ನೇಸರಗಿ.ಸಮೀಪದ ವಣ್ಣೂರ ಗ್ರಾಮದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯರಾದ ಚಂದ್ರಶೇಖರ ಪಾಟೀಲ, ಶಾಲೆಯ ವಿಜ್ಞಾನ ಶಿಕ್ಷಕರು ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಹಾಗೂ ಶಾಲೆಯ ಸುತ್ತಮುತ್ತಲಿನಲ್ಲಿ ಹಣ್ಣಿನ ಮತ್ತು ಹೂವಿನ ಗಿಡ ನಾಟಿ ಮಾಡಲಾಯಿತು. ಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರಬಂಧ ಸ್ಪರ್ಧೆ ಮಾಡಿ ಬಹುಮಾನ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಕೃಷಿ ಮೇಲ್ವಿಚಾರಕರಾದ ರವಿ ಆರ್ ಜಿ ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ಸಹ ಶಿಕ್ಷಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.