Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿತ್ಯವೂ ಪರಿಸರ   ದಿನವಾಗಲಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

   
ಬೆಳಗಾವಿ: ನಾಡಿನ ನೆಲ-ಜಲ, ಅರಣ್ಯ, ಪರಿಸರ, ವನ್ಯಜೀವಿಗಳು, ಜೀವ-ವೈವಿಧ್ಯ ಮತ್ತು ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ. ಪರಿಸರ  ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು , ಜೂನ್ 5 ರಂದು ಮಾತ್ರ ಈ ಕುರಿತು ಆಲೋಚಿಸಲಾಗುತ್ತಿದೆ. ಇದರ ಬದಲಿಗೆ ಪ್ರಕೃತಿಯಲ್ಲಿನ ಎಲ್ಲ ಜೀವರಾಶಿಗಳಿಗೆ ಅನ್ನ, ಆಶ್ರಯ ನೀಡಿರುವ ಪರಿಸರದ ಕುರಿತು ಪ್ರತಿದಿನ ಚಿಂತಿಸುವ ಅಗತ್ಯತೆ ಇದೆ. ಕಾರಣ ನಿತ್ಯವೂ ಪರಿಸರ ದಿನವಾಗಲಿ ಎಂದು‌ ಯಡೆಯೂರು ಜಗದ್ಗುರು ತೊಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಇಂದು ಇಲ್ಲಿನ ಶಿವಬಸವ ನಗರದ ಎಸ್. ಜಿ.  ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಸಸಿ ನೆಡುವ ಕಾರ್ಯಕ್ರಮದ  ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಜಿ.ಬಿ.ಐ.ಟಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಎಫ್. ವಿ. ಮಾನ್ವಿ ಮಾತನಾಡಿ  ಹಸಿರು ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ಸಹ ವಹಿಸಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ಬಿ. ಆರ್. ಪಟಗುಂದಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ ಶರಣಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೋಯಾಲುಕ್ಕಾಸ್ ಫೌಂಡೇಶನ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್‌ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆಅಹಿಂದ ಕೇವಲ ರಾಜಕೀಯ ಘೋಷಣೆಯಾಗಬಾರದು; ಅದು ಸಮಾಜ ಪರಿವರ್ತನೆಯ ಮಹಾ ಚಳವಳಿಯಾಗಬೇಕು – ಹೊನ್ನುರಸ್ವಾಮಿ ಕೆ.ಟಿಸರಕಾರಿ‌ ಪದವಿ ಮಹಾವಿದ್ಯಾಲಯಕ್ಕೆ ಮಂಜೂರಗಾಗಿ ಕರವೇ ಆಗ್ರಹಇಂದು ನೆಟ್ಟ ಸಸಿ ನಾಳೆ ಮರವಾಗಿಸುವುದೇ ಪರಿಸರ ದಿನಾಚರಣೆಪ್ರತಿಯೊಬ್ಬರೂ ಒಂದು ಸಸಿ ನೆಟ್ಟು ಪೊಸಿಸಿ :ನ್ಯಾಯಾದೀಶ ಚವ್ಹಾಣ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ: "ನಮ್ಮ ಭೂಮಿ ನಮ್ಮ ಜವಾಬ್ದಾರಿ"ವಿಶ್ವ ಪರಿಸರ ದಿನಾಚರಣೆಪರಿಸರ ಸಂರಕ್ಷಣೆ ಮಾಡುವುದು ನಮ್ಮ ಭವಿಷ್ಯದ ಸಂರಕ್ಷಣೆ : ಡಾ|| ಮಲ್ಲಿಕಾರ್ಜುನ ಮಹಾಸ್ವಾಮೀಜಿನಿತ್ಯವೂ ಪರಿಸರ   ದಿನವಾಗಲಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು