Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ಪರಿಷ್ಕರಣೆ: ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು


ಕೊಪ್ಪಳ ಜೂನ್ 05: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಮತದಾರರ ಪಟ್ಟಿ ಪರಿಷ್ಕರಣಾ  ಕಾರ್ಯದ ಬಗ್ಗೆ ಕೊಪ್ಪಳ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜೂನ್ 04ರಂದು ಸಂವಾದ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗವು 14ನೇ ಮೇ 2026ರಂದು ಅಧಿಸೂಚನೆ ಹೊರಡಿಸಿ, ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ವೇಳಾಪಟ್ಟಿ ನಿಗದಿಪಡಿಸಿದೆ. ನಮ್ಮ ದೇಶದಲ್ಲಿ 2002ರಲ್ಲಿ ಈ ಹಿಂದೆ ಎಸ್.ಐ.ಆರ್ ಆಗಿತ್ತು. 2025ರ ಮತದಾರರ ಪಟ್ಟಿಯಲ್ಲಿ ಇರುವವರು 2010ರ ಮತದಾರರ ಪಟ್ಟಿಯಲ್ಲಿ ಎಲ್ಲಿದ್ದರು ಎಂದು ಈಗ ಮ್ಯಾಪಿಂಗ್  ಮಾಡಲಾಗುತ್ತಿದೆ.
ಜನಗಣತಿಗೆ ನೇಮಕವಾದ ಅಧಿಕಾರಿಗಳು ಮತ್ತು ಸಿಬ್ಬಂದಿಯು 2002ರ ಮತ್ತು 2025ರ ಈ ಎರಡು ಮತದಾರರ ಪಟ್ಟಿಗಳನ್ನು ಇಟ್ಟುಕೊಂಡು ಮ್ಯಾಪಿಂಗ್ ಕಾರ್ಯ ಮಾಡುತ್ತಿದ್ದಾರೆ. ಜೂನ್ 30 ರಿಂದ ಒಂದು ತಿಂಗಳ ಕಾಲ ಬಿ.ಎಲ್.ಓ ಮನೆಮನೆಗೆ ಭೇಟಿ ಕೊಡುತ್ತಾರೆ. ಮ್ಯಾಪಿಂಗ್ ಮಾಡಿದ ಎಲ್ಲರಿಗೂ ಜನಗಣತಿ ಫಾರ್ಮನ್ನು ಕೊಡಲಾಗುತ್ತದೆ.
ಬಿ.ಎಲ್.ಓ.ಗಳು ಮತದಾರರಿಗೆ ಗೈಡ್ ಮಾಡಿ ಜನಗಣತಿ ಪಾರ್ಮನ್ನು ತುಂಬಿಸುತ್ತಾರೆ. ಗಣತಿ ವೇಳೆಯಲ್ಲಿ, ಮತದಾರರು ನಾನು ಯಾವುದೆ ದೇಶದಲ್ಲಿ ಪೌರತ್ವ ಹೊಂದಿಲ್ಲ. ನನ್ನ ಹೆಸರು ಒಂದೇ ಕಡೆ ಇದ್ದು ಬೇರೆಡೆ ಇಲ್ಲ ಎನ್ನುವಂತಹ ಡಿಕ್ಲೇರೆಷನ್ ನೀಡಬೇಕು ಎನ್ನುವಂತಹ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯ ಈ ಸಂದರ್ಭದಲ್ಲಿ ಹೆಸರು ಸೇರಿಸಲು, ಹೆಸರು ತೆಗೆಯಲು ಮತ್ತು ಹೆಸರನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ತೀರಿಕೊಂಡ ಅಥವಾ ಬೇರೆಡೆ ಸ್ಥಳಾಂತರವಾದ ಅಥವಾ ಡುಪ್ಲಿಕೇಟ್ ಮತದಾರರು ಯಾರು ಎಂಬುದನ್ನು ಪತ್ತೆ ಹಚ್ಚಿ ಮತದಾರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ. ಈ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬಿ.ಎಲ್.ಎ.ಗಳು ಸಹ ಭಾಗಿಯಾಗುತ್ತಾರೆ ಎಂದರು.
ಕೊಪ್ಪಳ ಜಿಲ್ಲೆಯಲ್ಲಿ 2025ರ ಮತದಾರರ ಪಟ್ಟಿಯಲ್ಲಿ ಒಟ್ಟು 11,92,307 ಮತದಾರರ ಪೈಕಿ ಇದುವರೆಗೆ 11,34,937 ಮತದಾರರಿಗೆ ಈಗಾಗಲೇ ಮ್ಯಾಪಿಂಗ್ ಮಾಡಿದ್ದು, 57,370 ಮತದಾರರಿಗೆ ಮ್ಯಾಪಿಂಗ್ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು.
ಈ ವೇಳೆ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ