ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.
ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.