Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ ಜನರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ-ಪಾಟೀಲ

ಯುವಸಿರಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ



ತಾಳಿಕೋಟೆ,ಜು,೧೭ :  ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕೂಲಿಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ದಿನಗೂಲಿ ನೌಕರರ ಸ್ವಸಹಾಯ ಗುಂಪುಗಳು ಹಾಗೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಯುವಸಿರಿ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಯರನಾಳ ಯುವಸಿರಿ ಸೌ.ಸ.ಸಂ.ಅಧ್ಯಕ್ಷರಾದ ಶಂಕರಗೌಡ ಪಾಟೀಲ ಹೇಳಿದರು. 
       ಗುರುವಾರ ತಾಲೂಕಿನ ಹಿರೂರು ಗ್ರಾಮದಲ್ಲಿ ಸಂಘದ ಹತ್ತನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ೨೦೦೧ರಲ್ಲಿ ಆರಂಭವಾದ ಈ ಸಂಘವು ಕೇವಲ ೫ ವರ್ಷಗಳಲ್ಲಿ ೧೦ ಶಾಖೆಗಳನ್ನು ಹೊಂದಿದ್ದು, ೨೫ ಕೋಟಿ ಠೇವಣಿ, ೩೦ ಕೋಟಿ ದುಡಿಯುವ ಬಂಡವಾಳ ಹಾಗೂ ೧.೫ ಕೋಟಿ ಶೇರು ಬಂಡವಾಳ ಹೊಂದಿ ಪ್ರಗತಿ ಹಂತದಲ್ಲಿದೆ. ಸಂಘವು ವಿಶೇಷವಾಗಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ಜನರ ಆರ್ಥಿಕ ಸಂಕಷ್ಟವನ್ನು ದೂರ ಮಾಡಿ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಮೂಲಕ ಅವರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸುವ ಹಾಗೂ ದುಡಿಯುವ ಕೈಗಳಿಗೆ ಕೆಲಸ ಕೊಡುವ ದೃಷ್ಟಿಯಿಂದ ಸಂಘವು ಕೆಲಸ ಮಾಡುತ್ತಿದೆ. ಇವತ್ತು ಹಿರೂರ ಗ್ರಾಮದಲ್ಲಿ ಇದರ ಹತ್ತನೇ ಶಾಖೆಯನ್ನು ಆರಂಭಿಸಲಾಗಿದೆ ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. 
        ಈ ಸಮಯದಲ್ಲಿ ಹಿರೂರ ಶಾಖೆಯ ಅಧ್ಯಕ್ಷ ಗುರುಪಾದಪ್ಪ ಕೊಪ್ಪದ, ಉಪಾಧ್ಯಕ್ಷ ರಾಮನಗೌಡ ದೋರನಳ್ಳಿ, ಸಲಹಾ ಸಮಿತಿ ಸದಸ್ಯರಾದ ಪ್ರಭುಗೌಡ ಚೌದ್ರಿ, ಬಸನಗೌಡ ಯರಗಲ್, ಮೌನೇಶ ಬಡಿಗೇರ, ಶಿವಯೋಗಿ ಹಿರೇಮಠ, ಚೇತನ್ ದೇಸಾಯಿ, ದೇವೇಂದ್ರ ತಳವಾರ, ಬೀರಪ್ಪ ಪೂಜಾರಿ, ಬಸಮ್ಮ ದೇ.ಕೊಪ್ಪದ, ಮಹಾದೇವಿ ನಾ.ಬಿರಾದಾರ, ವಲಯ ಅಧಿಕಾರಿ ನಾಗರಾಜ ಎಸ್.ಮದ್ದರಕಿ, ವೇದ ಮೂರ್ತಿ ಸಿ.ಎಂ. ಹಿರೇಮಠ,ತಾಳಿಕೋಟಿ ಯುವಸಿರಿ ಬ್ಯಾಂಕ್ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ಹಿರೇಮಠ, ಉಪಾಧ್ಯಕ್ಷ ರೇಣುಕಾ ಚಿಂಚೋಳ್ಳಿ, ಗಣ್ಯರಾದ ಬಸನಗೌಡ ಪಾಟೀಲ, ಐ.ಜಿ.ಹಿರೇಮಠ,ಅಣ್ಣುಗೌಡ ಪಾಟೀಲ, ಪಿಕೆಪಿಎಸ್ ಸದಸ್ಯ ಎಸ್ ಜಿ ಚೌದ್ರಿ, ಪಿಕೆಪಿಎಸ್ ಮಾಜಿ ಅಧ್ಯಕ್ಷರಾದ ದೇವೇಂದ್ರಪ್ಪ ಬಿರಾದಾರ, ದೇವೇಂದ್ರಪ್ಪ ಕೊಪ್ಪದ, ಶಾಂತಗೌಡ ಬಿರಾದಾರ ಹಾಗೂ ಗ್ರಾಮಸ್ಥರು ಇದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ