LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ರೈತ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು: ಶಾಸಕ ರಾಜುಗೌಡ 

೧೭ರಿಂದ೧೯ರ ವರೆಗೆ ಮೂರು ದಿನ ಧರಣಿ * ೨೧ ರಂದು ತಾಳಿಕೋಟೆ ಸಂಪೂರ್ಣ ಬಂದ್‌ಗೆ ಕರೆ

ತಾಳಿಕೋಟೆ,  ದೇವರಹಿಪ್ಪರಗಿ ಹಾಗೂ ತಾಳಿಕೋಟೆ-ಮುದ್ದೇಬಿಹಾಳ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು, ರೈತರಿಗೆ ಬೆಳೆ ಪರಿಹಾರ ಹಾಗೂ ವಿಮೆ ಹಣ ನೀಡಬೇಕು, ಮೇವಿನ ಬ್ಯಾಂಕ್‌ಗಳನ್ನು ತೆರೆಯಬೇಕು ಮತ್ತು ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನಡೆಯುವ ರೈತ ಹೋರಾಟಕ್ಕೆ ಎಲ್ಲರೂ ವಿವಿಧ ಸಂಘಟನೆಗಳು ಪಕ್ಷಾತೀತವಾಗಿ ಕೈಜೋಡಿಸಬೇಕು ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದರು.
        ಪಟ್ಟಣದ ಎಪಿಎಂಸಿ ಸಭಾ ಭವನದಲ್ಲಿ ಬಿಜೆಪಿ ರಾಜ್ಯ ರೈತ ಮೂರ್ಚಾ ನೇತೃತ್ವದಲ್ಲಿ ತಾಳಿಕೋಟೆ, ಮುದ್ದೇಬಿಹಾಳ, ದೇ.ಹಿಪ್ಪರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದ ಘೋಷಿಸಲು ಆಗ್ರಹಿಸಿ ನಡೆದ ರೈತ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೇವರಹಿಪ್ಪರಗಿಯಲ್ಲಿ ಬರಗಾಲ ಘೋಷಣೆಗೆ ಆಗ್ರಹಿಸಿ ಶಾಂತಿಯುತ ಹೋರಾಟ ನಡೆಸಿ, ಬಳಿಕ ಮನವಿ ಸಲ್ಲಿಸಿ ರಸ್ತೆ ತಡೆ ಮಾಡಲಾಗಿದೆ ಈ ಹೋರಾಟಕ್ಕೆ ವಿವಿಧ ರೈತ ಸಂಘಟನೆಗಳು ಹಾಗೂ ಸಂಘಟನೆಗಳ ಮುಖಂಡರು ಸ್ಪಂದಿಸಿ ಭಾಗವಹಿಸಿದ್ದರು. ರೈತರ ಹೋರಾಟ ಯಾವುದೇ ಪಕ್ಷದ ಹೋರಾಟವಲ್ಲ; ಇದು ಅನ್ನದಾತನ ನ್ಯಾಯಯುತ ಹೋರಾಟವಾಗಿರುವುದರಿಂದ ಎಲ್ಲರೂ ಒಗ್ಗೂಡಬೇಕು ಇದೇ ದಿ. ೧೭, ೧೮, ೧೯ ಮೂರು ದಿನಗಳ ಕಾಲ ಬೃಹತ್ ಹೋರಾಟ ತಾಳಿಕೋಟೆಯಲ್ಲಿ ನಡೆಯಲಿದೆ ದಿ. ೨೧ ಸೋಮವಾರರಂದು ತಾಳಿಕೋಟೆ ಬಂದ್‌ಗೆ ಕರೆ ನೀಡಲು ತಿರ್ಮಾನಿಸಲಾಗಿದೆ ಎಂದರು.
  ಸದನದಲ್ಲೂ ರೈತರ ಪರ ಧ್ವನಿ
    ಎನ್‌ಡಿಆರ್‌ಎಫ್‌ನ ಮಾನದಂಡಗಳನ್ನು ಮಾತ್ರ ಮುಂದಿಟ್ಟುಕೊಂಡು ರೈತರ ಸಂಕಷ್ಟವನ್ನು ನಿರ್ಲಕ್ಷಿಸಬಾರದು. ಕಳೆದ ಅಧಿವೇಶನದಲ್ಲಿಯೇ ಬರಗಾಲ ಘೋಷಣೆ ಹಾಗೂ ರೈತರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗಿತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಶಾಸಕರು ಒಗ್ಗೂಡಿ ರೈತರ ಪರವಾಗಿ ಸದನದಲ್ಲೂ ಹೋರಾಟ ನಡೆಸಲಿದ್ದೇವೆ ಈ ಬರ ಘೋಷಣೆಯ ವಿಚಾರವಾಗಿ ಹಾಗೂ ರೈತರ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಪರವಾಗಿ ಭಾವಿಗಿಳಿದು ಹೋರಾಟ ಮಾಡಿಯಾದರೂ ರೈತರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ವಿಧಾನಸೌದದ ಒಳಗೆ ನಮ್ಮ ಹೋರಾಟ ಹೊರಗೆ ನಿಮ್ಮ ಹೋರಾಟ ರಾಜ್ಯ ಸರ್ಕಾರವನ್ನು ರೈತರ ಮುಂದೆ ಮಂಡಿಯೂರಿ ಕುಳಿತು ಕೆಲಸ ಮಾಡುವಂತೆ ಮಾಡಲಿದೆ ಎಲ್ಲರೂ ಈ ಪಕ್ಷಾತೀತ ಹೋರಾಟದಲ್ಲಿ ಕೈಜೋಡಿಸಬೇಕೆಂದರು.
ಇನ್ನೋರ್ವ ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವರು ಮಾತನಾಡಿ ವಿಜಯಪುರ ಜಿಲ್ಲೆಯಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕಾಗಿತ್ತು. ಹಿಂದಿನ ಸರ್ಕಾರಗಳು ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದವು. ಆದರೆ ಪ್ರಸ್ತುತ ಸರ್ಕಾರ ವಿವಿಧ ಮಾನದಂಡಗಳನ್ನು ಮುಂದಿಟ್ಟುಕೊಂಡು ತಾಲೂಕುಗಳನ್ನು ವಿಂಗಡಿಸಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ತಾಳಿಕೋಟೆ, ದೇವರಹಿಪ್ಪರಗಿ ಸೇರಿದಂತೆ ಬರದ ಹೊಡೆತಕ್ಕೆ ಸಿಲುಕಿರುವ ಪ್ರದೇಶಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಈ ಕುರಿತು ಬಿಜೆಪಿ ರೈತ ಮೂರ್ಚಾದ ನೇತೃತ್ವದಲ್ಲಿ ಇದೇ ದಿ. ೧೭ ರಿಂದ ೧೯ ರವರೆಗೆ ಬೃಹತ್ ಪ್ರಮಾಣದ ಹೋರಾಟ ತಾಳಿಕೋಟೆಯಲ್ಲಿ ನಡೆಯಲಿದೆ ದಿ. ೨೧ ರಂದು ಸಂಪೂರ್ಣ ಬಂದ್ ಕರೆ ನೀಡಲಿದೆ ಇದು ರೈತರ ಜೀವನದ ಅಸ್ಥಿತ್ವದ ಪ್ರಶ್ನೇಯಾಗಿದೆ ಬೀಕರದ ಬರದಲ್ಲಿ ಸರ್ಕಾರದ ಮಂತ್ರಿಗಳ ದ್ವೇಶದ ರಾಜಕಾರಣ ಅನ್ನದಾತನಿಗೆ ಸಾವಿನಂಚಿಗೆ ತಳ್ಳುವಂತೆ ಮಾಡುತ್ತಿದೆ ತಾಲೂಕಿನ ಎಲ್ಲ ರೈತರು ಈ ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ಕನ್ಣು ತೆರೆಸುವ ಕಾರ್ಯಕ್ಕೆ ಕೈಜೋಡಿಸಬೇಕೆಂದರು.
         ಬಿಜೆಪಿ ರೈತ ಮೂರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಅವರು ಮಾತನಾಡಿ ಮಳೆ ಕೊರತೆಯಿಂದ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿವೆ ಹೊಲಗಳಿಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿದರೆ ವಾಸ್ತವ ಸ್ಥಿತಿ ಗೊತ್ತಾಗುತ್ತದೆ. ರೈತರು ಎದುರಿಸುತ್ತಿರುವ ಸಂಕಷ್ಟ ಯಾರಿಗೂ ಗೊತ್ತಿಲ್ಲದ ಸಂಗತಿಯಲ್ಲ. ಹೀಗಿರುವಾಗ ಬರಗಾಲ ಘೋಷಣೆಯಲ್ಲಿ ಸರ್ಕಾರದ ತಾರತಮ್ಯ ಎಲ್ಲರನ್ನು ಕೆರಳಿಸುವಂತೆ ಮಾಡಿದೆ ಕೂಡಲೇ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು, ರೈತರು ಪಾವತಿಸಿರುವ ಬೆಳೆ ವಿಮೆಯ ಹಣವನ್ನು ಸಮರ್ಪಕವಾಗಿ ದೊರಕಿಸಬೇಕು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ತಕ್ಷಣ ಮೇವಿನ ಬ್ಯಾಂಕ್‌ಗಳನ್ನು ತೆರೆಯಬೇಕು, ರೈತರ ೫ ಲಕ್ಷದ ವರೆಗಿನ ಸಾಲವನ್ನು ಮನ್ನಾ ಮಾಡಬೇಕು ಏಕರೆಗೆ ೫೦ ಸಾವಿರ ಬೆಳೆ ಹಾನಿ ಪರಿಹಾರ ನೀಡಬೇಕೆಂಬ ಪ್ರಮುಖ ಬೇಡಿಕೆಗಳೊಂದಿಗೆ ಇದೇ ದಿ. ೧೭, ೧೮, ೧೯ ಈ ಮೂರುನಗಳ ಕಾಲ ತಾಳಿಕೋಟೆ ತಾಲೂಕಿನ ಎಲ್ಲ ರೈತರೊಂದಿಗೆ ಬೃಹತ್ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ ೩ ದಿನಗಳ ಕಾಲ ನಡೆಯುವ ಈ ಹೋರಾಟದಲ್ಲಿ ನಿತ್ಯ ೩ ರಿಂದ ೪ ಸಾವಿರ ರೈತರು ಪಾಲ್ಗೊಳ್ಳಲಿದ್ದಾರೆ ದಿ. ೨೧ ರಂದು ತಾಳಿಕೋಟೆ ಸಂಪೂರ್ಣ ಬಂದ್ ಆಚರಣೆ ವೇಳೆ ಸುಮಾರು ೧೦ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆಂದು ಹೇಳಿದ ಅವರು ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡುವ ಇಚ್ಛಾಶಕ್ತಿ ತೋರಿಸಿ ಸುಮಾರು ರೈತರ ೨೫ ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಈಗಲೂ ರೈತರು ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ರೈತರ ಸಾಲ ಮನ್ನಾ ಕುರಿತು ಗಂಭೀರ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
      ಮುಖಂಡರಾದ ಮುನ್ನಾಧನಿ ನಾಡಗೌಡ, ಬಸನಗೌಡ ಮಾಡಗಿ, ಮಡುಸಾಹುಕಾರ ಬಿರಾದಾರ, ಪ್ರಭುಗೌಡ ಬಿರಾದಾರ(ಅಸ್ಕಿ) ಅವರು ಮಾತನಾಡಿದರು.
ಈ ಸಮಯದಲ್ಲಿ ಸಿದ್ದು ಬುಳ್ಳಾ, ಡಿ.ಕೆ.ಪಾಟೀಲ, ಈಶ್ವರಪ್ಪ ಬಿಳೇಭಾವಿ, ವಿಶ್ವನಾಥ ಬಿದರಕುಂದಿ,. ಕಾಶಿನಾಥ ಸಜ್ಜನ, ಎಂ.ಎಸ್.ಸರಶೆಟ್ಟಿ, ಕಾಶಿನಾಥ ಮುರಾಳ, ರಾಜುಗೌಂಡ ಗುಂಡಕನಾಳ, ರಾಜುಗೌಡ ಕೊಳೂರ, ಎಂ.ಎಂ.ಪಾಟೀಲ, ಒಳಗೊಂಡು ನೂರಾರು ಜನರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್