LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರದ ವಿರುದ್ದ ಮತ್ತೆಸಾರಿಗೆ ನೌಕರರು ಹೋರಾಟದ ಎಚ್ಚರಿಕೆ

ಬೆಂಗಳೂರು, ಮಾರ್ಚ್ 26: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ನಂತರ ಸರ್ಕಾರದ ಭರವಸೆಯಿಂದ ತೃಪ್ತರಾಗಿ ಹೋರಾಟದಿಂದ ಹಿಂದೆ ಸರಿದಿದ್ದ ಸಾರಿಗೆ ನೌಕರರು ಇದೀಗ ಮತ್ತೆ ಸಿಡಿದೇಳುವ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ಮಾತುಕತೆಯನ್ನೂ ನಡೆಸಿಲ್ಲ ಎಂದು ಆರೋಪಿಸಿರುವ ಅವರು, ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.









ಮಾತುಕತೆಯ ಭರವಸೆ ನೀಡಿದ್ದ ಸಿಎಂ ಸಿದ್ದರಾಮಯ್ಯ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದರು. ಆ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದ‌ ಸಿಎಂ, ಮುಷ್ಕರ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಅಲ್ಲದೆ, ಸಂಕ್ರಾಂತಿ ನಂತ್ರ ನೌಕರರ ಸಂಘಟನೆ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದರು. ನೌಕರರ ಜೊತೆ ಮಾತುಕತೆ ನಡೆಸುವುದು ಮಾತ್ರವಲ್ಲದೆ, ಪ್ರಯಾಣ ದರ ಏರಿಕೆ ಷರತ್ತನ್ನೂ ಹಾಕಲಾಗಿತ್ತು. ಅದರಂತೆ, ನಿಗಮವು ಈಗಾಗಲೇ‌ ಟಿಕೆಟ್ ದರ ಏರಿಕೆ‌ ಮಾಡಿದೆ. ಆದರೆ, ನೌಕರರನ್ನು ಮಾತ್ರ 2 ತಿಂಗಳು ಕಳೆದರೂ ಮಾತುಕತೆಗೆ ಕರೆದಿಲ್ಲ. ಇದರಿಂದಾಗಿ ಸಾರಿಗೆ ನೌಕರರ ಸಂಘಟನೆಗಳು ಸಿಎಂ ವಿರುದ್ಧ ಕೆರಳಿವೆ. ಏಪ್ರಿಲ್ 15 ರ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸುವ ಸುಳಿವು ನೀಡಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್