Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗತ್ಯ ಸೇವೆಗಳು ಹಾಗೂ ಕರ್ತವ್ಯ ನಿರತ ಮತದಾರರಿಂದ ಮತದಾನ

ಬಳ್ಳಾರಿ 01: ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯ ನಿಮಿತ್ಯ ಮೇ. 07 ರ ಮತದಾನ ದಿನದಂದು ಚುನಾವಣೆ ಸಂಬAಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳು ಅಲ್ಲದೆ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಮೇ. 01 ರಿಂದ ಮತ ಚಲಾವಣೆಗೆ ಅವಕಾಶ ಕಲ್ಪಿಸಿದ್ದು, ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಗಾಂಧಿ ಭವನದಲ್ಲಿ ವಿವಿಧ ಅಧಿಕಾರಿ, ಸಿಬ್ಬಂದಿಗಳಿAದ ಮತದಾನ ನಡೆಯಿತು.

ಚುನಾವಣೆ ಕರ್ತವ್ಯ ನಿಮಿತ್ಯ ಮೇ. 07 ರ ಮತದಾನ ದಿನದಂದು ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಕ್ಷೇತ್ರಗಳ ನೌಕರರು ಮೇ. 07 ರಂದು ಮತದಾನ ಮಾಡಲು ಸಾಧ್ಯವಾಗದ ಕಾರಣ ಅಂತಹವರಿಗೆ ಮೇ. 01 ರಿಂದ 03 ರವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.  ಅದೇ ರೀತಿ  ಮತದಾನ ದಿನದಂದು ಚುನಾವಣೆ ಸಂಬAಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳಿಗೆ ಮೇ. 01 ರಿಂದ 06 ರವರೆಗೆ ಮತ ಚಲಾಯಿಸಲು ಅನುಕೂಲವಾಗುವಂತೆ ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಲಾಗಿದೆ.

ಚುನಾವಣೆ ನಿಮಿತ್ಯ ಮೇ. 07 ರಂದು ಮತದಾನ ನಡೆಯಲಿದ್ದು, ಅಂದು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ವಿವಿಧ ಕ್ಷೇತ್ರಗಳ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಕಲ್ಪಿಸಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಬುಧವಾರದಂದು ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿದರು.  ಅದೇ ರೀತಿ ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.  ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಗಾಂಧಿ ಭವನದಲ್ಲಿನ ಪೋಸ್ಟಲ್ ವೋಟಿಂಗ್ ಸೆಂಟರ್ ಹಾಗೂ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ ಪರಿಶೀಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ