LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ.


ಬಳ್ಳಾರಿ,ಸೆ.21: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಯುವಕ–ಯುವತಿಯರು ಹಾಗೂ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಮತದಾರರ ಗುರುತಿನ ಚೀಟಿ ಪಡೆದು ಪ್ರಜಾಪ್ರಭುತ್ವದ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಹಾಗೂ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಮಹತ್ವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾನುವಾರ ನಗರದ ಎನ್ ಸಿಸಿ ಮೈದಾನದಲ್ಲಿ ಆಯೋಜಿಸಿದ್ದ 4 ಕಿ.ಮೀ. ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಅರ್ಹ ವ್ಯಕ್ತಿಗಳ ಹೆಸರು ಕೈಬಿಟ್ಟಿದ್ದರೆ, ಕೂಡಲೇ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದು ಹೆಸರು ನೋಂದಾಯಿಸಿಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಅರ್ಹ ಯುವಕರು ಅಕ್ಟೋಬರ್ 1ರಿಂದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಮ್ಯಾರಥಾನ್‌ನಲ್ಲಿ ಯುವಕರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ. ಇಂತಹ ಜಾಗೃತಿ ಕಾರ್ಯಕ್ರಮಗಳು ಮತದಾನದ ಮಹತ್ವವನ್ನು ಜನರಿಗೆ ತಲುಪಿಸುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಯುವಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಥಾನ್ ಆಯೋಜಿಸಲಾಗಿದೆ. ಅರ್ಹ ಯುವಕರು ಅಕ್ಟೋಬರ್ 1ರಿಂದ ತಮ್ಮ ಸಮೀಪದ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಫಾರ್ಮ್–6 ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರತಿಯೊಂದು ಮತಕ್ಕೂ ಮಹತ್ವವಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು ಚುನಾವಣೆಯಲ್ಲಿ ಭಾಗವಹಿಸುವುದು ಜವಾಬ್ದಾರಿಯುತ ನಾಗರಿಕನ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮಳೆ ಇದ್ದರೂ ಮ್ಯಾರಥಾನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಎಲ್ಲರಿಗೂ ಅವರು ಧನ್ಯವಾದ ಸಲ್ಲಿಸಿದರು.
ಎನ್‌ಸಿಸಿ ಮೈದಾನದಿಂದ ಪ್ರಾರಂಭವಾದ ಓಟವು ಸುಧಾ ಕ್ರಾಸ್, ಇನ್‌ಫೆಂಟ್ರಿ ರಸ್ತೆ, ಎಸ್‌ಪಿ ವೃತ್ತದ ಮಾರ್ಗವಾಗಿ ಸಾಗಿ ದುರ್ಗಮ್ಮ ದೇವಸ್ಥಾನದ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.
ಓಟದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್., ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಬಾಗದಲ್ಲಿ ’ಸೈಕ್ಲೋಥಾನ್-೨೦೨೬’: ಅಭಾಜಿ ಫೌಂಡೇಶನ್‌ನಿಂದ ’ಸೈಕಲ್ ಸವಾರಿ ಆರೋಗ್ಯದ ರೂವಾರಿ’ ಅಭಿಯಾನಕ್ಕೆ ಚಾಲನೆ*ಕಂಗ್ರಾಳಿ ಕೆ.ಎಚ್‌ನಲ್ಲಿ ₹20 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ–ರುಕ್ಮಾಯಿ ಮಂದಿರದ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ*      ಚೆನ್ನೈನಲ್ಲಿ ನಡೆಯುವ  ರಾಷ್ಟ್ರಮಟ್ಟದ " ವುಶು" ಚಾಂಪಿಯನ್ಶಿಪ್ ಗೆ _ಜಿಲ್ಲೆಯ 5 ಪಟುಗಳು ಅಯ್ಕೆ .ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ ‘ಪ್ರಜಾಸೇವೆ': ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ.ಬಳ್ಳಾರಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ: ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಖುದ್ದು ಭೇಟಿ, ಪರಿಶೀಲನೆಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ಚಾಂದಿನಿ ನೇಮಕಸಹಕಾರಿಗಳ ಸಹಕಾರವೇ ಸಹಕಾರ ಚಳವಳಿಯ ಯಶಸ್ವಿ : ಶ್ರೀಮತಿ ಪಲ್ಲೇದ ಮೈತ್ರಿ ಕೊಣ್ಣೂರ ಗ್ರಾಮ ಅಭಿವೃದ್ದಿ ಕುರಿತು ಡಿಸಿ, ಸಿಇಓ ಜಂಟಿ ಸಭೆ