Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಲಿ : ನ್ಯಾ.ಮಹಾಸ್ವಾಮೀಜಿ

ವಿಶ್ವ ಪರಿಸರ ದಿನಾಚರಣೆ | ಗಿಡಗಳನ್ನು ನೆಟ್ಟ ಗಣ್ಯರು ಹಾಗೂ ಮಕ್ಕಳು

ಬಾಗಲಕೋಟೆ, ಜೂನ್ ೦೫: ಪರಿಸರ ನಮ್ಮ ಜೀವನದ ಆದಾರವಾಗಿದ್ದು, ಅದನ್ನು ಕಾಪಾಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಹೇಳಿದರು.
ನವನಗರ ಸೆಕ್ಟರ ನಂ.೭೦ ರಲ್ಲಿರುವ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಉದ್ಯಾನವನದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಪ್ರಾದೇಶಿಕ ಹಾಗೂ ಅರಣ್ಯ ಇಲಾS, ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉದ್ಯಾನವನದಲ್ಲಿ ಗಿಡ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿಯಲ್ಲಿ ನಮ್ಮ ಕಣ್ಣಿಕೆ ಕಾಣುವ ನೆಲ, ಜಲ, ಪ್ರಾಣಿ, ಪಕ್ಷಿ. ಗಿಡ, ಮರಗಳು ಪರಿಸರದ ಅಂಗಗಳಾಗಿವೆ. ಗಿಡಮರಗಳಿಂದ ನಮಗೆ ಆಮ್ಲಜನಿಕ ಲಭ್ಯವಾಗುತ್ತಿದ್ದು, ನಾವು ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ಪ್ರಕೃತಿಯಲ್ಲಿ ಸಿಗುವ ಸಂಪನ್ಮೂಲಗಳನ್ನು ಮಿತವಾಗಿ ಬಳಸುವ ಮೂಲಕ ಪರಿಸರ ಸಂರಕ್ಷಿಸಿಕೊಂಡು ಮುನ್ನಡೆಯಬೇಕಿದೆ. ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ ಎಂದರು. ನಾವು ಭವಿಷ್ಯದ ಜನಾಂಗಕ್ಕೆ ಏನಾದರೂ ಒಳ್ಳೇಯದನ್ನು ಬಿಟ್ಟು ಹೋಗಬೇಕಿದ್ದರೆ ಅದರು ಉತ್ತಮ ಪರಿಸರ ಎಂದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರು ಮಾತನಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ೮೦ ಸಾವಿರ ಹೆಕ್ಟೇರನಷ್ಟು ಅರಣ್ಯ ಪ್ರದೇಶವಿದ್ದು, ಈ ಪೈಕಿ ಶೇ.೨೧ ರಷ್ಟು ಅರಣ್ಯವಿದೆ. ಆದರೆ ಅದು ಶೇ.೩೧ ರಷ್ಟು ಇತರಬೇಕಿತ್ತು. ಇನ್ನು ಶೇ.೧೦ ರಷ್ಟು ಪರಿಸರ ಬೆಳೆಸಬೇಕಾದರೆ ಒಂದು ಕೋಟಿ ಗಿಡಗಳನ್ನು ಬೆಳೆಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ತಿಳಿಸಿದರು. 
ಪ್ರಾರಂಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ ಅಹೀರೆ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಅರಣ್ಯ ವೃದ್ದಿ ಹಾಗೂ ಜೀವ ವೈವಿದ್ಯ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಟ ಒಂದು ಸಸಿ ನೆಟ್ಟು ಅದರ ಪೋಷಣೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆ ಹಾಗೂ ಶಾಲೆಗಳಲ್ಲಿ ಒಂದೊಂದು ಗಿಡ ನೆಡುವ ಸಂಕಲ್ಪ ಮಾಡಲು ಕರೆ ನೀಡಿದರು. 
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್.ಗೊರವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಗದ್ದಿ, ಬಿಟಿಡಿಎ ಮುಖ್ಯ ಅಭಿಯಂತರ ಚಂದ್ರಹಾಸ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆದರ್ಶ ವಿದ್ಯಾಲಯದ ಮುಖ್ಯೋಪಾದ್ಯಾಯ ಬಿ.ವಿ.ಪಾಟೀಲ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾತಂಗಿ ಸಮಾಜದಿಂದ ವಿಶೇಷ ಪೂಜೆ, ಸರ್ಕಾರಕ್ಕೆ ಮನವಿಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ ಪ್ರಕಾಶ ಕೆಳಗೇರಿ ವೇಯ್ಟ ಲಿಫ್ಟಿoಗ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ. ವಿಶ್ವ ಪರಿಸರ ದಿನಾಚರಣೆ: ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆಪ್ಲಾಸ್ಟಿಕ ಮುಕ್ತ ಜೀವನ ಶೈಲಿ ಅಲವಡಿಸಕೊಳ್ಳಿ: ಸದಾಶಿವ ಮಕ್ಕೋಜಿವಿಕ್ರಮಪೂರ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ:*ಡಿಸಿಎಂ ಸ್ಥಾನಕ್ಕಾಗಿ ಮಸೀದಿ ದರ್ಗಾದಲ್ಲಿ ಪ್ರಾರ್ಥನೆ; ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಸಂದೇಶ*