LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

VB G RAM G ಯೋಜನೆ ಕಾಮಗಾರಿ ಸ್ಥಳಕ್ಕೆ ಇಒ ಭೇಟಿ; ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ರಕ್ಕಸಗಿ ಗ್ರಾಮ ಪಂಚಾಯತಿಗೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಗನಗೌಡ ಬಿರಾದಾರ VB G RAM G ಯೋಜನೆಯಡಿ ಪ್ರಗತಿಯಲ್ಲಿದ್ದ ಕ್ಯಾನಲ್ ಹೂಳು ಎತ್ತುವುದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆಯಡಿ ರಕ್ಕಸಗಿ ಗ್ರಾಮ ಪಂಚಾಯತಿಯ ಬಲದಿನ್ನಿ ಹಾಗೂ ಕಾರಕೂರ ಗ್ರಾಮದ ವಿಬಿಜಿ ರಾಮ್ ಜಿ ಯೋಜನೆಯ ಕೂಲಿಕಾರರು ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಿದ್ದರು. ಕಾರಕೂರ ಗ್ರಾಮದ ಅಮರೇಶ ಗಾದಿ ಇವರ ಹೊಲದಿಂದ ಬಸಪ್ಪ ಸಂ ಹುದ್ದಾರ ಇವರ ಹೊಲದವೆರೆಗೆ ಕಾಲೂವೆ ಹೂಳು ಎತ್ತುವುದು ಕಾಮಗಾರಿಯಲ್ಲಿ NMR ತೆಗೆದು ಕೆಲಸ ಹಂಚಿಕೆ ಮಾಡಲಾಗಿದೆ.
ಜುಲೈ-1 ರಿಂದ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ವಿಬಿಜಿ ರಾಮ್ ಜಿ ಯೋಜನೆ ಜಾರಿಗೆ ಬಂದಿದ್ದು, 100 ದಿನಗಳ ಬದಲಾಗಿ 125  ಮಾನವ ದಿನಗಳನ್ನು ನೀಡಲಾಗಿದೆ. ಅಲ್ಲದೆ ಒಂದು ದಿನದ ಕೂಲಿ ದರ ರೂ. 382 ಹೆಚ್ಚಾಗಿದ್ದು, ಕೂಲಿಕಾರರ ಜೀವನ ನಿರ್ವಹಣೆಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ ಎಂದು ಇಒ ಅವರು ತಿಳಿಸಿದರು.
ಕೃಷಿ ಹಂಗಾಮ ಹೊರತುಪಡಿಸಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಲಾಗುವುದು. ರೈತರು ಕೃಷಿಹೊಂಡ, ದನದ ಶೆಡ್, ಮೇಕೆ, ಕುರಿ ಶೆಡ್ ನಿರ್ಮಾಣ ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶವಿದೆ. ಗ್ರಾ.ಪಂ. ಗರ ಭೇಟಿ ನೀಡಿ ಬೇಡಿಕೆ ಅರ್ಜಿಗಳನ್ನು ಸಲ್ಲಿಸಿ ಎಂದು ಸಲಹೆ ನೀಡಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಎಂ.ವೈ. ಅಮ್ಮನ್ನವರ, ವಿಬಿಜಿ ರಾಮ್ ಜಿ ತಾಲೂಕು ಐಇಸಿ ಸಂಯೋಜಕ ಪರಮೇಶ ಹೊಸಮನಿ, ತಾಂತ್ರಿಕ ಸಹಾಯಕ ಉಮೇಶ ಕಣ್ಣಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್