  ಬಗ್ಗೆ ಮಾಹಿತಿ ನೀಡಲಾಯಿತು. ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿಮಾಡಲು ಸಹಾಯಮಾಡಲು ಮತದಾರರ ಅನುಕೂಲಕ್ಕಾಗಿ ಪ್ರತಿ ವಾರ್ಡ್‌ನಲ್ಲಿ ಈಗಾಗಲೇ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತದಾರರ ಸಹಾಯ ವಾಣಿ: ೦೮೩೫೨- ೨೦೦೨೨೫ ಸ್ಥಾಪಿಸಲಾಗಿದೆ ಎಂದರು.
ವಿಜಯಪುರ ನಗರ ಮತಕ್ಷೇತ್ರ ಸಂಬಂಧಿಸಿದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಚುನಾವಣಾ ಆಯೋಗದ ಎಲ್ಲಾ ಹಂತಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಿರುವ ಪಾರದರ್ಶಕ ಪ್ರಕ್ರಿಯೆಯಾಗಿದೆ. ಯಾವುದೇ ಕಾರಣಕ್ಕೆ ಮತದಾರರ ಪಟ್ಟಿಯಿಂದ ನೈಜ ಮತದಾರರು ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಎಂದು ರಾಜಕೀಯ ಪಕ್ಷದ ಮುಖಂಡರು ಹಾಗೂ ಮತದಾರರಿಗೆ ಮನವಿ ಮಾಡಿದರು. ಸಭೆಯಲ್ಲಿ ವಿವಿಧ ಪಕ್ಷಗಳ ರಾಜಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ