Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಏಸ್ಮಾ ಬೆದರಿಕೆಗೆ ಜಗ್ಗುವುದಿಲ್ಲ; 19ರ ರಾತ್ರಿಯಿಂದ ಬಸ್ ಬಂದ್’

ಸರ್ಕಾರದ ನಿಲುವಿಗೆ ಸಿಡಿದೆದ್ದ ಕೆಎಸ್‌ಆರ್‌ಟಿಸಿ ಸಿಬ್ಬಂದಿ

ಬಳ್ಳಾರಿ: 16:..ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಕೆಎಸ್‌ಆರ್‌ಟಿಸಿ ಹಾಗೂ ಇತರೆ ಸಾರಿಗೆ ನಿಗಮಗಳ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಏಸ್ಮಾ ಕಾಯ್ದೆ ಜಾರಿಗೊಳಿಸಿದರೂ ನಾವು ಹೆದರುವ ಪ್ರಶ್ನೆಯೇ ಇಲ್ಲ. ನೌಕರರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯುತ್ತದೆ” ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅದಿಮೂರ್ತಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಹಲವು ತಿಂಗಳುಗಳಿಂದ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಮಸ್ಯೆ ಪರಿಹಾರಕ್ಕೆ ಗಂಭೀರವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
“ಸಾರಿಗೆ ನೌಕರರಿಗೆ 38 ತಿಂಗಳ ಬಾಕಿ ವೇತನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಜೊತೆಗೆ ಕನಿಷ್ಠ 25 ಶೇಕಡಾ ವೇತನ ಹೆಚ್ಚಳ ಮಾಡಬೇಕು. ಆದರೆ ಸರ್ಕಾರ ಕೇವಲ 12.5 ಶೇಕಡಾ ವೇತನ ಹೆಚ್ಚಳ ಘೋಷಣೆ ಮಾಡುವ ಮೂಲಕ ಸಿಬ್ಬಂದಿಯ ಕಣ್ಣೊರೆಸುವ ಕೆಲಸ ಮಾಡುತ್ತಿದೆ. ಈ ಪ್ರಸ್ತಾವನೆಯನ್ನು ನಾವು ಯಾವ ಕಾರಣಕ್ಕೂ ಒಪ್ಪುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಸಾರಿಗೆ ನೌಕರರು ರಾಜ್ಯದ ಜನತೆಗೆ ನಿರಂತರ ಸೇವೆ ಸಲ್ಲಿಸುತ್ತಿದ್ದು, ಸಂಕಷ್ಟದ ಸಂದರ್ಭಗಳಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ. ಆದರೂ ಅವರ ಪರಿಶ್ರಮಕ್ಕೆ ತಕ್ಕ ಗೌರವ ಹಾಗೂ ಸೌಲಭ್ಯ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ನಮ್ಮ ಹೋರಾಟವು ಕೇವಲ ವೇತನಕ್ಕಾಗಿ ಮಾತ್ರವಲ್ಲ; ನೌಕರರ ಬದುಕಿನ ಭದ್ರತೆ ಮತ್ತು ಗೌರವಕ್ಕಾಗಿ ನಡೆಯುತ್ತಿದೆ. ಸರ್ಕಾರ ಮಾತುಕತೆಗೆ ಮುಂದಾಗಿ ಸಮಸ್ಯೆ ಬಗೆಹರಿಸಬೇಕಿತ್ತು. ಆದರೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ” ಎಂದು ದೂರಿದರು.
ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಏಸ್ಮಾ) ಜಾರಿಗೊಳಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ನೌಕರರನ್ನು ಬೆದರಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.
ಮೇ 19ರ ರಾತ್ರಿ నుంచೇ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ ಅವರು, “ಬಸ್ ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆ ಆಗಬಹುದು. ಆದರೆ ಈ ಪರಿಸ್ಥಿತಿಗೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರವೇ ಹೊರಬೇಕು” ಎಂದರು.
ಈ ವೇಳೆ ರಾಜ್ಯದ ಜನತೆಗೆ ಪ್ರತಿಭಟನೆ ಹಾಗೂ ಬಸ್ ಬಂದ್ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಸಾರಿಗೆ ನೌಕರರು ಕರಪತ್ರಗಳನ್ನು ಬಿಡುಗಡೆ ಮಾಡಿದರು. ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ