LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಬೀಳಗಿ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ: ಅ.4ರಂದು ಅದ್ದೂರಿ ಮೆರವಣಿಗೆ, ಸಿ.ಟಿ. ರವಿ ಭಾಗಿ

ಬೀಳಗಿ -2- ಪಟ್ಟಣದಲ್ಲಿ 21 ದಿನಗಳ ಕಾಲ ಪ್ರತಿಷ್ಠಾಪಿಸಿ, ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಭಕ್ತರಿಗೆ ಆಶೀರ್ವಾದ ನೀಡಿದ ಹಿಂದೂ ಮಹಾಗಣಪತಿಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಅ.4ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಹಿಂದೂ ಮಹಾಗಣಪತಿ ಸ್ವಾಗತ ಸಮಿತಿ ಉಪಾಧ್ಯಕ್ಷ ಮುತ್ತು ಬೋರ್ಜಿ ಹಾಗೂ ಕೋಶಾಧ್ಯಕ್ಷ ವೀರಣ್ಣ ತೋಟದ ತಿಳಿಸಿದರು.
ಪಟ್ಟಣದ ಮೆನ್‌ಬಜಾರ್‌ನ ಕಾಯಿಪಲ್ಯ ಬಜಾರ್‌ನಲ್ಲಿರುವ ಹಿಂದೂ ಮಹಾಗಣಪತಿ ಮಂಟಪದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅ.4ರಂದು ಸಂಜೆ 7.30ಕ್ಕೆ ವಿವಿಧ ವಾದ್ಯ ವೈಭವಗಳೊಂದಿಗೆ ಹಿಂದೂ ಮಹಾಗಣಪತಿಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಆರಂಭವಾಗಲಿದೆ. ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತ ತಲುಪಿದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಬಸವೇಶ್ವರ ವೃತ್ತದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನ ಪರಿಷತ್ ಸದಸ್ಯ ಹಾಗೂ ಹಿಂದೂ ಮುಖಂಡ ಸಿ.ಟಿ. ರವಿ ಮುಖ್ಯ ವಕ್ತಾರರಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಹಾಗೂ ಹಿಂದೂ ಮಹಾಗಣಪತಿ ಮಂಡಳಿ ಅಧ್ಯಕ್ಷ ಮುರುಗೇಶ್ ಆರ್. ನಿರಾಣಿ ವಹಿಸಲಿದ್ದಾರೆ.
ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಬೀಳಗಿ ಹುಚ್ಚೇಶ್ವರ ಮಠದ ಫಕೀರಯ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ನೆರೆದಿರುವ ಯುವಕರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಗಣೇಶೋತ್ಸವದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಆಶಯಗಳ ಕುರಿತು ಗಣ್ಯರು ಮಾತನಾಡಲಿದ್ದಾರೆ.
21 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ಸೇರಿದಂತೆ ಹಲವು ಸೇವಾ ಚಟುವಟಿಕೆಗಳ ಮೂಲಕ ಭಕ್ತರ ಭಕ್ತಿ ಮತ್ತು ಸಾಮಾಜಿಕ ಸಹಭಾಗಿತ್ವಕ್ಕೆ ಸಾಕ್ಷಿಯಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಯುವಕರು ಹಾಗೂ ಭಕ್ತರು ಪಾಲ್ಗೊಳ್ಳುವಂತೆ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ನಿಂಗಪ್ಪ ದಂಧರಗಿ,ಶ್ರೀಶೈಲ ಕರಿಗಾರ ,ಆನಂದ ನಿಂಬಾಳ್ಕರ, ಪರಶುರಾಮ ಭಜಂತ್ರಿ, ಅಮೃತ ಚೌಕಿಮಠ, ಪ್ರಜ್ವಲ ಬಿರಾದರ, ಅಜೀತ್ ಉಪ್ಪಾರ, ಸಾಬಣ್ಣ ಮೇರಕಾರ, ವಿನಾಯಕ ಏಳಗಂಟಿ, ಅಯ್ಯಪ್ಪ ಪೂಜಾರಿ, ರಾಮಚಂದ್ರ ನಲವಡೆ, ರಾಘವೇಂದ್ರ ಭಜಂತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ