LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚುನಾವಣೆ ಸಂಬಂಧ ಬಿ.ವೈ ರಾಘವೇಂದ್ರ ವಿರುದ್ಧ ಈಶ್ವರಪ್ಪ ಚುನಾವಣಾಧಿಕಾರಿಗೆ ದೂರು

ಶಿವಮೊಗ್ಗ 09: ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈಶ್ವರಪ್ಪ ಕಣದಿಂದ ಹಿಂದೆ ಸರಿದಿದ್ದಾರೆ ಎಂಬ ಪತ್ರಿಕೆಯ ತುಣಕು ಹಾಗೂ ಬ್ರೇಕಿಂಗ್‌ ನ್ಯೂಸ್‌ ಮಾದರಿಯ ವೀಡಿಯೋ ಹರಿಬಿಟ್ಟ ಬಿಜೆಪಿ ಅಭ್ಯರ್ಥಿ ಬಿವೈ.ರಾಘವೇಂದ್ರ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಅವರು  ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಈಶ್ವರಪ್ಪ ಕಣದಿಂದ ಹಿಂದೆ ಸರಿದಿದ್ದು, ಬಿಜೆಪಿಗೆ ಮತ ಹಾಕಿ ಎಂಬರ್ಥದಲ್ಲಿ ಎಡಿಟ್‌ ಮಾಡಿದ ವೀಡಿಯೋ ಹಾಗೂ ಪತ್ರಿಕೆಯಲ್ಲಿ ಪ್ರಕಟವಾದ ರೀತಿಯ ತುಣಕಿನ ಸ್ಕ್ರೀನ್‌ಶಾಟ್‌ ಹರಿಯಬಿಡಲಾಗಿತ್ತು. ಇದರಿಂದ ಮತದಾರ‌ರು ಗೊಂದಲಕ್ಕೊಳಗಾಗಿದ್ದರು.

ಈ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡಿರುವ ಈಶ್ವರಪ್ಪ ಅವರು, ಬಿಜೆಪಿ ಅಭ್ಯರ್ಥಿ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದೂರು ನೀಡಿ, ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.

ನಾನು ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸುತ್ತಿದ್ದೇನೆಂದು ಎಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ಪೋಸ್ಟ್ ಮಾಡಿ ನನ್ನ ಬೆಂಬಲಿಗರು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸಿದ್ದಾರೆ. ನಾನು ಬಿಜೆಪಿಯಲ್ಲಿದ್ದ ಸಂದರ್ಭದಲ್ಲಿ ಹೇಳಿದ್ದ ಹೇಳಿಕೆಯನ್ನು ಈಗ ಹೇಳಿದ್ದೇನೆ ಎಂಬಂತೆ ಚಿತ್ರಿಸಲಾಗಿದೆ.

ವಾಟ್ಸಪ್ ಹಾಗೂ ಫೇಸ್ ಬುಕ್‌ಗಳಲ್ಲಿ ಈ ರೀತಿಯಾಗಿ ಫೋಸ್ಟ್ ಮಾಡಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಇದು ನನ್ನ ವಿರುದ್ಧ ರೂಪಿಸಿರುವ ಷಡ್ಯಂತ್ರವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ಪ್ರಮುಖರಾದ ಮೋಹನ್, ಉಮೇಶ್ ಆರಾಧ್ಯ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್