Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಡ್ಡಾಯವಾಗಿ ನೀರಿನ ಮೂಲಗಳ ಸುರಕ್ಷತೆ ಖಚಿತ ಪಡಿಸಿಕೊಳ್ಳಿ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಸೂಚನೆ

ಬಳ್ಳಾರಿ,ಜೂ.20


ಮಾನ್ಸೂನ್ ಮಳೆ ಆರಂಭವಾದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳುವ ಸಾಧ್ಯತೆಗಳು ಇರುವುದರಿಂದ ಎಲ್ಲ ಗ್ರಾಮಗಳಲ್ಲಿಯ ಕುಡಿಯುವ ನೀರಿನ ಮೂಲಗಳಾದ ಕೆರೆ, ಬಾವಿ, ಕೊಳವೆಬಾವಿ ಮುಂತಾದವುಗಳ ಸುರಕ್ಷತೆಯ ಕುರಿತು ಸಂಬAಧಿಸಿದ ಅಧಿಕಾರಿಗಳು ಖಚಿತ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದರು.
ಗುರುವಾರದಂದು, ಕುಡಿಯುವ ನೀರು ಸರಬುರಾಜು, ಶುದ್ಧೀಕರಣ, ತಾಂತ್ರಿಕ ಬೆಂಬಲ ನೀಡುವುದರ ಕುರಿತು ಸಂಬAಧಿಸಿದ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಕೈಗೊಂಡು ಅವರು ಮಾತನಾಡಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಭಾವ್ಯ ವಾಂತಿ-ಭೇದಿ ಪ್ರಕರಣಗಳು ಸಂಭವಿಸದAತೆ ಕೆರೆ, ಕೈ-ಪಂಪು, ಕೊಳವೆ ಬಾವಿಗಳ ಸುತ್ತಮುತ್ತ ಸ್ವಚ್ಛತೆ, ನೀರಿನ ಮೂಲಗಳ ಹತ್ತಿರವಿರುವ ಮುಖ್ಯ ವಾಲ್‌ಗಳು (ರೈಸಿಂಗ್ ವಾಲ್) ಮತ್ತು ಸರಬರಾಜು ಪೈಪ್‌ಲೈನ್ ಸೋರಿಕೆ ಪತ್ತೆಹಚ್ಚುವಿಕೆ ಹಾಗೂ ದುರಸ್ಥಿ, ಓವರ್‌ಹೆಡ್ ಟ್ಯಾಂಕ್ ಒಳಗಡೆ ಮತ್ತು ಹೊರಗಡೆ ಸುತ್ತಮುತ್ತ ಸ್ವಚ್ಛಗೊಳಿಸುವುದು. ಶುದ್ಧ ನೀರಿನ ಘಟಕ ನಿರ್ವಹಣೆ, ತೆರೆದ ಬಾವಿಗಳ ನಿರ್ವಹಣೆ, ಎಲ್ಲಾ ನೀರಿನ ಮೂಲಗಳನ್ನು ಸ್ವಚ್ಛಗೊಳಿಸಿ ಶೇ.33 ಕ್ಲೋರಿನ್ ಅಂಶವಿರುವ ಗುಣಮಟ್ಟದ ಬ್ಲೀಚಿಂಗ್ ಪೌಡರ್‌ನಿಂದ ಕ್ಲೋರಿನೇಷನ್ ಮಾಡಿಸಿ ಜೈವಿಕ ಪರೀಕ್ಷೆಗೆ ಒಳಪಡಿಸಿದ ನಂತರ ಕುಡಿಯಲು ಯೋಗ್ಯವೆಂದು ವರದಿ ಬಂದ ನಂತರವೇ ಸಾರ್ವಜನಿಕರಿಗೆ ಅನಾನೂಕಲತೆಯಾಗದ ಸಮಯದಲ್ಲಿ ವಿದ್ಯುತ್ ಸರಬರಾಜು ಇರುವ ಕುರಿತು ಖಾತ್ರಿಪಡಿಸಿಕೊಂಡು ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಶಾಲಾ ಆವರಣದಲ್ಲಿಯ ನೀರಿನ ಸಂಗ್ರಹಕಗಳ ನೀರನ್ನು ಪರೀಕ್ಷೆಗೆ ಒಳಪಡಿಸಿ ಅಶುದ್ದವೆಂದು ಕಂಡು ಬಂದಲ್ಲಿ ತಕ್ಷಣವೇ ನಿಯಮಾನುಸಾರ ಕ್ಲೋರಿನೇಷನ್ ಕೈಗೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಪ್ರಭಾರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ಸೇರಿದಂತೆ ಗ್ರಾಮೀಣ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ